AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ತಪ್ಪು ದಿಕ್ಕಿನಲ್ಲಿ ಬಂದು ಟ್ರಕ್​​ಗೆ ಡಿಕ್ಕಿ ಹೊಡೆದ ಬಸ್, 6 ಮಂದಿ ಸಾವು, 10 ಜನರಿಗೆ ಗಾಯ

ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಇಂದು ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತ(Accident) ದಲ್ಲಿ 6 ಮಂದಿ ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದ ಆರು ಜನರಲ್ಲಿ ಮೂವರು ಮಹಿಳೆಯರು.ಕೆ ಬಲಂಗ್ ಪೊಲೀಸ್ ಠಾಣೆ ಬಳಿಯ ರಾಷ್ಟ್ರೀಯ ಹೆದ್ದಾರಿ -520 ರಲ್ಲಿ ಬೆಳಗ್ಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.  ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಚಿಕಿತ್ಸೆ ಪಡೆಯುತ್ತಿರುವಾಗ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪಶ್ಚಿಮ ವಲಯದ ಡಿಐಜಿ ಬ್ರಿಜೇಶ್ ಕುಮಾರ್ ರೈ ತಿಳಿಸಿದ್ದಾರೆ.

ಒಡಿಶಾ: ತಪ್ಪು ದಿಕ್ಕಿನಲ್ಲಿ ಬಂದು ಟ್ರಕ್​​ಗೆ ಡಿಕ್ಕಿ ಹೊಡೆದ ಬಸ್, 6 ಮಂದಿ ಸಾವು, 10 ಜನರಿಗೆ ಗಾಯ
ಒಡಿಶಾ
ನಯನಾ ರಾಜೀವ್
|

Updated on: Sep 26, 2025 | 11:08 AM

Share

ಒಡಿಶಾ, ಸೆಪ್ಟೆಂಬರ್ 26: ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಇಂದು ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತ(Accident) ದಲ್ಲಿ 6 ಮಂದಿ ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದ ಆರು ಜನರಲ್ಲಿ ಮೂವರು ಮಹಿಳೆಯರು.ಕೆ ಬಲಂಗ್ ಪೊಲೀಸ್ ಠಾಣೆ ಬಳಿಯ ರಾಷ್ಟ್ರೀಯ ಹೆದ್ದಾರಿ -520 ರಲ್ಲಿ ಬೆಳಗ್ಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.  ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಚಿಕಿತ್ಸೆ ಪಡೆಯುತ್ತಿರುವಾಗ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪಶ್ಚಿಮ ವಲಯದ ಡಿಐಜಿ ಬ್ರಿಜೇಶ್ ಕುಮಾರ್ ರೈ ತಿಳಿಸಿದ್ದಾರೆ.

ಒಬ್ಬ ಮೃತ ವ್ಯಕ್ತಿಯ ಗುರುತನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ, ಆದರೆ ಐವರ ಗುರುತು ದೃಢಪಟ್ಟಿದೆ. ಮೃತರಲ್ಲಿ ಕರ್ಮಪಾಲ್ ಸಿಂಗ್, ಶಬರ್‌ಬಾಲಾ, ಪುಷ್ಪಾ ಗೋಪಿ, ಸತ್ಯಭಾಮ ಠಾಕೂರ್ ಮತ್ತು ಮೇರಿ ನಾಗ್ ಸೇರಿದ್ದಾರೆ. ಎಲ್ಲಾ ಬಲಿಪಶುಗಳು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಬಸ್ ರೂರ್ಕೆಲಾದಿಂದ ಕೊಯ್ಡಾಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಯ ಒಂದು ಬದಿಯನ್ನು ದುರಸ್ತಿಗಾಗಿ ಮುಚ್ಚಿದ್ದರಿಂದ ಬಸ್ ತಪ್ಪು ಪಥದಲ್ಲಿ ಪ್ರಯಾಣಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಾವೇರಿಯಲ್ಲಿ ಭೀಕರ ಅಪಘಾತ: ಆಡಿ ಕಾರು ಅಪ್ಪಚ್ಚಿ, ದುಬಾರಿ ಕಾರಿನ ಭಯಾನಕ ಫೋಟೋಗಳು

ಗಂಭೀರವಾಗಿ ಗಾಯಗೊಂಡವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಇತರರು ಕೊಯಿಡಾ ಮತ್ತು ಲಹುನಿಪಾದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಐಜಿ ಹೇಳಿದರು.

ಈ ಭೀಕರ ಅಪಘಾತದ ಬಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಸುಂದರ್‌ಗಢದ ಕೆ. ಬಾಲಂಗ್ ಬಳಿ ಸಂಭವಿಸಿದ ದುರಂತ ಅಪಘಾತದಲ್ಲಿ ಹಲವಾರು ಜೀವಗಳು ಬಲಿಯಾದ ಮತ್ತು ಗಾಯಗೊಂಡವರ ಸುದ್ದಿ ಕೇಳಿ ದುಃಖವಾಗಿದೆ.  ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಅಗಲಿದವರ ಆತ್ಮಕ್ಕೆ  ಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿದ್ದಾರೆ.

ನೆಲ್ಲೂರಿನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ 7 ಜನ ಸಾವು

ನೆಲ್ಲೂರಿನ ಸಂಗಮ್ ಮಂಡಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಮನ್ ಬಳಿ ಇಂದು ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಮಗು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮದಿಂದ ವಾಹನವು ಲಾರಿಯ ಕೆಳಗೆ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದವರು ಮೃತಪಟ್ಟಿದ್ದಾರೆ. ಈ ಅಪಘಾತದ ಸಮಯದಲ್ಲಿ ಕಾರು ನೆಲ್ಲೂರಿನಿಂದ ಕಡಪದ ಕಡೆಗೆ ಸಾಗುತ್ತಿತ್ತು.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ದುರಂತ ಅಪಘಾತದ (Accident) ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ಮತ್ತು ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ