AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Minister Attacked: ಒಡಿಶಾ ಸಚಿವ ನಬ ದಾಸ್ ಮೇಲೆ ಗುಂಡಿನ ದಾಳಿ, ಗಂಭೀರ ಗಾಯ

Nab Das Shot At By ASI: ಒಡಿಶಾದ ಆರೋಗ್ಯ ಸಚಿವ ನವಕಿಶೋರ್ ದಾಸ್ ಮೇಲೆ ಐಎಸ್​ಐವೊಬ್ಬರು ಗುಂಡಿನ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆಗೆ ಝಾರಸುಗುಡ ಜಿಲ್ಲೆಯಲ್ಲಿ ಸಂಭವಿಸಿದೆ.

Odisha Minister Attacked: ಒಡಿಶಾ ಸಚಿವ ನಬ ದಾಸ್ ಮೇಲೆ ಗುಂಡಿನ ದಾಳಿ, ಗಂಭೀರ ಗಾಯ
ನಬ ಕಿಶೋರ್ ದಾಸ್
TV9 Web
| Edited By: |

Updated on:Jan 29, 2023 | 1:50 PM

Share

ಭುವನೇಶ್ವರ್: ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಗುಂಡಿನ ದಾಳಿಯಾಗಿ, ಅವರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಈ ಘಟನೆ ಸಂಭವಿಸಿದೆ. ಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದರೆಂಬ ಮಾಹಿತಿಯನ್ನು ಕೆಲ ವರದಿಗಳು ನೀಡಿವೆ.

ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರೆನಿಸಿರುವ ನಬ ದಾಸ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿದೆ. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಝಾರಸುಗುಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವ್ ಕಿಶೋರ್ ದಾಸ್ ಮೇಲೆ ನಡೆದ ದಾಳಿಯು ಪೂರ್ವಯೋಜಿತ ಕೃತ್ಯ ಎಂದು ಶಂಕಿಸಲಾಗಿದೆ. ಆದರೆ, ಯಾವ ಕಾರಣಕ್ಕಾಗಿ ಇವರ ಮೇಲೆ ಗುಂಡಿನ ದಾಳಿ ಮಾಡಲಾಯಿತು ಎಂಬುದು ಗೊತ್ತಾಗಿಲ್ಲ. ಚುನಾವಣೆಯ ಹೊಸ್ತಿಲಲ್ಲಿ ಈ ಘಟನೆ ನಡೆದಿರುವುದರಿಂದ ರಾಜಕೀಯದ ಕಮಟು ವಾಸನೆ ಇದೆ ಎಂಬ ಅಭಿಪ್ರಾಯ ಇದೆ.

ನಬ್ ದಾಸ್ ಮೇಲೆ ಆರೋಪಿಯು ನಾಲ್ಕೈದು ಸುತ್ತು ಗುಂಡಿನ ದಾಳಿ ಮಾಡಿದ್ದಾನೆ. ಎರಡು ಗುಂಡಗಳು ಎದೆಗೆ ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಆರೋಪಿಯಾಗಿರುವ ಎಎಸ್​ಐ ಗೋಪಾಲ್ ಚಂದ್ರ ದಾಸ್​ನನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

ನಬ ಕಿಶೋರ್ ದಾಸ್ ಅವರು ಇತ್ತೀಚೆಗೆ ಮಹಾರಾಷ್ಟ್ರದ ಶನಿ ಶಿಂಗನಾಪುರ ದೇವಸ್ಥಾನಕ್ಕೆ ಒಂದು ಕೋಟಿ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಸುದ್ದಿಯಲ್ಲಿದ್ದರು.

Published On - 1:39 pm, Sun, 29 January 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!