Odisha Train Accident: ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

|

Updated on: Jun 04, 2023 | 11:24 AM

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಒಡಿಶಾ ಮೂಲದ ಕುಟುಂಬಗಳಿಗೆ 5 ಲಕ್ಷ ರೂ ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. ಹಾಗೆಯೇ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ.

Odisha Train Accident: ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ
ರೈಲು ಅಪಘಾತ
Follow us on

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಒಡಿಶಾ ಮೂಲದ ಕುಟುಂಬಗಳಿಗೆ 5 ಲಕ್ಷ ರೂ ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. ಹಾಗೆಯೇ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ಸರ್ಕಾರವು ಈ ರೈಲು ದುರಂತದಲ್ಲಿ ಸಾವನ್ನಪ್ಪಿರುವವರ ಎಲ್ಲಾ ಕುಟುಂಬಕ್ಕೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದೆ.

ಮೃತರ ಪ್ರತಿ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಅಶ್ವಿನಿ ವೈಷ್ಣ ಪ್ರಕಟಿಸಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳುಗೆ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ. ಅನೇಕ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Odisha Train Accident: ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಮತ್ತು ಪಶ್ಚಿಮ ಬಂಗಾಳದ ಶಾಲಿಮರ್ ನಿಲ್ದಾಣದ ನಡುವೆ ಸಂಚರಿಸುತ್ತದೆ. ಬೆಂಗಳೂರಿನ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಪ್ರಯಾಣಿಕ ರೈಲಿಗೆ ಡಿಕ್ಕಿ ಹೊಡೆದ ಬಳಿಕ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಅನೇಕ ಬೋಗಿಗಳು ಹಳಿ ತಪ್ಪಿವೆ. ಇದರಿಂದಾಗಿ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ. ಬಹಾಂಗ ರೈಲ್ವೆ ನಿಲ್ದಾಣದ ಸಮೀಪ ಈ ದುರಂತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ