ಒಡಿಶಾ: ಬೀಚ್​​ಗೆ ಔಟಿಂಗ್ ಹೋಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಬೀಚ್ ಔಟಿಂಗ್ ಹೋಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ. ಆಕೆಯ ಸ್ನೇಹಿತನನ್ನು ಕಟ್ಟಿಹಾಕಿ, ಆತನ ಎದುರೇ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಯುವತಿ ನೀಡಿರುವ ದೂರಿನ ಪ್ರಕಾರ, ಭಾನುವಾರ ಸಂಜೆ ಆಕೆ ಸ್ನೇಹಿತನೊಂದಿಗೆ ಗೋಪಾಲಪುರ ಸಮುದ್ರ ತೀರಕ್ಕೆ ಹೋಗಿದ್ದರು. ಒಂದು ಸ್ಥಳದಲ್ಲಿ ಏಕಾಂತವಾಗಿ ಕುಳಿತಿದ್ದಾಗ, 10 ಜನ ಪುರುಷರ ಗುಂಪು ಮೂರು ಬೈಕ್​​ಗಳಲ್ಲಿ ಬಂದಿತ್ತು.

ಒಡಿಶಾ: ಬೀಚ್​​ಗೆ ಔಟಿಂಗ್ ಹೋಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಬೀಚ್, ಸಾಂದರ್ಭಿಕ ಚಿತ್ರ

Updated on: Jun 17, 2025 | 12:45 PM

ಭುವನೇಶ್ವರ, ಜೂನ್ 17: ಬೀಚ್​​ಗೆ ಔಟಿಂಗ್ ಹೋಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ. ಆಕೆಯ ಸ್ನೇಹಿತನನ್ನು ಕಟ್ಟಿಹಾಕಿ, ಆತನ ಎದುರೇ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಯುವತಿ ನೀಡಿರುವ ದೂರಿನ ಪ್ರಕಾರ, ಭಾನುವಾರ ಸಂಜೆ ಆಕೆ ಸ್ನೇಹಿತನೊಂದಿಗೆ ಗೋಪಾಲಪುರ ಸಮುದ್ರ ತೀರಕ್ಕೆ ಹೋಗಿದ್ದರು. ಒಂದು ಸ್ಥಳದಲ್ಲಿ ಏಕಾಂತವಾಗಿ ಕುಳಿತಿದ್ದಾಗ, 10 ಜನ ಪುರುಷರ ಗುಂಪು ಮೂರು ಬೈಕ್​​ಗಳಲ್ಲಿ ಬಂದಿತ್ತು.

ಆ ಗುಂಪು ಇಬ್ಬರ ಫೋಟೊಗಳನ್ನು ತೆಗೆಯಲು ಪ್ರಾರಂಭಿಸಿದ್ದರು. ಬಳಿಕ ಆ ಫೋಟೊಗಳನ್ನು ಆನ್​​ಲೈನ್​ನಲ್ಲಿ ಪೋಸ್ಟ್​ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಂತರ ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ, ಆತನ ಕೈಗಳನ್ನು ಕಟ್ಟಿ, ಯುವತಿಯನ್ನು ನಿರ್ಜನ ಪ್ರದೇಶದಲ್ಲಿರುವ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಘಟನೆ ಬಳಿಕ ಹೇಗೋ ತಪ್ಪಿಸಿಕೊಂಡು ಯುವತಿ ಮತ್ತು ಆಕೆಯ ಸ್ನೇಹಿತ ಗೋಪಾಲಪುರ ಪೊಲೀಸ್ ಠಾಣೆ ತಲುಪಿ ಘಟನೆ ಬಗ್ಗೆ ವಿವರಿಸಿದ್ದಾರೆ. ಪೊಲೀಸರು ತಕ್ಷಣ ತನಿಖೆ ಆರಂಭಿಸಿ ಅಪರಾಧ ಸ್ಥಳಕ್ಕೆ ಭೇಟಿ ನೀಡಿದರು.

ಮತ್ತಷ್ಟು ಓದಿ: ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ. ಆರೋಪಿಗಳೆಲ್ಲರೂ ವಯಸ್ಕರು ಮತ್ತು ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಇತರರ ಭಾಗಿಯಾಗುವಿಕೆಯನ್ನು ನಾವು ತಳ್ಳಿಹಾಕುತ್ತಿಲ್ಲ ಎಂದು ಬೆರ್ಹಾಂಪುರ ಎಸ್ಪಿ ಸರವಣ ವಿವೇಕ್ ಎಂ ತಿಳಿಸಿದ್ದಾರೆ.

ಸಂತ್ರಸ್ತೆ ಹಾಗೂ ಶಂಕಿತರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸಂತ್ರಸ್ತೆ ಸ್ಥಿತಿ ಸ್ಥಿರವಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Tue, 17 June 25