ಭುವನೇಶ್ವರ: ಭುವನೇಶ್ವರದಲ್ಲಿ ಆಘಾತಕಾರಿ ಘಟನೆಯೊಂದು (Shocking News) ನಡೆದಿದ್ದು, ಭ್ರಷ್ಟಾಚಾರದ ಬಗ್ಗೆ ಸುದ್ದಿ ಪ್ರಕಟಿಸಿದ್ದಕ್ಕಾಗಿ ಒಡಿಶಾದ ಬಾಲಸೋರ್ ಜಿಲ್ಲೆಯ ಪತ್ರಕರ್ತನನ್ನು ಇಲ್ಲಿನ ನೀಲಗಿರಿ ಪೊಲೀಸ್ ಠಾಣೆಯ ಪೊಲೀಸರು ಆಸ್ಪತ್ರೆಯ ಹಾಸಿಗೆಗೆ ಕಟ್ಟಿಹಾಕಿದ್ದಾರೆ. ಬಾಲಸೋರ್‌ನ ಸ್ಥಳೀಯ ಮಾಧ್ಯಮ ಸಂಸ್ಥೆಯೊಂದರ ವರದಿಗಾರ ಲೋಕನಾಥ್ ದಲೇಯ್ ಎಂಬಾತನನ್ನು ಪೋಲೀಸರಿಗೆ ಥಳಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಮೂಲಗಳ ಪ್ರಕಾರ, ಗೃಹರಕ್ಷಕ ದಳದ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಬೆಳಗ್ಗೆ ನೀಲಗಿರಿ ಪೊಲೀಸರು ಠಾಣೆಗೆ ಕರೆದಿದ್ದರು. ನಂತರ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಪೊಲೀಸರಿಂದ ಹಲ್ಲೆಗೊಳಗಾಗಿದ್ದರಿಂದ ಪತ್ರಕರ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಅವರ ಕಾಲುಗಳನ್ನು ಕೈಕೋಳದಿಂದ ಬಂಧಿಸಿ, ಆಸ್ಪತ್ರೆಯ ಬೆಡ್‌ಗೆ ಕಬ್ಬಿಣದ ಸರಪಳಿಯಿಂದ ಕಟ್ಟಲಾಗಿತ್ತು. ಪತ್ರಕರ್ತ ಆಸ್ಪತ್ರೆಯ ಬೆಡ್ ಮೇಲೆ ಬೇಡಿ ಹಾಕಿಕೊಂಡು ಮಲಗಿರುವ ಪತ್ರಕರ್ತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಏ. 4ರಂದು ಗೃಹ ರಕ್ಷಕ ದಳದ ಸಿಬ್ಬಂದಿ ನಿರಂಜನ್ ರಾಣಾ ನೀಲಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕರ್ತವ್ಯದಲ್ಲಿದ್ದಾಗ ಪತ್ರಕರ್ತ ತನ್ನನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸಿ, ಹೊಡೆದು, ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಕರ್ತನನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ನಂತರ ಸ್ಥಳೀಯ ಪೊಲೀಸರು ಪತ್ರಕರ್ತನನ್ನು ಥಳಿಸಿದ್ದಾರೆ.
Odisha | Loknath Dalei, a journalist in Balasore was seen chained to a hospital bed by his leg, allegedly by Police reportedly over the publication of news regarding corruption in the Nilgiri PS area of the district.
Odisha Police DGP has ordered an inquiry into this matter. pic.twitter.com/sFJxnIab44
— ANI (@ANI) April 8, 2022
ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ನೀಲಗಿರಿ ಪೊಲೀಸ್ ಠಾಣೆಯ ಎರಡನೇ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಒಡಿಶಾದ ಹಿರಿಯ ಪತ್ರಕರ್ತನ ವಿರುದ್ಧ ನಡೆದ ಪೊಲೀಸ್ ದೌರ್ಜನ್ಯವನ್ನು ಪತ್ರಕರ್ತರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ, ಇದಕ್ಕೆ ಕಾರಣರಾದ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದೆ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ಭೇದಗಳನ್ನು ಗೌರವಿಸಬೇಕು. ಆದರೆ ಅಪರಾಧಿಯಂತೆ ಪತ್ರಕರ್ತನಿಗೆ ಕೈಕೋಳ ಹಾಕುವುದು ಸ್ವಸ್ಥ ಸಮಾಜದಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.
ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಧರ್ಮೇಂದ್ರ ಪ್ರಧಾನ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Crime News: ರಾತ್ರಿ ಬಸ್ನಲ್ಲಿ ಮೈ-ಕೈ ಮುಟ್ಟಿದವನಿಗೆ ಪಿನ್ನಲ್ಲಿ ಚುಚ್ಚಿ, ಪೊಲೀಸ್ ಠಾಣೆಗೆ ಎಳೆದೊಯ್ದ ಮಹಿಳೆ
Crime News: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ; ಬಳಿಕ ಮನೆ ಬಳಿ ಶವ ಎಸೆದು ಪರಾರಿ