Odisha Train Accident: ಆಸ್ಪತ್ರೆಯಲ್ಲಿ ಹೆಣಗಳ ರಾಶಿ, ಮೃತರ ಗುರುತು ಪತ್ತೆ ಹಚ್ಚಲು ಸಂಬಂಧಿಕರ ಹರಸಾಹಸ

ಒಂದೆಡೆ ರಕ್ತದ ವಾಸನೆ, ಇನ್ನೊಂದೆಡೆ ಹೆಣಗಳ ರಾಶಿ, ಮೂಗು ಮುಚ್ಚಿಕೊಂಡು ಕಣ್ಣೀರು ಹಾಕುತ್ತಾ ತಮ್ಮವರ ಹುಡುಕಾಟದಲ್ಲಿರುವ ಜನರು. ಮುಖದ ತುಂಬಾ ರಕ್ತ, ಅಪಘಾತದಲ್ಲಾದ ಗಾಯಗಳಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ.

Odisha Train Accident: ಆಸ್ಪತ್ರೆಯಲ್ಲಿ ಹೆಣಗಳ ರಾಶಿ, ಮೃತರ ಗುರುತು ಪತ್ತೆ ಹಚ್ಚಲು ಸಂಬಂಧಿಕರ ಹರಸಾಹಸ
ರೈಲು

Updated on: Jun 05, 2023 | 8:09 AM

ಒಂದೆಡೆ ರಕ್ತದ ವಾಸನೆ, ಇನ್ನೊಂದೆಡೆ ಹೆಣಗಳ ರಾಶಿ, ಮೂಗು ಮುಚ್ಚಿಕೊಂಡು ಕಣ್ಣೀರು ಹಾಕುತ್ತಾ ತಮ್ಮವರ ಹುಡುಕಾಟದಲ್ಲಿರುವ ಜನರು.
ಮುಖದ ತುಂಬಾ ರಕ್ತ, ಅಪಘಾತದಲ್ಲಾದ ಗಾಯಗಳಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯ ಶವಾಗಾರ ತುಂಬಿ ತುಳುಕುತ್ತಿದೆ.
ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿ 52 ಗಂಟೆಗಳು ಕಳೆದಿವೆ. ಅಪಘಾತದಲ್ಲಿ ಮೃತಪಟ್ಟವರು 275 ಮಂದಿ, ಆಸ್ಪತ್ರೆಯಲ್ಲಿ 56 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಸಾವಿರಕ್ಕೂ ಅಧಿಕ ಮಂದಿ ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ.

ಮತ್ತಷ್ಟು ಓದಿ: Odisha Train Accident: ಎಲ್ಲಿದ್ದೀಯೋ ಕಂದ, ಕಣ್ಣಂಚಲ್ಲಿ ನೀರು, ಶವಗಳ ರಾಶಿಯ ನಡುವೆ ಮುಸುಕು ತೆಗೆದು ಮಗನಿಗಾಗಿ ತಂದೆಯ ಹುಡುಕಾಟ

ಮೊದಲು ಸಂಬಂಧಿಕರಿಗೆ ತಮ್ಮವರು ಬದುಕಿರಬಹುದಾ ಎನ್ನುವ ಭರವಸೆ ಇದ್ದರೂ, ಯಾವುದೇ ದಾಖಲೆ ಇಲ್ಲದ ಕಾರಣ ಹೆಣಗಳ ರಾಶಿಗಳಲ್ಲಿ ತಮ್ಮವರನ್ನು ಹುಡುಕಾಡಲೇ ಬೇಕಿದೆ. ಕೆಲವೊಂದು ಶವಗಳು ಬೆಂಕಿಯಲ್ಲಿ ಬೆಂದು ಹೋಗಿವೆ, 100 ಕ್ಕೂ ಹೆಚ್ಚು ಮೃತ ದೇಹಗಳನ್ನು ಭುವನೇಶ್ವರದ ಏಮ್ಸ್‌ಗೆ ರವಾನಿಸಲಾಗಿದ್ದು, ವಿಧಿವಿಜ್ಞಾನ ಪ್ರಯೋಗದ ಮೂಲಕ ಪತ್ತೆಹಚ್ಚಲು ಪ್ರಯತ್ನ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಕೇವಲ 88 ಮೃತ ದೇಹಗಳನ್ನು ಮಾತ್ರ ಗುರುತಿಸಲಾಗಿದೆ.

ಇದುವರೆಗೆ 88 ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಗಾಯಗೊಂಡ 793 ಪ್ರಯಾಣಿಕರನ್ನು ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ.ತೀವ್ರವಾಗಿ ಗಾಯಗೊಂಡ 382 ಪ್ರಯಾಣಿಕರ ಚಿಕಿತ್ಸೆ ಇನ್ನೂ ನಡೆಯುತ್ತಿದೆ.

ಕೋಲ್ಡ್‌ ಸ್ಟೋರೇಜ್‌ (Cold Storage) ಶವಾಗಾರವು ಗರಿಷ್ಠ 40 ಶವಗಳನ್ನಿಡುವ ಸಾಮರ್ಥ್ಯ ಹೊಂದಿದ್ದು ಸದ್ಯ ಮೃತದೇಹಗಳನ್ನಿಡುವುದೇ ಸವಾಲಾಗಿದೆ ಎಂದು ಭುವನೇಶ್ವರ ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಕುಟುಂಬಸ್ಥರು ಬಂದು ಶವಗಳನ್ನು ಗುರುತಿಸುವವರೆಗೂ ರಸಾಯನಿಕಗಳ ಮೂಲಕ ಶವಗಳನ್ನು ಸಂರಕ್ಷಿಸಲಾಗುವುದು. ಈ ಬೇಸಿಗೆಯಲ್ಲಿ ಶವಸಂರಕ್ಷಣೆ ನಿಜಕ್ಕೂ ಕಷ್ಟಕರ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us