AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಒಡಿಶಾ ರೈಲು ಅಪಘಾತದ ತನಿಖೆ ಆರಂಭಿಸಿದ ಸಿಬಿಐ, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ತನಿಖೆಗಾಗಿ ಸಿಬಿಐ ಘಟನಾ ಸ್ಥಳಕ್ಕೆ ತಲುಪಿದೆ. ಜೂನ್ 2 ರಂದು ಸಂಭವಿಸಿದ ಬಾಲಸೋರ್ ರೈಲು ಅಪಘಾತದಲ್ಲಿ ಇದುವರೆಗೆ 278 ಜನರು ಸಾವನ್ನಪ್ಪಿದ್ದಾರೆ.

Odisha Train Accident: ಒಡಿಶಾ ರೈಲು ಅಪಘಾತದ ತನಿಖೆ ಆರಂಭಿಸಿದ ಸಿಬಿಐ, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ
ರೈಲು ಅಪಘಾತ
ನಯನಾ ರಾಜೀವ್
|

Updated on: Jun 06, 2023 | 11:27 AM

Share

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತ(Train Accident)ದ ತನಿಖೆಗಾಗಿ ಸಿಬಿಐ ಘಟನಾ ಸ್ಥಳಕ್ಕೆ ತಲುಪಿದೆ. ಜೂನ್ 2 ರಂದು ಸಂಭವಿಸಿದ ಬಾಲಸೋರ್ ರೈಲು ಅಪಘಾತದಲ್ಲಿ ಇದುವರೆಗೆ 278 ಜನರು ಸಾವನ್ನಪ್ಪಿದ್ದಾರೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಸ್ಟ್ ಕೋಸ್ಟ್ ರೈಲ್ವೆ ಅಧೀನದಲ್ಲಿರುವ ಖುರ್ದಾ ರಸ್ತೆ ವಿಭಾಗದ ಡಿಆರ್‌ಎಂ ರಿಂಕೇಶ್ ರೇ, ತನಗೆ ಬಂದಿರುವ ಮಾಹಿತಿಯ ಪ್ರಕಾರ, ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದ ಕುರಿತು ಸಿಬಿಐ ತನಿಖೆ ಪ್ರಾರಂಭವಾಗಿದೆ ಎಂದು ಹೇಳಿದರು. ಆದರೆ ವಿವರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: Odisha Train Accident: 40 ಪ್ರಯಾಣಿಕರ ಮೃತದೇಹಗಳ ಮೇಲೆ ಒಂದೇ ಒಂದು ಗಾಯದ ಗುರುತು ಕೂಡ ಇರಲಿಲ್ಲ

ಇದಕ್ಕೂ ಮುನ್ನ ರೈಲ್ವೆ ಸುರಕ್ಷತಾ ಆಯುಕ್ತ ಶೈಲೇಶ್ ಕುಮಾರ್ ಪಾಠಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬಹನಾಗಾ ಬಜಾರ್ ರೈಲು ನಿಲ್ದಾಣದ ಕಂಟ್ರೋಲ್ ರೂಂ, ಸಿಗ್ನಲ್ ರೂಂ ಹಾಗೂ ಸಿಗ್ನಲ್ ಪಾಯಿಂಟ್ ಗೂ ಭೇಟಿ ನೀಡಿದರು.

ಜೂನ್ 3 ರಂದು, ರೈಲು ಅಪಘಾತದ ಬಗ್ಗೆ ಭಾರತೀಯ ದಂಡ ಸಂಹಿತೆ ಮತ್ತು ರೈಲ್ವೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಾಲಸೋರ್‌ನ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಪ್ರಕರಣವನ್ನು ದಾಖಲಿಸಿದ್ದಾರೆ. ಮೂವರು ಗಾಯಾಳುಗಳ ಸಾವಿನ ನಂತರ, ಸಾವಿನ ಸಂಖ್ಯೆ 278 ಕ್ಕೆ ಏರಿದೆ.

ಒಡಿಶಾ ರೈಲು ಅಪಘಾತದಲ್ಲಿ ಸೋಮವಾರ ಗಾಯಗೊಂಡ ಮೂವರು ಸಾವನ್ನಪ್ಪಿದ ನಂತರ ಅಧಿಕೃತ ಸಾವಿನ ಸಂಖ್ಯೆ 278 ಕ್ಕೆ ಏರಿದೆ ಎಂದು ರೈಲ್ವೆ ತಿಳಿಸಿದೆ. ಆದಾಗ್ಯೂ, ಒಡಿಶಾ ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಾವಿನ ಸಂಖ್ಯೆ ಇನ್ನೂ 275 ಆಗಿದೆ.

278 ಮೃತ ದೇಹಗಳ ಪೈಕಿ 177 ಮೃತದೇಹಗಳನ್ನು ಗುರುತಿಸಲಾಗಿದೆ. ನಾಪತ್ತೆಯಾದ ಜನರ ಪತ್ತೆಗೆ ರೈಲ್ವೆ ಇಲಾಖೆಯು ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್‌ಗಢ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಜನರನ್ನು ನಿಯೋಜಿಸಿದೆ ಎಂದು ಅವರು ಹೇಳಿದರು.

ಮೃತದೇಹಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂರಕ್ಷಿಸಲಾಗುವುದು ಎಂದರು. 101 ಮೃತದೇಹಗಳನ್ನು ಇನ್ನೂ ಗುರುತಿಸಬೇಕಾಗಿದ್ದು, ಈ ಶವಗಳನ್ನು ಆರು ವಿವಿಧ ಆಸ್ಪತ್ರೆಗಳಲ್ಲಿ ಇರಿಸಲಾಗಿದೆ. ಪಾಲಿಸಿದಾರರ ಅನುಕೂಲಕ್ಕಾಗಿ ಎಸ್‌ಬಿಐ ಲೈಫ್ ಟೋಲ್ ಫ್ರೀ ಸಂಖ್ಯೆ 1800 267 9090 ಅನ್ನು ಸಹ ಬಿಡುಗಡೆ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ