Odisha Train Accident: ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತ; ಸಹಾಯವಾಣಿ ಸಂಖ್ಯೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಒಡಿಶಾದಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೆ ಸಂಬಂಧಪಟ್ಟಂತೆ ಸಹಾಯವಾಣಿ ಸಂಖ್ಯೆಗಳ ಸಂಪೂರ್ಣ ಪಟ್ಟಿ ನೀಡಲಾಗಿದ್ದು, ಇಲ್ಲಿದೆ. ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್‌ಡಿಆರ್‌ಎಫ್) ಮೂರು ತಂಡಗಳು ಮತ್ತು ಒಡಿಶಾದ ಡಿಆರ್‌ಎಫ್‌ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

Odisha Train Accident: ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತ; ಸಹಾಯವಾಣಿ ಸಂಖ್ಯೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ
ಓಡಿಸ್ಸಾ ರೈಲು ಅಪಘಾತ ಸಹಾಯವಾಣಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 03, 2023 | 7:47 AM

ಭುವನೇಶ್ವರ: ಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ಬಹನಾಗಾ ರೈಲು ನಿಲ್ದಾಣದ ಬಳಿ 3 ರೈಲು ಮಾರ್ಗಗಳಿದ್ದವು, ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್, ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಳು ಹಳಿ ತಪ್ಪಿ ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (NDRF) ಮೂರು ತಂಡಗಳು ಸಜ್ಜು

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್‌ಡಿಆರ್‌ಎಫ್) ಮೂರು ತಂಡಗಳು ಮತ್ತು ಒಡಿಶಾದ ಡಿಆರ್‌ಎಫ್‌ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕಂದಾಯ ಸಚಿವೆ ಪ್ರಮೀಳಾ ಸ್ವೈನ್ ಮತ್ತು ವಿಶೇಷ ಪರಿಹಾರ ಆಯುಕ್ತ ಸತ್ಯಬ್ರತ ಸಾಹು ಅವರಿಗೆ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಸಂಘಟಿಸಲು ಸೂಚಿಸಿದ್ದರು.

ಇದನ್ನೂ ಓದಿ:Odisha Train Accident: ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ಅಪಘಾತ; 50 ಮಂದಿ ಸಾವು

ಪರಿಸ್ಥಿತಿಯ ಅವಲೋಕನ ನಡೆಸಿರುವ ಪ್ರಧಾನಿ

ಒಡಿಶಾದ ಬಾಲಸೋರ್‌ನಲ್ಲಿ ಪರಿಸ್ಥಿತಿಯ ಅವಲೋಕನ ನಡೆಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದರು. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಅಪಘಾತದಿಂದ ಹಾನಿಗೊಳಗಾದವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದರು.

SWR ನೀಡಲಾದ ಸಹಾಯವಾಣಿ ಸಂಖ್ಯೆಗಳ ಪಟ್ಟಿ ಇಲ್ಲಿದೆ

ಬೆಂಗಳೂರು(Bangalor): 080-22356409

ಬಂಗಾರಪೇಟೆ(Bangarpet): 08153 255253

ಕುಪ್ಪಂ(Kuppam): 8431403419

ಎಸ್​ಎಮ್​ವಿಬಿ(SMVB) : 09606005129

ಕೆಜೆಎಮ್​(KJM):+91 88612 03980

ಭದ್ರಕ್(Bhadrak): 8455889900

ಜಾಜ್ಪುರ್ ಕಿಯೋನಿಹಾರ್ ರಸ್ತೆ(Jajpur Keonihar Road): 8455889906

ಕಟಕ್(Cuttack): 8455889917

ಭುವನೇಶ್ವರ(Bhubaneswar): 8455889922

ಖುರ್ದಾ ರಸ್ತೆ(Khurda Road): 6370108046

ಬ್ರಹ್ಮಪುರ(Brahmapur): 89173887241

ಬಾಳುಗಾಂವ್(Balugaon): 9937732169

ಪಲಾಸ(Palasa): 8978881006

ಹೌರಾ ಸಹಾಯವಾಣಿ ಸಂಖ್ಯೆ(Howrah Helpline Number): 033-26382217

Published On - 7:27 am, Sat, 3 June 23

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ