ಪ್ರಧಾನಿ ನರೇಂದ್ರ ಮೋದಿ(Narendra Modi) ಬಾಲಸೋರ್ ಆಸ್ಪತ್ರೆಗೆ ತೆರಳಿ ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದರು. ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇದುವರೆಗೆ ರೈಲು ಅಪಘಾತದಲ್ಲಿ 280ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 900 ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಮೋದಿ ನೇರವಾಗಿ ಅಪಘಾತದ ಸ್ಥಳಕ್ಕೆ ಆಗಮಿಸಿ ಅವಲೋಕನ ನಡೆಸಿದರು. ವಾಯುಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ಮೋದಿ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದರು. ಇದಕ್ಕೂ ಮುನ್ನ ಅವರು ರೈಲು ಅಪಘಾತದ ಕುರಿತು ಪರಿಸ್ಥಿತಿ ಅವಲೋಕನಕ್ಕಾಗಿ ಉನ್ನತ ಮಟ್ಟದ ಸಭೆ ನಡೆಸಿದರು.
ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಸ್ವತಃ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದರು. ಇವರೊಂದಿಗೆ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು. ಗಾಯಾಳುಗಳಿಗೆ ಮತ್ತು ಅವರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಅವರು ಕೇಳಿಕೊಂಡರು. ಸಂತ್ರಸ್ತ ಕುಟುಂಬಗಳಿಗೆ ತೊಂದರೆಯಾಗದಂತೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡಬೇಕು ಎಂದು ಹೇಳಿದರು.
A compassionate leader who stands with the people through thick and thin.
Accompanied PM @narendramodi ji to the Balasore district hospital where he met and inquired about the well-being of injured passengers. PM Modi’s presence, words of empathy and rock solid support will… pic.twitter.com/TLVMLZIwHK
— Dharmendra Pradhan (@dpradhanbjp) June 3, 2023
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಆಸ್ಪತ್ರೆಯಲ್ಲಿ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದರು. ಈ ವೇಳೆ ಗಾಯಾಳುಗಳ ಜತೆಯೂ ಮಾತುಕತೆ ನಡೆಸಿದರು. ಬಿಗಿ ಭದ್ರತೆಯ ನಡುವೆ ಪ್ರಧಾನ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗಕ್ಕೆ ತೆರಳಿದ ಪ್ರಧಾನಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಶನಿವಾರ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದರು. ಮೃತಪಟ್ಟ ನಮ್ಮ ರಾಜ್ಯದ ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ನೀಡುತ್ತೇವೆ ಎಂದು ಘೋಷಿಸಿದರು.
ಮತ್ತಷ್ಟು ಓದಿ:Odisha Train Accident: ಎಲ್ಲಿದ್ದೀಯೋ ಕಂದ, ಕಣ್ಣಂಚಲ್ಲಿ ನೀರು, ಶವಗಳ ರಾಶಿಯ ನಡುವೆ ಮುಸುಕು ತೆಗೆದು ಮಗನಿಗಾಗಿ ತಂದೆಯ ಹುಡುಕಾಟ
ಘಟನೆ ಏನು?
ಶುಕ್ರವಾರ ಸಂಜೆ ಸರಿಸುಮಾರು 7 ಗಂಟೆಗೆ ನಡೆದ ವಿನಾಶಕಾರಿ ಘಟನೆಯಲ್ಲಿ, 12841 ಶಾಲಿಮಾರ್-ಕೋರೊಮಂಡಲ್ ಎಕ್ಸ್‌ಪ್ರೆಸ್ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಘರ್ಷಣೆಯು ಸುಮಾರು 300 ಜೀವಗಳು ಬಲಿಯಾಗಿವೆ, ಸುಮಾರು 900 ಜನರು ಗಾಯಗೊಂಡಿದ್ದಾರೆ.
ಬಹನಾಗಾ ಬಜಾರ್ ನಿಲ್ದಾಣದ ಸಮೀಪ ರಾತ್ರಿ 7.20ರ ಸುಮಾರಿಗೆ ಈ ಭೀಕರ ಅವಘಡ ಸಂಭವಿಸಿದೆ. ಒಡಿಶಾದ ಈ ಮಹಾ ರೈಲು ದುರಂತಕ್ಕೆ ರೈಲು ಹಳಿಗಳಲ್ಲಿನ ದೋಷವೇ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಹಳಿಗಳು ದೋಷಯುಕ್ತವಾಗಿದ್ದವೆಂದು ಶಂಕಿಸಲಾಗಿದೆ.
ಆದರೆ, ತನಿಖೆಯ ನಂತರ ದುರಂತಕ್ಕೆ ನಿಖರ ಕಾರಣವೇನೆಂದು ತಿಳಿಯಲಿದೆ. ಒಡಿಶಾದ ಬಾಲಸೋರ್ ನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಮೂರು ರೈಲುಗಳ ಅಪಘಾತದಲ್ಲಿ ಸುಮಾರು 260ಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದು, ಸಾವಿರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಏಕಾಏಕಿ ಮೂರು ರೈಲು ಡಿಕ್ಕಿ ಹೇಗಾಯಿತು ಎಂಬುದು ಇದೀಗ ಚರ್ಚೆಯ ವಿಷಯವಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ