ರಾಜ್ಯಸಭಾ ಸದಸ್ಯತ್ವಕ್ಕೆ ಒಡಿಶಾ ಬಿಜೆಡಿ ನಾಯಕಿ ಮಮತಾ ಮೊಹಾಂತಾ ರಾಜೀನಾಮೆ; ಬಿಜೆಪಿ ಸೇರ್ಪಡೆ ಸಾಧ್ಯತೆ
Mamata Mohanta: ಬಿಜು ಜನತಾ ದಳ (ಬಿಜೆಡಿ) ಪಕ್ಷಕ್ಕೆ ರಾಜ್ಯಸಭೆಯಲ್ಲಿ ಗಮನಾರ್ಹ ಹಿನ್ನಡೆಯಾಗಿದ್ದು, ಬಿಜೆಡಿ ಸಂಸದೆ ಮಮತಾ ಮೊಹಾಂತ ಇಂದು ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳುವ 2 ವರ್ಷಗಳ ಮೊದಲೇ ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಬಿಜೆಡಿ ನಾಯಕಿ ಮಮತಾ ಮೊಹಾಂತ ಅವರ ರಾಜೀನಾಮೆಯನ್ನು ಮೇಲ್ಮನೆಯ ಅಧ್ಯಕ್ಷರು ಇಂದು (ಜುಲೈ 31) ಅಂಗೀಕರಿಸಿದ್ದಾರೆ.
ನವದೆಹಲಿ: ಬಿಜೆಡಿ ನಾಯಕಿ ಮಮತಾ ಮೊಹಾಂತ ತಮ್ಮ ಅಧಿಕಾರಾವಧಿ ಮುಗಿಯುವ ಮೊದಲೇ ಇಂದು ರಾಜ್ಯಸಭಾ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ರಾಜೀನಾಮೆ ಪತ್ರ ಸ್ವೀಕರಿಸಿರುವುದಾಗಿ ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧಂಖರ್ ತಿಳಿಸಿದ್ದಾರೆ. “ಮಮತಾ ಮೊಹಾಂತ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ವೈಯಕ್ತಿಕವಾಗಿ ನನಗೆ ಹಸ್ತಾಂತರಿಸಿದ್ದಾರೆ. ಅದು ಸಾಂವಿಧಾನಿಕವಾಗಿ ಕ್ರಮಬದ್ಧವಾಗಿದೆ ಎಂದು ನಾನು ಕಂಡುಕೊಂಡಿದ್ದೇನೆ. ಒಡಿಶಾ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯಸಭಾ ಸದಸ್ಯೆ ಮಮತಾ ಮೊಹಾಂತ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದೇನೆ” ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.
ಬಿಜೆಪಿ ಸೇರುವ ಸಾಧ್ಯತೆ:
ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಮತಾ ಮೊಹಾಂತಾ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಇಂದು ತಿಳಿಸಿವೆ. ಮೊಹಾಂತ ಅವರಿಂದ ರಾಜೀನಾಮೆ ಪತ್ರವನ್ನು ಇಂದು ಸ್ವೀಕರಿಸಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಗೆ ಇನ್ನು ಬೆಂಬಲವಿಲ್ಲ, ನಾವು ವಿರೋಧ ಪಕ್ಷ : ನವೀನ್ ಪಟ್ನಾಯಕ್
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಮಮತಾ ಮೊಹಾಂತಾ ರಾಜೀನಾಮೆಯ ನಂತರ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದೆ ಎನ್ನಲಾಗಿದೆ.
ମୁଁ ଆଜି ରାଜ୍ୟସଭା ସଦସ୍ୟ ପଦରୁ ଇସ୍ତଫା ଦେଇଛି । ବିଜୁ ଜନତା ଦଳର ସଭାପତି ଶ୍ରୀ ନବୀନ ପଟ୍ଟନାୟକଙ୍କ ପାଖକୁ ମଧ୍ୟ ଇସ୍ତଫା ପତ୍ର ପଠାଇ ଦେଇଛି । ମୋତେ ଜିଲ୍ଲା ପରିଷଦର ସଦସ୍ୟ ଓ ରାଜ୍ୟସଭାର ସଦସ୍ୟ ଭାବେ ସେ ମନୋନୀତ କରି ମୋର ଜିଲ୍ଲା ମୟୂରଭଞ୍ଜ ଓ ରାଜ୍ୟର ସେବା କରିବା ପାଇଁ ସୁଯୋଗ ଦେଇଥିଲେ । pic.twitter.com/7Y6KLiuel9
— MP Mamata Mohanta (@MamataMohanta5) July 31, 2024
ಮಮತಾ ಮೊಹಾಂತ ರಾಜೀನಾಮೆ ಪತ್ರ:
ರಾಜ್ಯಸಭಾ ಅಧ್ಯಕ್ಷರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ಮಮತಾ ಮೊಹಾಂತಾ ಅವರು, “ರಾಜ್ಯಸಭೆಯ ಸದಸ್ಯತ್ವಕ್ಕೆ ನಾನು ಇಂದು, ಅಂದರೆ ಜುಲೈ 31ರಂದು ರಾಜೀನಾಮೆ ನೀಡುತ್ತೇನೆ. ನಾನು ಈ ನಿರ್ಧಾರವನ್ನು ಪ್ರಜ್ಞಾಪೂರ್ವಕವಾಗಿ ತೆಗೆದುಕೊಂಡಿದ್ದೇನೆ” ಎಂದು ಬರೆದಿದ್ದಾರೆ.
ಮಮತಾ ಮೊಹಾಂತಾ ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ತಮ್ಮ ರಾಜೀನಾಮೆಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇಂದು ನಾನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಬಿಜು ಜನತಾದಳ ಪಕ್ಷದ ಅಧ್ಯಕ್ಷರು ಜಿಲ್ಲಾ ಪರಿಷತ್ ಸದಸ್ಯೆ ಹಾಗೂ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆ ಮಾಡಿ ಜಿಲ್ಲೆಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ” ಎಂದಿದ್ದಾರೆ.
ನವೀನ್ ಪಟ್ನಾಯಕ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಮಮತಾ ಮೊಹಾಂತಾ ಅವರು, “ನಾನು ಇಂದು ಬಿಜು ಜನತಾ ದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಜನರಿಗೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ನಿಮಗೆ ನಾನು ಪ್ರಾಮಾಣಿಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜು ಜನತಾ ದಳದಲ್ಲಿ ನನ್ನ ಮತ್ತು ನನ್ನ ಸಮುದಾಯದ ಸೇವೆಗಳ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ, ನಾನು ಸಾರ್ವಜನಿಕ ಹಿತಾಸಕ್ತಿಯಿಂದ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ” ಎಂದು ಮಮತಾ ಮೊಹಾಂತಾ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ