ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿಕ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ: ಪ್ರಯಾಣಿಕನ ಚತುರತೆಗೆ ಅಧಿಕಾರಿಗಳು ದಂಗು

ಆರೋಪಿಗಳು ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರಿಂದ ಗಲಾಟೆಯನ್ನು ಸೃಷ್ಟಿಸಿದರು. ಈ ವೇಳೆ ಅಧಿಕಾರಿಗಳು ಗುಂಪನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ.

ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿಕ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ: ಪ್ರಯಾಣಿಕನ ಚತುರತೆಗೆ ಅಧಿಕಾರಿಗಳು ದಂಗು
ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿತ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ
Follow us
TV9 Web
| Updated By: ಆಯೇಷಾ ಬಾನು

Updated on:Sep 11, 2022 | 5:04 PM

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಸುಮಾರು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸುಡಾನ್ ಪ್ರಯಾಣಿಕರೊಬ್ಬರು ಧರಿಸಿದ್ದ ವಿಶೇಷ ವಿನ್ಯಾಸದ ಬೆಲ್ಟ್‌ನಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಆರೋಪಿಗಳು ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರಿಂದ ಗಲಾಟೆಯನ್ನು ಸೃಷ್ಟಿಸಿದರು. ಈ ವೇಳೆ ಅಧಿಕಾರಿಗಳು ಗುಂಪನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ 6 ಮಂದಿಯನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಇದಕ್ಕೂ ಮುನ್ನ ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 13 ಕೋಟಿ ಮೌಲ್ಯದ 1.3 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದರು. ಪೊಲೀಸ್ ಅಧಿಕಾರಿಗಳು ಘಾನಾದಿಂದ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಆಗಸ್ಟ್ 28 ರಂದು ಆತನನ್ನು ಬಂಧಿಸಲಾಗಿತ್ತು.

ಮೂಲಗಳ ಪ್ರಕಾರ, ಆರೋಪಿಯು ತನ್ನ ಹೊಟ್ಟೆಯಲ್ಲಿ ಕೊಕೇನ್ ಡ್ರಗ್ಸ್ ಅನ್ನು ಬಚ್ಚಿಟ್ಟಿಕೊಂಡಿದ್ದ. ಮಾಹಿತಿ ತಿಳಿದ ಬಳಿಕ ಅಧಿಕಾರಿಗಳು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಆತನ ಹೊಟ್ಟೆಯಲ್ಲಿದ್ದ 87 ಕ್ಯಾಪ್ಸೂಲ್‌ಗಳನ್ನು ವಶಪಡಿಸಿಕೊಂಡಿದ್ದರು. ಮುಂಬೈ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:48 pm, Sun, 11 September 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ