ಗರ್ಭ ಧರಿಸಿದ್ದೇ ಗೊತ್ತಿಲ್ಲದೆ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ

|

Updated on: Feb 25, 2025 | 9:31 PM

ಒಡಿಶಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮಲ್ಕನ್‌ಗಿರಿಯಲ್ಲಿರುವ ಸರ್ಕಾರಿ ಶಾಲೆಯ ಹಾಸ್ಟೆಲ್‌ನಲ್ಲಿ 10ನೇ ತರಗತಿಯ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಪೊಲೀಸರ ಪ್ರಕಾರ, ಸೋಮವಾರ ಬೋರ್ಡ್ ಪರೀಕ್ಷೆ ಬರೆದು ಹಾಸ್ಟೆಲ್‌ಗೆ ಹಿಂತಿರುಗಿದ ನಂತರ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ನಡೆದ ನಂತರ ತನಿಖೆಗೆ ಆದೇಶಿಸಲಾಗಿದೆ.

ಗರ್ಭ ಧರಿಸಿದ್ದೇ ಗೊತ್ತಿಲ್ಲದೆ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ
Baby Girl
Follow us on

ಭುವನೇಶ್ವರ: ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ನಂತರ ತನಿಖೆ ಆರಂಭಿಸಲಾಗಿದೆ. ಬೋರ್ಡ್ ಪರೀಕ್ಷೆ ಬರೆದು ಹಾಸ್ಟೆಲ್‌ಗೆ ವಾಪಾಸ್ ಬಂದಿದ್ದ ಬಾಲಕಿಗೆ ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡಾಗ ಈ ಘಟನೆ ಬೆಳಕಿಗೆ ಬಂದಿದೆ. ಇಂದು ಪೊಲೀಸರು ಈ ಘಟನೆಯನ್ನು ದೃಢಪಡಿಸಿದ್ದು, ಈ ಘಟನೆಗೆ ಕಾರಣವಾದ ಸಂದರ್ಭಗಳನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಶಾಲಾ ಆಡಳಿತ ಮತ್ತು ಹಾಸ್ಟೆಲ್ ಮೇಲ್ವಿಚಾರಣೆಯಲ್ಲಿನ ಲೋಪಗಳ ಬಗ್ಗೆಯೂ ಶಾಲಾ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

“ಹುಡುಗಿಯರ ಹಾಸ್ಟೆಲ್‌ನಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಅವಳು ಹೇಗೆ ಗರ್ಭಿಣಿಯಾದಳು ಎಂಬುದೇ ನಮಗೆ ತಿಳಿದಿಲ್ಲ. ಆರೋಗ್ಯ ಕಾರ್ಯಕರ್ತರು ಹಾಸ್ಟೆಲ್‌ನಲ್ಲಿ ವಾಸಿಸುವ ಎಲ್ಲಾ ವಿದ್ಯಾರ್ಥಿಗಳನ್ನು ವಾರಕ್ಕೊಮ್ಮೆ ತಪಾಸಣೆ ಮಾಡಬೇಕು. ಆದರೆ, ಆರೋಗ್ಯ ಕಾರ್ಯಕರ್ತೆ ತನ್ನ ಕೆಲಸವನ್ನು ಮಾಡುತ್ತಿಲ್ಲ ಎಂದು ಈ ಘಟನೆಯಿಂದ ಸಾಬೀತಾಗಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರಾತ್ರಿ 10 ಗಂಟೆಯವರೆಗೂ ಗರ್ಭಿಣಿಯನ್ನು ಠಾಣೆಯೊಳಗೆ ಕೂರಿಸಿಕೊಂಡ ಪೊಲೀಸರು

ಬಾಲಕಿ ಮತ್ತು ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಮಲ್ಕನ್‌ಗಿರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ. ಬಾಲಕಿಗೆ ಹೆರಿಗೆಯಾಗುವವರೆಗೂ ಗರ್ಭ ಧರಿಸಿರುವುದು ಯಾಕೆ ಯಾರಿಗೂ ಗೊತ್ತಾಗಲಿಲ್ಲ ಎಂದು ಆಕೆಯ ಪೋಷಕರು ಶಾಲಾ ಅಧಿಕಾರಿಗಳಿಂದ ತಿಳಿದುಕೊಳ್ಳಲು ಪ್ರಯತ್ನಿಸಿದರು. ರಜೆಯ ಸಮಯದಲ್ಲಿ ಮನೆಗೆ ಹೋದಾಗ ಬಾಲಕಿ ಗರ್ಭಿಣಿಯಾಗಿರುವ ಸಾಧ್ಯತೆಯಿದೆ ಎಂದು ಜಿಲ್ಲಾ ಕಲ್ಯಾಣ ಅಧಿಕಾರಿ ಶ್ರೀನಿವಾಸ್ ಆಚಾರ್ಯ ಹೇಳಿದ್ದಾರೆ. “ಇಲಾಖೆಯ ವಿಚಾರಣೆ ಈಗಾಗಲೇ ಪ್ರಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ. ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ