AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್

ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಕಂಪನಿಯೇ ವಹಿಸಿಕೊಳ್ಳಲಿದೆ.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್‌
TV9 Web
| Updated By: ಸುಷ್ಮಾ ಚಕ್ರೆ|

Updated on:Sep 03, 2022 | 12:23 PM

Share

ಹೈದರಾಬಾದ್: ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (OLECTRA) 100 ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಅಸ್ಸಾಂ ರಾಜ್ಯ ಸಾರಿಗೆ ಸಂಸ್ಥೆಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದೆ. ಈಶಾನ್ಯ ರಾಜ್ಯಗಳಿಂದ ಬಂದ ಮೊದಲ ಆರ್ಡರ್ ಇದಾಗಿದೆ. ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು (Electric Buses) ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಗೆ ಈ ಕಂಪನಿಯೇ ಜವಾಬ್ದಾರರಾಗಿರುತ್ತದೆ.

ಅಂದಹಾಗೆ, ಈ 100 ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಯ ಮೌಲ್ಯವು ಅಂದಾಜು 151 ಕೋಟಿ ರೂ. ಆಗಿದೆ. ಈ ಬಗ್ಗೆ ಒಲೆಕ್ಟ್ರಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಕೆ.ವಿ ಪ್ರದೀಪ್ ಮಾತನಾಡಿ, “ಈಶಾನ್ಯ ರಾಜ್ಯಗಳು ಮತ್ತು ಅಸ್ಸಾಂನಿಂದ ಮೊದಲ ಆರ್ಡರ್ ಸಿಕ್ಕಿರುವುದಕ್ಕೆ ನಮಗೆ ಬಹಳ ಸಂತೋಷವಾಗಿದೆ. ಈ ಆದೇಶದೊಂದಿಗೆ, ನಮ್ಮ ಬಸ್ಸುಗಳು ಭಾರತದ ಎಲ್ಲಾ ಮೂಲೆಗಳಲ್ಲಿ ಸಂಚರಿಸುತ್ತಿವೆ. ಇಂಗಾಲದ ಹೊರಸೂಸುವಿಕೆಯನ್ನು ಈ ಬಸ್​ಗಳು ಗಣನೀಯವಾಗಿ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: EV Trans Bus: ಪುಣೆ-ಮುಂಬೈ ಮಾರ್ಗದಲ್ಲಿ ಇವಿ ಟ್ರಾನ್ಸ್​ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ: ಭಾರತದ ರಸ್ತೆ ಸಾರಿಗೆ ಇತಿಹಾಸದಲ್ಲಿ ಹೊಸ ದಾಖಲೆ

2000ರಲ್ಲಿ ಸ್ಥಾಪಿತವಾದ ಒಲೆಕ್ಟ್ರಾ ಗ್ರೀನ್ಟೆಕ್ ಲಿಮಿಟೆಡ್ MEIL ಗ್ರೂಪ್​ನ ಭಾಗವಾಗಿದೆ. 2015ರಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಪರಿಚಯವನ್ನು ಮಾಡಲಾಯಿತು. ಇದು ವಿದ್ಯುತ್ ಪ್ರಸರಣ ಮತ್ತು ವಿತರಣಾ ಜಾಲಗಳಿಗಾಗಿ ಸಿಲಿಕಾನ್ ರಬ್ಬರ್ ಸಂಯೋಜಿತವಾದ ಭಾರತದಲ್ಲಿನ ಅತಿದೊಡ್ಡ ಉತ್ಪಾದಕವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sat, 3 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?