Odisha Train Fire: ಒಡಿಶಾದ ದುರ್ಗ್​-ಪುರಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಭಯಭೀತರಾದ ಪ್ರಯಾಣಿಕರು

|

Updated on: Jun 09, 2023 | 8:53 AM

ಒಡಿಶಾದ ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್‌ಪ್ರೆಸ್‌ನ ಬೋಗಿಯೊಳಗೆ ಗುರುವಾರ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

Odisha Train Fire: ಒಡಿಶಾದ ದುರ್ಗ್​-ಪುರಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಭಯಭೀತರಾದ ಪ್ರಯಾಣಿಕರು
ರೈಲು
Follow us on

ಒಡಿಶಾದ ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್‌ಪ್ರೆಸ್‌ನ ಬೋಗಿಯೊಳಗೆ ಗುರುವಾರ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು.
ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅದೇ ದಿನ ಬಿಡುಗಡೆಯಾದ ಹೇಳಿಕೆಯಲ್ಲಿ, ಬ್ರೇಕ್ ಪ್ಯಾಡ್‌ಗಳಿಗೆ ಬೆಂಕಿ ಹತ್ತಿಕೊಂಡಿತು. ಬೆಂಕಿಯು ಬ್ರೇಕ್ ಪ್ಯಾಡ್‌ಗಳಿಗೆ ಸೀಮಿತವಾಗಿದೆ. ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿದರು ಮತ್ತು ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದರು, ಜನರು ಭಯಭೀತರಾದರು.

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ದುರಂತವು 288 ಜನರನ್ನು ಬಲಿತೆಗೆದುಕೊಂಡಿದೆ ಮತ್ತು 1,100 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದು ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಪರಿಹಾರ ಧನ ಪಡೆಯಲು ರೈಲು ಅಪಘಾತದಲ್ಲಿ ಪತಿ ಸಾವಿಗೀಡಾಗಿದ್ದಾನೆ ಎಂದು ಸುಳ್ಳು ಹೇಳಿದ ಮಹಿಳೆ; ಗಂಡನಿಂದಲೇ ದೂರು
ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳಿಗೆ ಭಾರಿ ಹಾನಿಯಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ