Odisha Train Accident: ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ಶುರು, ರೈಲ್ವೆ ಸಚಿವರಿಂದ ಮೇಲ್ವಿಚಾರಣೆ

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ  ಸಂಭವಿಸಿದ ರೈಲು ಅಪಘಾತದ ಬಳಿಕ,  ಈಗ ಹೌರಾ-ಚೆನ್ನೈ ರೈಲು ಮಾರ್ಗವನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುತ್ತಿದೆ.

Odisha Train Accident: ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ಶುರು, ರೈಲ್ವೆ ಸಚಿವರಿಂದ ಮೇಲ್ವಿಚಾರಣೆ
ರೈಲು ಅಪಘಾತದ ಸ್ಥಳ, ದುರಸ್ತಿ ಕಾರ್ಯ
Follow us
ನಯನಾ ರಾಜೀವ್
|

Updated on: Jun 04, 2023 | 9:11 AM

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ  ಸಂಭವಿಸಿದ ರೈಲು ಅಪಘಾತದ ಬಳಿಕ,  ಈಗ ಹೌರಾ-ಚೆನ್ನೈ ರೈಲು ಮಾರ್ಗವನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಶನಿವಾರ ಮಧ್ಯಾಹ್ನದ ವೇಳೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಬಳಿಕ ಅಪಘಾತದ ಕೋಚ್‌ಗಳನ್ನು ತೆಗೆದುಹಾಕಲಾಗಿದ್ದು, ಈಗ ಟ್ರ್ಯಾಕ್‌ಗಳನ್ನು ಹಾಕುವ ಮತ್ತು ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. 1000ಕ್ಕೂ ಹೆಚ್ಚು ರೈಲ್ವೆ ನೌಕರರು ಈ ಕಾರ್ಯದಲ್ಲಿ ತೊಡಗಿದ್ದಾರೆ, ದುರಸ್ತಿ ಕಾರ್ಯಕ್ಕಾಗಿ 7ಕ್ಕೂ ಹೆಚ್ಚು ಪೊಕ್ಲೆನ್ ಯಂತ್ರಗಳು,  ಕ್ರೇನ್ ಇತ್ಯಾದಿಗಳನ್ನು ಅಳವಡಿಸಲಾಗಿದೆ.

ಅಪಘಾತದ ಸ್ಥದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಖುದ್ದಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಹೌರಾ-ಚೆನ್ನೈ ರೈಲು ಮಾರ್ಗದ ದುರಸ್ತಿ ಕಾರ್ಯ ಬುಧವಾರ ಸಂಜೆಯ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅಶ್ವಿನಿ ವೈಷ್ಣವ್ ಈ ಹಿಂದೆ ತಿಳಿಸಿದ್ದರು. ಬಾಲಸೋರ್‌ನ ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಈ ರೈಲಿನ ಕೆಲವು ಬೋಗಿಗಳು ಹಾದುಹೋಗುತ್ತಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ನ ಹಿಂಭಾಗಕ್ಕೂ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದಾರೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಸುಮಾರು 56 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ

ಬಾಲಸೋರ್ ರೈಲು ಅಪಘಾತದ ಕುರಿತು ಉನ್ನತ ಮಟ್ಟದ ಸಮಿತಿ ತನಿಖೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಅಪಘಾತ ಸ್ಥಳಕ್ಕೆ ತೆರಳಿದ್ದರು. ಅಲ್ಲದೆ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ