ಒಡಿಶಾ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿಸಿಕೊಂಡು ಬಂದು ಟ್ರಕ್ ಚಾಲಕನ ಕೈಗೆ ಸಿಕ್ಕಿ ನರಳಿದ ಬಾಲಕಿ
ಅಪ್ರಾಪ್ತ ಬಾಲಕಿ ಮೇಲೆ ಒಡಿಶಾದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಸ್ನೇಹಿತನ ಹುಟ್ಟುಹಬ್ಬಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ. ಮೂವರು ಆಕೆಯನ್ನು ಅಪಹರಿಸಿ ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಲ್ಲಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರವೆಸಗಿದ್ದರು, ಪೊಲೀಸ್ ಮೂಲಗಳ ಪ್ರಕಾರ ಆಕೆಗೆ ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಲಾಗಿದೆ. ಆಕೆ ಹೇಗೋ ಆ ಕಾಡಿನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಳು. ಅದೇ ರೀತಿ ಮತ್ತೊಂದು ಸಮಸ್ಯೆಗೆ ಸಿಲುಕಿದ್ದಳು. ಮಲ್ಕಂಗಿರಿ ಪಟ್ಟಣದ ಹೊರವಲಯದಲ್ಲಿ, ಮೊದಲ ದಾಳಿಕೋರರಿಂದ ತಪ್ಪಿಸಿಕೊಂಡ ನಂತರ ಟ್ರಕ್ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ

ಒಡಿಶಾ, ಜುಲೈ 23: ಒಂದೇ ದಿನ ಅಪ್ರಾಪ್ತೆ ಮೇಲೆ ಬೇರೆ ಬೇರೆ ವ್ಯಕ್ತಿಗಳಿಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಬಾಲಕಿ ತನ್ನ ಸ್ನೇಹಿತ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಆಕೆಯನ್ನು ಅಪಹರಿಸಿ ಮಲ್ಕನ್‌ಗಿರಿ ಪಟ್ಟಣದಿಂದ 10-15 ಕಿ.ಮೀ ದೂರದಲ್ಲಿರುವ ಅರಣ್ಯ ಪ್ರದೇಶಕ್ಕೆ ಎಳೆದೊಯ್ದಿದ್ದರು.
ಅಲ್ಲಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರವೆಸಗಿದ್ದರು, ಪೊಲೀಸ್ ಮೂಲಗಳ ಪ್ರಕಾರ ಆಕೆಗೆ ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಲಾಗಿದೆ. ಆಕೆ ಹೇಗೋ ಆ ಕಾಡಿನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಳು. ಅದೇ ರೀತಿ ಮತ್ತೊಂದು ಸಮಸ್ಯೆಗೆ ಸಿಲುಕಿದ್ದಳು. ಮಲ್ಕಂಗಿರಿ ಪಟ್ಟಣದ ಹೊರವಲಯದಲ್ಲಿ, ಮೊದಲ ದಾಳಿಕೋರರಿಂದ ತಪ್ಪಿಸಿಕೊಂಡ ನಂತರ ಟ್ರಕ್ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಸ್ಥಳೀಯರು ಚಾಲಕನ ಮೇಲೆ ಅನುಮಾನ ಪಟ್ಟು ಅವನೊಂದಿಗಿರುವ ಅಪ್ರಾಪ್ತ ಬಾಲಕಿಯನ್ನು ಗಮನಿಸಿ ಆಕೆಯನ್ನು ರಕ್ಷಿಸಿದ್ದಾರೆ. ಮಲ್ಕಂಗಿರಿ ಪೊಲೀಸರು ತನಿಖೆ ನಡೆಸಿ ಟ್ರಕ್ ಚಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲ ಅತ್ಯಾಚಾರ ಘಟನೆ ಮಲ್ಕನ್‌ಗಿರಿ ಪಟ್ಟಣದಿಂದ ಸುಮಾರು 10-15 ಕಿಲೋಮೀಟರ್ ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ಟ್ರಕ್ ಚಾಲಕ ಸೇರಿದಂತೆ ನಾಲ್ವರು ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ.
ಮತ್ತಷ್ಟು ಓದಿ: ಬಿಹಾರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ
ಜುಲೈ 12 ರಂದು ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನಲ್ಲಿ ಶಿಕ್ಷಕಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ 20 ವರ್ಷದ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಆಂತರಿಕ ವಿಚಾರಣಾ ಸಮಿತಿಯು ಆಕೆಯ ದೂರನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.
ಎರಡು ದಿನಗಳ ನಂತರ ಆಕೆ ಸಾವನ್ನಪ್ಪಿದ್ದಳು. ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ 15 ವರ್ಷದ ಹಾಕಿ ತರಬೇತಿ ವಿದ್ಯಾರ್ಥಿನಿಯನ್ನು ಈ ತಿಂಗಳ ಆರಂಭದಲ್ಲಿ ಲಾಡ್ಜ್‌ವೊಂದರಲ್ಲಿ ಆಕೆಯ ಕೋಚ್ ಮತ್ತು ಇಬ್ಬರು ಸಹಚರರು ಅಪಹರಿಸಿ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಂಧಿತನಾದ ನಾಲ್ಕನೇ ವ್ಯಕ್ತಿಯನ್ನು ಬಿಡುಗಡೆ ಮಾಡಲಾಯಿತು. ಘಟನೆಯನ್ನು ಬಹಿರಂಗಪಡಿಸಿದರೆ ಬಾಲಕಿಯನ್ನು ಕೊಲ್ಲುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎಂದು ವರದಿಯಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು ಮತ್ತು ನ್ಯಾಯಾಲಯದಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ