AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

ಕಾಲೇಜಿನಲ್ಲಿ ಪ್ರಾಧ್ಯಾಪಕರು ನೀಡಿತ್ತಿದ್ದ ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾಲಸೋರ್​ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.ವಿಭಾಗದ ಮುಖ್ಯಸ್ಥರು ಆಕೆಗೆ ನಿರಂತರ ಲೈಂಗಿಕ ಶೋಷಣೆ ಮಾಡುತ್ತಿದ್ದರು. ಕಾಲೇಜು ಪ್ರಾಂಶುಪಾಲರ ಬಳಿ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಯಾವುದೇ ಕ್ರಮ ಕೈಗೊಳ್ಳದ ಕಾರಣ ಬೇಸರದಿಂದ ಆಕೆ ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದಳು.

ಒಡಿಶಾ: ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು
ಬೆಂಕಿ
ನಯನಾ ರಾಜೀವ್
|

Updated on: Jul 15, 2025 | 7:58 AM

Share

ಭುವನೇಶ್ವರ, ಜುಲೈ 15: ಲೈಂಗಿಕ ಕಿರುಕುಳ ತಾಳಲಾರದೆ ಕಾಲೇಜಿನಲ್ಲಿಯೇ ಬೆಂಕಿ(Fire) ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಲೇಜಿನಲ್ಲಿ ಪ್ರಾಧ್ಯಾಪಕರು ದೀರ್ಘಕಾಲದಿಂದ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಇದರಿಂದ ಬೇಸರಗೊಂಡಿದ್ದ ಆಕೆ ಕಾಲೇಜಿನಲ್ಲೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಬೆಂಕಿ ಹಚ್ಚಿಕೊಂಡಿದ್ದರು.

ಬಾಲಸೋರ್​ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.ವಿಭಾಗದ ಮುಖ್ಯಸ್ಥರು ಆಕೆಗೆ ನಿರಂತರ ಲೈಂಗಿಕ ಶೋಷಣೆ ಮಾಡುತ್ತಿದ್ದರು. ಕಾಲೇಜು ಪ್ರಾಂಶುಪಾಲರ ಬಳಿ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಯಾವುದೇ ಕ್ರಮ ಕೈಗೊಳ್ಳದ ಕಾರಣ ಬೇಸರದಿಂದ ಆಕೆ ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದಳು.

ದೇಹವು ಶೇ.90ರಷ್ಟು ಸುಟ್ಟು ಹೋಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಬಾಲಸೋರ್ ಜಿಲ್ಲಾ ಆಸ್ಪತ್ರೆಯಿಂದ ಜುಲೈ 12ರಂದು ವಿದ್ಯಾರ್ಥಿಯನ್ನು ಭುವನೇಶ್ವರದ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.ವೆಂಟಿಲೇಟರ್​​ನಲ್ಲಿ ಇರಿಸಲಾಗಿತ್ತು. ವೈದ್ಯರು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಿದ್ದರು. ಜುಲೈ 14ರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಓದಿ: ಲೈಂಗಿಕ ಕಿರುಕುಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ

ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಸಹ ವಿದ್ಯಾರ್ಥಿಗಳು ನೀಡಿರುವ ಮಾಹಿತಿ ಪ್ರಕಾರ, ಸಮೀರ್ ಕುಮಾರ್ ಎಂಬ ಪ್ರಾಧ್ಯಾಪಕ ನಿರಂತರವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಅವರು ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದರು.

ಘಟನೆಯ ವಿಡಿಯೋ

ಶನಿವಾರ ಕಾಲೇಜು ಪ್ರಾಂಶುಪಾಲರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ವಿದ್ಯಾರ್ಥಿನಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲ ದಿಲ್ಲಿಪ್ ಕುಮಾರ್ ಘೋಷ್ ಅವರನ್ನು ಬಂಧಿಸಲಾಯಿತು . ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ