Parliament Special Session: ನಾವು ಹೊಸ ಸಂಸತ್ ​ಭವನಕ್ಕೆ ಹೋಗುತ್ತಿರುವುದು ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ: ನರೇಂದ್ರ ಮೋದಿ

ನಾವು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದಿನಿಂದ ಆರಂಭವಾದ ಸಂಸತ್ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಹಳೆ ಸಂಸತ್ ಭವನದಲ್ಲಿ ನಡೆಯಲಿರುವ ಕೊನೆಯ ಅಧಿವೇಶನ ಐತಿಹಾಸಿಕವಾಗಲಿದೆ. ಸ್ವಾತಂತ್ರ್ಯಕ್ಕೂ ಮುನ್ನ ಇದನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯುತ್ತಿದ್ದೆವು, ಸ್ವಾತಂತ್ರ್ಯ ನಂತರ ಸದನ ಎಂದು ಕರೆಯಲು ಶುರು ಮಾಡಿದೆವು. ಭಾರತದ ನಿರ್ಮಾಣದ ನಿರ್ಣ ವಿದೇಶಿ ಶಾಸಕರದ್ದಾಗಿತ್ತು.

Parliament Special Session: ನಾವು ಹೊಸ ಸಂಸತ್ ​ಭವನಕ್ಕೆ ಹೋಗುತ್ತಿರುವುದು ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ: ನರೇಂದ್ರ ಮೋದಿ
ನರೇಂದ್ರ ಮೋದಿ Image Credit source: Sansad TV
Follow us
ನಯನಾ ರಾಜೀವ್
|

Updated on:Sep 18, 2023 | 12:19 PM

ನಾವು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದಿನಿಂದ ಆರಂಭವಾದ ಸಂಸತ್ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಹಳೆ ಸಂಸತ್ ಭವನದಲ್ಲಿ ನಡೆಯಲಿರುವ ಕೊನೆಯ ಅಧಿವೇಶನ ಐತಿಹಾಸಿಕವಾಗಲಿದೆ. ಸ್ವಾತಂತ್ರ್ಯಕ್ಕೂ ಮುನ್ನ ಇದನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯುತ್ತಿದ್ದೆವು, ಸ್ವಾತಂತ್ರ್ಯ ನಂತರ ಸದನ ಎಂದು ಕರೆಯಲು ಶುರು ಮಾಡಿದೆವು. ಭಾರತದ ನಿರ್ಮಾಣದ ನಿರ್ಣ ವಿದೇಶಿ ಶಾಸಕರದ್ದಾಗಿತ್ತು.

ಆದರೆ ಈ ಸಂಸತ್ ಭವನ ನಿರ್ಮಾಣದಲ್ಲಿ ಬೆವರು ಭಾರತೀಯರದ್ದಿದೆ, ಪರಿಶ್ರಮ ನಮ್ಮ ದೇಶದವರದ್ದು, ಹಣ ಕೂಡ ನಮ್ಮ ದೇಶದವರದ್ದು. ಹೀಗಾಗಿ ಈ ಹಳೆಯ ಸಂಸತ್ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ . ಈ ಅಮೃತ ಕಾಲದಲ್ಲಿ ಹೊಸ ಹುಮ್ಮಸ್ಸು, ಹೊಸ ಉತ್ಸಾಹ, ಹೊಸ ಸಂಕಲ್ಪವನ್ನು ಹೊತ್ತು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ. ಭಾರತದ ಹೊಸ ಸಾಮರ್ಥ್ಯಕ್ಕೆ ಇಡೀ ವಿಶ್ವವೇ ಬೆರಗಾಗುತ್ತಿದೆ.

ಮತ್ತಷ್ಟು ಓದಿ: Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

ಈ ಅಮೃತಕಾಲದಲ್ಲಿಯೇ ಚಂದ್ರಯಾನವನ್ನು ಯಶಸ್ವಿಯಾಗಿ ಪೂರೈಸಿದ್ದೇವೆ. ಹೊಸ ರೂಪ, ಆಧುನಿಕತೆ, ವಿಜ್ಞಾನ, ತಂತ್ರಜ್ಞಾನ, ವಿಜ್ಞಾನಿಗಳ ಸಾಮರ್ಥ್ಯ, ಸಂಕಲ್ಪ ಶಕ್ತಿಯಿಂದ ಯಶಸ್ವಿಯಾಗಿದ್ದೇವೆ ಎಂದರು.

ಮೊದಲ ಬಾರಿಗೆ ಸಂಸತ್ತಿನ ಸದಸ್ಯನಾಗಿದ್ದಾಗ.. ನಾನು ಸಂಸದನಾಗಿ ಮೊದಲ ಬಾರಿಗೆ ಈ ಕಟ್ಟಡವನ್ನು ಪ್ರವೇಶಿಸಿದಾಗ ನಾನು ಸಹಜವಾಗಿಯೇ ಸಂಸತ್ ಭವನದ ಹೊಸ್ತಿಲಲ್ಲಿ ತಲೆ ಬಾಗಿಸಿದ್ದೆ. ಈ ಪ್ರಜಾಪ್ರಭುತ್ವದ ಮಂದಿರದ ಮೇಲೆ ಭಕ್ತಿಯಿಂದ ಹೆಜ್ಜೆ ಹಾಕಿದ್ದೆ. ಆ ಕ್ಷಣ ನನಗೆ ಭಾವನೆಗಳಿಂದ ತುಂಬಿತ್ತು. ನಾನು ಊಹಿಸಲು ಸಾಧ್ಯವಿಲ್ಲ, ಆದರೆ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಮಲಗುವ ಮಗು ಸಂಸತ್ತನ್ನು ತಲುಪುತ್ತದೆ ಎಂಬುದು ಭಾರತದ ಪ್ರಜಾಪ್ರಭುತ್ವದ ಶಕ್ತಿ. ದೇಶ ನನ್ನನ್ನು ಇಷ್ಟೊಂದು ಗೌರವಿಸುತ್ತದೆ ಎಂದು ನಾನು ಊಹಿಸಿರಲಿಲ್ಲ ಎಂದು ಮೋದಿ ಹೇಳಿದ್ದಾರೆ.

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಈ ವಿಶೇಷ ಅಧಿವೇಶನ 5 ದಿನಗಳ ಕಾಲ ನಡೆಯಲಿದೆ, ಈ ಅಧಿವೇಶನದಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು, ಇದು ದೇಶದ ರಾಜಕೀಯದ ಮೇಲೆ ಆಳವಾದ ಪರಿಣಾಮ ಬೀರಬಹುದು. ಸಂಸತ್ ಅಧಿವೇಶನದ ಕಲಾಪ ಇಂದು ಹಳೆ ಸಂಸತ್ ಭವನದಲ್ಲಿಯೇ ನಡೆಯುತ್ತಿದೆ. ಅಧಿವೇಶನ ಆರಂಭವಾದ ಕೂಡಲೇ ಮೊದಲು ರಾಷ್ಟ್ರಗೀತೆಯನ್ನು ನುಡಿಸಿ ನಂತರ ರಾಜ್ಯಸಭೆಯ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಇಂದು ಸಂಸತ್ತಿನಲ್ಲಿ 75 ವರ್ಷಗಳ ಸಂಸದೀಯ ಪಯಣದ ಕುರಿತು ಚರ್ಚೆ ನಡೆಯುತ್ತಿದೆ.

ನೆಹರು ಅವರಿಂದ ಹಿಡಿದು ವಾಜಪೇಯಿವರೆಗೆ ಮಾಜಿ ಪ್ರಧಾನಿಗಳ ಕೊಡುಗೆಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಭಾರತದಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸುವಲ್ಲಿ ಮಹಿಳಾ ಸಂಸದರ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:44 am, Mon, 18 September 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ