AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟ, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಪುರಿಯಲ್ಲಿ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಚಂದನ್ ಯಾತ್ರೆ ಆಚರಣೆಯ ಅಂಗವಾಗಿ ನರೇಂದ್ರ ಕೊಳದಲ್ಲಿ ನಡೆದ ಟ್ರಿನಿಟಿಯ ಚಾಪಾ ಖೇಲಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಒಡಿಶಾ: ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟ, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ನಯನಾ ರಾಜೀವ್
|

Updated on: May 30, 2024 | 9:27 AM

Share

ಒಡಿಶಾದ ಪುರಿಯಲ್ಲಿ ಜಗನ್ನಾಥ ಉತ್ಸವ(Jagannath Utsav) ದ ಸಂದರ್ಭದಲ್ಲಿ ಪಟಾಕಿ ಸ್ಫೋಟ(Firecrackers Explosion)ಗೊಂಡು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಚಂದನ್ ಯಾತ್ರೆ ಆಚರಣೆಯ ಅಂಗವಾಗಿ ನರೇಂದ್ರ ಕೊಳದಲ್ಲಿ ನಡೆದ ಟ್ರಿನಿಟಿಯ ಚಾಪಾ ಖೇಲಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಮೂಲಗಳ ಪ್ರಕಾರ ಕೆರೆಯ ದೇವಿ ಘಾಟ್ ಬದಿಯಲ್ಲಿ ಪಟಾಕಿ ಸಿಡಿಸಲು ಅವಕಾಶವಿತ್ತು. ದುರದೃಷ್ಟವಶಾತ್, ಸಿಡಿದ ಪಟಾಕಿಗಳ ಕಿಡಿಗಳು ಪವಿತ್ರ ಕೊಳದಲ್ಲಿ ಜಲಕ್ರೀಡೆಯನ್ನು ವೀಕ್ಷಿಸಲು ನೆರೆದಿದ್ದ ಭಕ್ತರ ಮೇಲೆ ಬಿದ್ದವು.

ಗಾಯಾಳುಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ವಾರ್ಡ್‌ಗೆ ಸ್ಥಳಾಂತರಿಸುವ ಮೊದಲು ರೋಗಿಗಳನ್ನು ಹೊರಾಂಗಣ ವಿಭಾಗದಲ್ಲಿ ಚಿಕಿತ್ಸೆ ನೀಡಲಾಯಿತು. 18ಕ್ಕೂ ಹೆಚ್ಚು ಗಂಭೀರ ರೋಗಿಗಳನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡಿನ ಶಿವಕಾಶಿಯ ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು

ಕೆಲವು ರೋಗಿಗಳನ್ನು ಹೆಚ್ಚಿನ ವಿಶೇಷ ಆರೈಕೆಗಾಗಿ ಕಟಕ್ ಮತ್ತು ಭುವನೇಶ್ವರದ ಆಸ್ಪತ್ರೆಗಳಿಗೆ ವರ್ಗಾಯಿಸಬೇಕಾಯಿತು. ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ರೋಗಿಗಳನ್ನು ಸ್ಥಳಾಂತರಿಸಲಾಗುತ್ತಿದೆ ಎಂದರು.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಅವರ ಚಿಕಿತ್ಸೆಯ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಿಎಂ ನವೀನ್ ಪಟ್ನಾಯಕ್ ಎಕ್ಸ್​ನಲ್ಲಿ ಬರೆದಿದ್ದಾರೆ.

ಗಾಯಾಳುಗಳ ಎಲ್ಲಾ ವೈದ್ಯಕೀಯ ವೆಚ್ಚಗಳನ್ನು ಭರಿಸಲಾಗುವುದು. ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಾ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ