Odisha Train Accident: ತ್ರಿವಳಿ ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ಹೆಚ್ಚಿದ ದುರ್ವಾಸನೆ
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಈ ಘಟನೆ ನಡೆದು ಒಂದು ವಾರ ಕಳೆದಿದ್ದು, 288 ಮಂದಿ ಮೃತಪಟ್ಟ ಬಳಿಕ ಆ ಸ್ಥಳದಲ್ಲಿ ದುರ್ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಈ ಘಟನೆ ನಡೆದು ಒಂದು ವಾರ ಕಳೆದಿದ್ದು, 288 ಮಂದಿ ಮೃತಪಟ್ಟ ಬಳಿಕ ಆ ಸ್ಥಳದಲ್ಲಿ ದುರ್ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಹಂಗಾ ಬಜಾರ್ ಪ್ರದೇಶದ ಮೂಲಕ ಹಾದು ಹೋಗುವಾಗಲೆಲ್ಲ ವಿಚಿತ್ರ ವಾಸನೆ ಬರುತ್ತಿದೆ ಎಂದು ಜನರು ದೂರು ನೀಡಿದ್ದಾರೆ. ಆ ಪ್ರದೇಶದಲ್ಲಿರುವ ಕಂಪಾರ್ಟ್‌ಮೆಂಟ್‌ನಲ್ಲಿ ಮೃತದೇಹಗಳು ಇರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಬಳಿಕ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಇದು ಮನುಷ್ಯರ ಶವಗಳ ವಾಸನೆಯಲ್ಲ, ಕೊಳೆತ ಮೊಟ್ಟೆಗಳಿಂದ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಈಗ ಜನರು ಸ್ವಲ್ಪ ನಿರಾಳರಾಗಿದ್ದಾರೆ.
ಅದೇ ಸಮಯದಲ್ಲಿ, ಮೊಟ್ಟೆಗಳನ್ನು ಸ್ಥಳದಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿ ಹೇಳಿದರು. ಒಡಿಶಾದ ಬಾಲಸೋರ್‌ನ ಬಹಂಗಾ ಮಾರುಕಟ್ಟೆ ಬಳಿ ಜೂನ್ 2 ರಂದು ರೈಲು ಅಪಘಾತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 1,200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ವಾಸ್ತವವಾಗಿ, ಬಹನಾಗಾ ಬಜಾರ್ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಜನರು ಅಪಘಾತದ ಸ್ಥಳದಲ್ಲಿ ಬಿದ್ದಿರುವ ಕಂಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ದೂರಿದರು ಮತ್ತು ಕೆಲವು ದೇಹಗಳು ಇನ್ನೂ ಕಂಪಾರ್ಟ್‌ಮೆಂಟ್‌ನಲ್ಲಿ ಸಿಲುಕಿಕೊಂಡಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಮತ್ತಷ್ಟು ಓದಿ: Breaking News Today Highlights: ಒಡಿಶಾ ರೈಲು ದುರಂತ: ಬೋಗಿಗಳ ತೆರವು ಕಾರ್ಯಾಚರಣೆಗೆ ಮುಂದಾದ ರೈಲ್ವೆ ಇಲಾಖೆ ಸಿಬ್ಬಂದಿ
ದೂರಿನ ನಂತರ, ರೈಲ್ವೆ ರಾಜ್ಯ ಸರ್ಕಾರದ ಸಹಾಯದಿಂದ ಶೋಧ ನಡೆಸಿತು. ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಆದಿತ್ಯ ಕುಮಾರ್ ಚೌಧರಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಿಲ್ದಾಣದಲ್ಲಿನ ಕೊಳೆತ ಮೊಟ್ಟೆಗಳಿಂದ ದುರ್ವಾಸನೆ ಕಂಡುಬಂದಿದೆ, ಆದರೆ ಮಾನವನ ಮೃತದೇಹದಿಂದ ದುರ್ವಾಸನೆ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ