AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಪಿಂಚಣಿ ಯೋಜನೆ ಬಗ್ಗೆ ಚರ್ಚಿಸುವುದಾಗಿ ಹೇಳಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ನಾನು ಸ್ಪಷ್ಟವಾಗಿ ಹೇಳುತ್ತೇನೆ, ನಾವು ಒಪಿಎಸ್ ಬಗ್ಗೆ ನೆಗಿಟಿವ್ ಆಗಿಲ್ಲ. ನಾವು ಅದನ್ನು ಹಣಕಾಸು ಮತ್ತು ಇತರ ಇಲಾಖೆಗಳೊಂದಿಗೆ ಚರ್ಚಿಸುತ್ತೇವೆ. ಆದರೆ ಪರಿಹಾರ ಏನೇ ಇರಲಿ, ಅದು ದೀರ್ಘಾವಧಿಯದ್ದಾಗಿರಬೇಕು, ಅಲ್ಪಾವಧಿಯಲ್ಲ" ಎಂದು ಬಿಜೆಪಿ ನಾಯಕ ಫಡ್ನವಿಸ್ ಹೇಳಿದ್ದಾರೆ.

ಹಳೆಯ ಪಿಂಚಣಿ ಯೋಜನೆ ಬಗ್ಗೆ ಚರ್ಚಿಸುವುದಾಗಿ ಹೇಳಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 26, 2023 | 5:49 PM

Share

ಔರಂಗಾಬಾದ್: ಮಹಾರಾಷ್ಟ್ರದ (Maharashtra) ಶಿವಸೇನಾ-ಬಿಜೆಪಿ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (Old Pension Scheme) ಮರುಸ್ಥಾಪಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದ ಒಂದು ತಿಂಗಳ ನಂತರ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಗುರುವಾರ ಸಂಭವನೀಯ ಮರುಚಿಂತನೆಯ ಬಗ್ಗೆ ಮಾತನಾಡಿದ್ದಾರೆ. “ನಾನು ಸ್ಪಷ್ಟವಾಗಿ ಹೇಳುತ್ತೇನೆ, ನಾವು ಒಪಿಎಸ್ ಬಗ್ಗೆ ನೆಗಿಟಿವ್ ಆಗಿಲ್ಲ. ನಾವು ಅದನ್ನು ಹಣಕಾಸು ಮತ್ತು ಇತರ ಇಲಾಖೆಗಳೊಂದಿಗೆ ಚರ್ಚಿಸುತ್ತೇವೆ. ಆದರೆ ಪರಿಹಾರ ಏನೇ ಇರಲಿ, ಅದು ದೀರ್ಘಾವಧಿಯದ್ದಾಗಿರಬೇಕು, ಅಲ್ಪಾವಧಿಯಲ್ಲ” ಎಂದು ಬಿಜೆಪಿ ನಾಯಕ ಫಡ್ನವಿಸ್ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಇತ್ತೀಚಿಗೆ ಒಪಿಎಸ್​​ಗೆ ಮರಳಿವೆ. ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಒಪಿಎಸ್ ಯೋಜನೆಯೇ ಇದೆ. ಸರ್ಕಾರಗಳ ಮೇಲೆ ಭಾರಿ ಆರ್ಥಿಕ ಹೊರೆಯನ್ನು ಉಲ್ಲೇಖಿಸಿ ಬಿಜೆಪಿ ಅದರ ವಿರುದ್ಧವಾಗಿದೆ, ಆದರೆ ಅದರ ನಾಯಕರು ಇದನ್ನು ಪರಿಗಣಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಒಪಿಎಸ್, 20 ವರ್ಷಗಳ ಸೇವೆ ಹೊಂದಿರುವ ನೌಕರರಿಗೆ ಅವರ ಕೊನೆಯ ಸಂಬಳದ ಕನಿಷ್ಠ 50 ಪ್ರತಿಶತವನ್ನು ಪಿಂಚಣಿಯಾಗಿ ನೀಡಿತ್ತದೆ. ಆದರೆ ಹೊರೆ ಸಂಪೂರ್ಣವಾಗಿ ಸರ್ಕಾರದ ಮೇಲಿತ್ತು. ಇದಕ್ಕಾಗಿ ಸಿಬ್ಬಂದಿಯಿಂದ ಯಾವುದೇ ಕಾರ್ಪಸ್ ಸಂಗ್ರಹಿಸಲಾಗಿಲ್ಲ. ಹೊಸ ಪಿಂಚಣಿ ಯೋಜನೆ (NPS) ಅಡಿಯಲ್ಲಿ, ಸರ್ಕಾರ ಮತ್ತು ಸಿಬ್ಬಂದಿ ಇಬ್ಬರೂ ವೇತನದ 10 ಮತ್ತು 14 ಪ್ರತಿಶತವನ್ನು ಅನುಕ್ರಮವಾಗಿ ನಿಧಿಗೆ ಕೊಡುಗೆ ನೀಡಿ ನಂತರ ಅದರಿಂದ ಪಿಂಚಣಿ ಪಡೆಯುತ್ತಾರೆ.

ಇದನ್ನೂ ಓದಿ: iNCOVACC: ಭಾರತ್ ಬಯೋಟೆಕ್‌ ತಯಾರಿಸಿದ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

ಜನವರಿ 30 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಔರಂಗಾಬಾದ್ ವಿಭಾಗದ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಕಿರಣ್ ಪಾಟೀಲ್ ಅವರಿಗೆ ಮತ ಯಾಚಿಸಿ ರ್ಯಾಲಿಯಲ್ಲಿ ಫಡ್ನವಿಸ್ ಮಾತನಾಡುತ್ತಿದ್ದರು.

“ಈ ಜನರು (ಒಪಿಎಸ್ ಬಗ್ಗೆ) ಮಾತ್ರ ಮಾತನಾಡುತ್ತಾರೆ ಎಂದು ಫಡ್ನವಿಸ್ ಎನ್‌ಸಿಪಿಯನ್ನು ಉಲ್ಲೇಖಿಸಿ ಹೇಳಿದ್ದಾರೆ. ಆದರೆ ಪ್ರಸ್ತುತ ಪಿಂಚಣಿ ಯೋಜನೆಯಲ್ಲಿ ಹಳೆಯದಕ್ಕೆ ಬದಲಾವಣೆಯಾಗುವುದಾದರೆ, ಅದನ್ನು ಮಾಡುವ ಧೈರ್ಯ ಬಿಜೆಪಿಗೆ ಇದೆ, ಅವರಿಗಲ್ಲ ಎಂದಿದ್ದಾರೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಸರ್ಕಾರವು ಈ ವಿಷಯದ ಬಗ್ಗೆ ಸಕಾರಾತ್ಮಕವಾಗಿದೆ ಎಂದು ಹೇಳಿದ ಎರಡು ವಾರಗಳ ನಂತರ ಫಡ್ನವಿಸ್ ಅವರ ಈ ಹೇಳಿಕೆ ಬಂದಿದೆ. ಈ ಹಿಂದೆ ಡಿಸೆಂಬರ್‌ನಲ್ಲಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಫಡ್ನವಿಸ್, “ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಪುನಶ್ಚೇತನಗೊಳಿಸುವುದಿಲ್ಲ. ಇದು ರಾಜ್ಯದ ಬೊಕ್ಕಸಕ್ಕೆ ₹ 1.1 ಲಕ್ಷ ಕೋಟಿ ಹೆಚ್ಚುವರಿ ಹೊರೆಯನ್ನು ಹಾಕುತ್ತದೆ” ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ