ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ರೈಲು ಅಪಘಾತ(Train Accident)ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ. ರೈಲ್ವೆ ದುರಂತ ಸಂಬಂಧ ತನಿಖೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿದೆ. ಸಾರ್ವಜನಿಕರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಒಡಿಶಾ ರೈಲು ಅಪಘಾತದಲ್ಲಿ ಇಲ್ಲಿಯವರೆಗೆ 288 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೆ ಸಚಿವರು ಶನಿವಾರ ಸ್ಥಳಕ್ಕೆ ಆಗಮಿಸಿ,ಪರಿಹಾರ ಕಾಮಗಾರಿಯನ್ನು ಪರಿಶೀಲಿಸಿದರು. ಹಾಗೆಯೇ ಪ್ರಧಾನಿ ಮೋದಿಯವರು ಕೂಡ ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಇದೀಗ ಅಪಘಾತ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ರೈಲು ಪ್ರಯಾಣವನ್ನು ಶೇ.100ರಷ್ಟು ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲ ವಿಶಾಲ್ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಈ ಮಾರ್ಗದಲ್ಲಿ ರಕ್ಷಾಕವಚ ವ್ಯವಸ್ಥೆಯು ಸಕ್ರಿಯವಾಗಿಲ್ಲ. ಈ ವ್ಯವಸ್ಥೆ ಸಕ್ರಿಯವಾಗಿದ್ದರೆ, ಅಪಘಾತವನ್ನು ತಪ್ಪಿಸಬಹುದಿತ್ತು. ಇದುವರೆಗೆ ಕೆಲವೇ ಮಾರ್ಗಗಳಲ್ಲಿ ಅಳವಡಿಸಲಾಗಿದೆ.
ಮತ್ತಷ್ಟು ಓದಿ: Odisha Train Accident: ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್
ಈ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದಷ್ಟು ಬೇಗ ಎಲ್ಲ ಮಾರ್ಗಗಳಲ್ಲಿ ಸರಿಪಡಿಸಿ ಪ್ರಯಾಣಿಕರ ಜೀವಕ್ಕೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಅರ್ಜಿಯಲ್ಲಿ ಹೇಳಲಾಗಿದೆ.