AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದಲ್ಲಿ ಅಪರೂಪದ ಘಟನೆ: ರೈಲಿನಲ್ಲಿ ಮೊದಲ ಮಗು, ಆಂಬ್ಯುಲೆನ್ಸ್‌ನಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿದ ತಾಯಿ

ಒಡಿಶಾದಲ್ಲಿ ವಿಶಿಷ್ಟ ಘಟನೆ: ಮಹಿಳೆಯೊಬ್ಬರು ಚಲಿಸುವ ರೈಲಿನಲ್ಲಿ ತಮ್ಮ ಮೊದಲ ಅವಳಿ ಮಗುವಿಗೆ ಜನ್ಮ ನೀಡಿದರೆ, ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಆಂಬ್ಯುಲೆನ್ಸ್‌ನಲ್ಲಿ ಎರಡನೇ ಮಗುವಿಗೆ ಜನನ ನೀಡಿದ್ದಾರೆ. ಸಹ ಪ್ರಯಾಣಿಕರು, ರೈಲ್ವೆ ಸಿಬ್ಬಂದಿ ಮತ್ತು ವೈದ್ಯಕೀಯ ತಂಡದ ಸಮಯಪ್ರಜ್ಞೆಯಿಂದ ತಾಯಿ ಮತ್ತು ಇಬ್ಬರೂ ಶಿಶುಗಳು ಸುರಕ್ಷಿತವಾಗಿದ್ದಾರೆ. ಈ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಒಡಿಶಾದಲ್ಲಿ ಅಪರೂಪದ ಘಟನೆ: ರೈಲಿನಲ್ಲಿ ಮೊದಲ ಮಗು, ಆಂಬ್ಯುಲೆನ್ಸ್‌ನಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿದ ತಾಯಿ
ಮಗು Image Credit source: Business Insider
ನಯನಾ ರಾಜೀವ್
|

Updated on: Jun 22, 2026 | 10:50 AM

Share

ಭುವನೇಶ್ವರ, ಜೂನ್ 22: ಮಹಿಳೆಯೊಬ್ಬರು ಎರಡು ಪ್ರತ್ಯೇಕ ವಾಹನಗಳಲ್ಲಿ ತಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ಒಡಿಶಾದಲ್ಲಿ ನಡೆದಿದೆ. ಮೊದಲ ಮಗು ಚಲಿಸುತ್ತಿರುವ ರೈಲಿನಲ್ಲಿ ಜನಿಸಿದರೆ ಎರಡನೇ ಮಗು(Baby) ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಆಂಬ್ಯುಲೆನ್ಸ್​ ಒಳಗೆ ಜನಿಸಿದೆ. ಸಹ ಪ್ರಯಾಣಿಕರು, ರೈಲ್ವೆ ಅಧಿಕಾರಿಗಳು ಮತ್ತು ವೈದ್ಯಕೀಯ ತಂಡದ ಸಮಯಪ್ರಜ್ಞೆಯಿಂದಾಗಿ ತಾಯಿ ಮತ್ತು ಇಬ್ಬರೂ ಶಿಶುಗಳು ಸಂಪೂರ್ಣ ಸುರಕ್ಷಿತವಾಗಿದ್ದಾರೆ.

ಈ ರೋಮಾಂಚನಕಾರಿ ಘಟನೆ ರೂರ್ಕೆಲಾ-ಗುಣುಪುರ್ ‘ರಾಜ್ಯರಾಣಿ ಎಕ್ಸ್‌ಪ್ರೆಸ್’ ರೈಲಿನಲ್ಲಿ ಸಂಭವಿಸಿದೆ. ಮಹಿಳೆ ರೈಲಿನ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದಾಗ ಇದ್ದಕ್ಕಿದ್ದಂತೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು. ಇದನ್ನು ಗಮನಿಸಿದ ಸಹ ಪ್ರಯಾಣಿಕರು ತಕ್ಷಣವೇ ‘ರೈಲ್ ಮದದ್’ ಪೋರ್ಟಲ್ ಮೂಲಕ ರೈಲ್ವೆ ಇಲಾಖೆಗೆ ತುರ್ತು ಸಂದೇಶ ರವಾನಿಸಿದರು.

ಕಟಕ್ ರೈಲು ನಿಲ್ದಾಣದಲ್ಲಿ ವೈದ್ಯಕೀಯ ನೆರವು ನೀಡಲು ಆರ್‌ಪಿಎಫ್ (RPF) ಪಡೆ ಸಿದ್ಧವಾಗಿ ನಿಂತಿತ್ತು. ಆದರೆ, ರೈಲು ನಿಲ್ದಾಣವನ್ನು ತಲುಪುವ ಮೊದಲೇ ಚಲಿಸುವ ರೈಲಿನೊಳಗೆ ಮಹಿಳೆ ತನ್ನ ಮೊದಲ ಗಂಡು ಮಗುವಿಗೆ ಜನ್ಮ ನೀಡಿದ್ದಳು.

ಮತ್ತಷ್ಟು ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ಋತ್ ಪ್ರಭು?

ರೈಲು ಕಟಕ್ ನಿಲ್ದಾಣಕ್ಕೆ ಬರುತ್ತಿದ್ದಂತೆ ರೈಲ್ವೆ ಸಿಬ್ಬಂದಿ ಮಹಿಳೆಯನ್ನು 108 ಆಂಬ್ಯುಲೆನ್ಸ್ ಮೂಲಕ ತಕ್ಷಣವೇ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದರು. ಆದರೆ ಆಸ್ಪತ್ರೆ ತಲುಪುವ ಮೊದಲೇ, ಚಲಿಸುವ ಆಂಬ್ಯುಲೆನ್ಸ್ ಒಳಗೆ ಮಹಿಳೆಗೆ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಆಕೆ ತನ್ನ ಎರಡನೇ ಮಗುವಿಗೂ ಯಶಸ್ವಿಯಾಗಿ ಜನ್ಮ ನೀಡಿದಳು.

ಪ್ರಸ್ತುತ ಆಸ್ಪತ್ರೆಯ ವೈದ್ಯರು ತಾಯಿ ಮತ್ತು ಇಬ್ಬರೂ ಅವಳಿ ಮಕ್ಕಳನ್ನು ಪರೀಕ್ಷಿಸಿದ್ದು, ಮೂವರೂ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ದೃಢಪಡಿಸಿದ್ದಾರೆ. ಅತ್ಯಂತ ಕಠಿಣ ಮತ್ತು ಸವಾಲಿನ ಸಂದರ್ಭದಲ್ಲಿ ಎರಡು ಪ್ರತ್ಯೇಕ ಚಲಿಸುವ ವಾಹನಗಳಲ್ಲಿ ಸುರಕ್ಷಿತ ಹೆರಿಗೆಯಾಗುವಂತೆ ನೋಡಿಕೊಂಡ ಆರ್‌ಪಿಎಫ್ ಸಿಬ್ಬಂದಿ, ಆಂಬ್ಯುಲೆನ್ಸ್ ಚಾಲಕರು ಮತ್ತು ಸಹ ಪ್ರಯಾಣಿಕರ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ