Odisha Train Accident: ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ, ಶವಾಗಾರದಲ್ಲಿ ಸಂಬಂಧಿಕರ ನರಳಾಟ

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 3 ದಿನಗಳು ಕಳೆದಿವೆ, ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ. ಆಸ್ಪತ್ರೆಯ ಶವಾಗಾರಗಳು ತುಂಬಿವೆ ಹೀಗಾಗಿ ಬಾಸೋರ್​ನ ಶಾಲೆಯೊಂದನ್ನು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ.

Odisha Train Accident: ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ, ಶವಾಗಾರದಲ್ಲಿ ಸಂಬಂಧಿಕರ ನರಳಾಟ
ರೈಲು ಅಪಘಾತImage Credit source: Siasat.com
Follow us
|

Updated on: Jun 06, 2023 | 8:48 AM

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 3 ದಿನಗಳು ಕಳೆದಿವೆ, ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ. ಆಸ್ಪತ್ರೆಯ ಶವಾಗಾರಗಳು ತುಂಬಿವೆ ಹೀಗಾಗಿ ಬಾಸೋರ್​ನ ಶಾಲೆಯೊಂದನ್ನು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಅಪಘಾತದಲ್ಲಿ 275 ಮಂದಿ ಮೃತಪಟ್ಟಿದ್ದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನೂ 101 ಮೃತದೇಹಗಳನ್ನು ಗುರುತಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆಲವು ದೇಹಗಳು ನಜ್ಜುಗುಜ್ಜಾಗಿದೆ, ಇನ್ನೂ ಕೆಲವರ ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ, ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ:Odisha Train Accident: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. 55 ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಿಎಂಸಿಯ ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ. 1929. ಮೃತ ದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ.

ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಹಲವಾರು ಬೋಗಿಗಳು ಪಕ್ಕದ ಟ್ರ್ಯಾಕ್​ನಲ್ಲಿ ಬಿದ್ದಿದ್ದವು. ಬಳಿಕ ಯಶವಂತಪುರದಿಂದ ಹೌರಾಕ್ಕೆ ಪ್ರಯಾಣಿಸುತ್ತಿದ್ದ ಹೌರಾ ಎಕ್ಸ್‌ಪ್ರೆಸ್ ಕೂಡ ಡಿಕ್ಕಿ ಹೊಡೆದಿತ್ತು.

ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಅಪಘಾತದ ಸ್ಥಳ ಪರಿಶೀಲನೆ ನಡೆಸಿದರು, ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ