ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಘಡ್​ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 02, 2021 | 1:06 PM

ಭುವನೇಶ್ವರ: ಕೆಂಪಿರುವೆ ಮತ್ತು ಅವುಗಳ ಮೊಟ್ಟೆಯಿಂದ ತಯಾರಿಸಲಾಗುವ ಚಟ್ನಿ ಕೊರೊನಾಕ್ಕೆ ಮದ್ದಾಗಲಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕುರಿತು ಶೀಘ್ರದಲ್ಲಿಯೇ ಆಯುಷ್​ ಸಚಿವಾಲಯ ಸ್ಪಷ್ಟನೆ ನೀಡಲಿದೆ. ಈ ಕುರಿತು ಒಡಿಶಾ ಹೈಕೋರ್ಟ್ ಆಯುಷ್​ ಸಚಿವಾಲಯ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿಗೆ ನಿರ್ದೇಶನ ನೀಡಿದ್ದು, 3 ತಿಂಗಳೊಳಗೆ ಮಾಹಿತಿ ನೀಡುವಂತೆ ತಿಳಿಸಿದೆ.

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಗಡ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ. ಆದ್ದರಿಂದ ಇದು ಕೊರೊನಾಕ್ಕೂ ರಾಮಬಾಣ ಎಂದು ಹೇಳಿದ್ದರು.

ಕೆಂಪಿರುವೆ ಚಟ್ನಿಯಲ್ಲಿ ಫಾರ್ಮಿಕ್ ಆ್ಯಸಿಡ್, ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್​ ಬಿ12, ಜಿಂಕ್ ಮತ್ತು ಕಬ್ಬಿಣಾಂಶ ಅಧಿಕವಾಗಿರುತ್ತದೆ. ಇದು ಆರೋಗ್ಯ ವರ್ಧನೆಗೆ ಸಹಕಾರಿ ಮತ್ತು ಕೊವಿಡ್​ ಕಾಯಿಲೆಗೆ ಪರಿಣಾಮಕಾರಿ ಮದ್ದು ಎಂಬ ವಿಷಯದ ಕುರಿತು ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಇದೀಗ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಲು ಆಯುಷ್ ಸಚಿವಾಲಯಕ್ಕೆ ಒಡಿಶಾ ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾದಿಂದ ಕಂಗೆಟ್ಟ ವರ್ಷದಲ್ಲಿ ಸೋಂಕಿಗಿಂತಲೂ ವೇಗವಾಗಿ ಹರಡಿದ್ದು ಕೋವಿಡ್-19 ರೋಗದ ಬಗ್ಗೆ ತಪ್ಪು ಮಾಹಿತಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ