ಒಡಿಶಾ ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಪ್ರಧಾನಿ ನರೇಂದ್ರ ಮೋದಿ
ಬಹನಾಗ ರೈಲು ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಪ್ರಕರಣದ ಬಗ್ಗೆ ಮಾತನಾಡಿದ ಮೋದಿ, ನೊಂದ ಕುಟುಂಬಗಳ ಜೊತೆ ಕೇಂದ್ರಸರ್ಕಾರ ಇದೆ ಎಂದಿದ್ದಾರೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ.
ಇದು ನೋವಿನ ಘಟನೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ಎಲ್ಲ ರೀತಿಯ ಸಹಾಯ ನೀಡುತ್ತದೆ. ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ರೈಲ್ವೆ ಇಲಾಖೆ ಹಳಿಗಳ ಪುನಶ್ಚೇತನಕ್ಕೆ ಶ್ರಮಿಸುತ್ತಿದೆ. ನಾನು ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ (Train Accident) ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.
ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮೂಲಕ ಬಹನಾಗಾದಲ್ಲಿ ಬಂದಿಳಿದ ಮೋದಿ, ದುರಂತ ಸ್ಥಳವನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದಲ್ಲಿದ್ದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಕುರಿತು ಪ್ರಧಾನಿಗೆ ಮಾಹಿತಿ ನೀಡಿದರು. ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.
#WATCH | “It’s a painful incident. Govt will leave no stone unturned for the treatment of those injured. It’s a serious incident, instructions issued for probe from every angle. Those found guilty will be punished stringently. Railway is working towards track restoration. I met… pic.twitter.com/ZhyjxXrYkw
— ANI (@ANI) June 3, 2023
ಬಹನಾಗ ರೈಲು ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಪ್ರಕರಣದ ಬಗ್ಗೆ ಮಾತನಾಡಿದ ಮೋದಿ, ನೊಂದ ಕುಟುಂಬಗಳ ಜೊತೆ ಕೇಂದ್ರಸರ್ಕಾರ ಇದೆ ಎಂದಿದ್ದಾರೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ. ದುರಂತ ಪಾಠ ಕಲಿಸಿದೆ, ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಬಾಲಸೋರ್ ಆಸ್ಪತ್ರೆಗೆ ಭೇಟಿ ಬಳಿಕ ಪ್ರಧಾನಿ ಮೋದಿ ಹೇಳಿದ್ದಾರೆ.
ಸಂಪುಟ ಕಾರ್ಯದರ್ಶಿ ಮತ್ತು ಆರೋಗ್ಯ ಸಚಿವರೊಂದಿಗೆ ಮಾತನಾಡಿದ ಮೋದಿಗಾಯಾಳುಗಳಿಗೆ ಮತ್ತು ಅವರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಹೇಳಿದ್ದಾರೆ. ಇಲ್ಲಿಯವರೆಗೆ, ದುರಂತದಲ್ಲಿ ಕನಿಷ್ಠ 280 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: Odisha Train Accident: ಒಡಿಶಾ ರೈಲು ದುರಂತ ಸ್ಥಳದ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಮಾತಾಡಿಸಿದ ಪ್ರಧಾನಿ ನರೇಂದ್ರ ಮೋದಿ
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪ್ರಧಾನಿ ಮೋದಿ ಅವರು ಭೀಕರ ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದರು. ಅವರು ಘಟನೆಯನ್ನು ‘ದುರಂತ’ ಎಂದು ಕರೆದರು . ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಜ್ಯ ಸರ್ಕಾರ ಮತ್ತು ಭಾರತೀಯ ಸೇನೆಯು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಹೇಳಿದರು.
ದುಃಖಿತ ಕುಟುಂಬಗಳು ಅನಾನುಕೂಲತೆಯನ್ನು ಎದುರಿಸದಂತೆ ವಿಶೇಷ ಕಾಳಜಿ ವಹಿಸಬೇಕು. ಸಂತ್ರಸ್ತರಿಗೆ ಅಗತ್ಯವಿರುವ ಸಹಾಯವನ್ನು ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 288ಕ್ಕೇರಿದ್ದು, ಗಾಯಗೊಂಡವರ ಸಂಖ್ಯೆ 1000ಕ್ಕೂ ಹೆಚ್ಚು ಇದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:10 pm, Sat, 3 June 23