AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

Odisha SCB hospital ICU massive fire breakout, 10 patients killed: ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ
ಎಸ್​ಸಿಬಿ ಆಸ್ಪತ್ರೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 16, 2026 | 8:09 AM

Share

ಕಟಕ್, ಮಾರ್ಚ್ 16: ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ (SCB Medical College & Hospital) ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು (Fire Accident) ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.

ಘಟನೆ ಬಗ್ಗೆ ಎಎನ್​ಐ ಸುದ್ದಿಸಂಸ್ಥೆ ವರದಿ

ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ

ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!