Odisha Train Accident: ರೈಲು ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಒಡಿಶಾ ರೈಲು ಅಪಘಾತ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Odisha Train Accident: ರೈಲು ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ
ದ್ರೌಪದಿ ಮುರ್ಮು ಮತ್ತು ಮೋದಿ
Follow us
ಆಯೇಷಾ ಬಾನು
|

Updated on: Jun 03, 2023 | 7:48 AM

ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ(Odisha Train Accident) ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಘಟನೆ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ರೈಲು ದುರಂತದ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರ ಜೊತೆಗೆ ಘಟನೆ ಹಾಗೂ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಸಂತ್ರಸ್ತರಿಗೆ ಎಲ್ಲ ರೀತಿಯ ಬೆಂಬಲ ನೀಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಒಡಿಶಾ ಸಿಎಂ ಸಂತಾಪ

ಒಡಿಶಾ ಸಿಎಂ ನವೀನ್ ಪಟ್ನಾಯಕ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Odisha Train Accident: ರೈಲು ದುರಂತದಿಂದ ಆಘಾತವಾಗಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ; ಪ್ರಧಾನಿ ಮೋದಿ

ರಾಹುಲ್ ಗಾಂಧಿ ಸಂತಾಪ

ರೈಲು ಅಪಘಾತ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಒಡಿಶಾದ ಬಾಲಸೋರ್ ಬಳಿ ನಡೆದಿರುವ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದ ಸುದ್ದಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವಂತೆ ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

ರಾಷ್ಟ್ರಪತಿ ಮುರ್ಮು ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕೂಡ ಘಟನೆ ಸಂಬಂಧ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಕೂಡ ಅಪಘಾತದ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ