AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinesh Phogat: ಶಂಭು ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ವಿನೇಶ್ ಫೋಗಟ್ ಬೆಂಬಲ

ಇವರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ, ಇದನ್ನು ನೋಡುವುದು ನೋವುಂಟುಮಾಡುತ್ತದೆ, ಅವರೆಲ್ಲರೂ ಈ ದೇಶದ ನಾಗರಿಕರು, ರೈತರು ದೇಶವನ್ನು ನಡೆಸುತ್ತಾರೆ, ಅವರಿಲ್ಲದೆ ಏನೂ ಸಾಧ್ಯವಿಲ್ಲ. ಅವರು ನಮಗೆ ಆಹಾರವನ್ನು ನೀಡದಿದ್ದರೆ ಕ್ರೀಡಾಪಟುಗಳಿಗೂ ಏನೂ ಮಾಡಲು ಆಗುವುದಿಲ್ಲ. ನಾವು ಅನೇಕ ಬಾರಿ ಅಸಹಾಯಕರಾಗಿದ್ದೇವೆ. ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈತರ ಪ್ರತಿಭಟನೆಯಲ್ಲಿ ಭಾಗಿಯಾದ ವಿನೇಶ್ ಫೋಗಟ್ ಹೇಳಿದ್ದಾರೆ.

Vinesh Phogat: ಶಂಭು ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ವಿನೇಶ್ ಫೋಗಟ್ ಬೆಂಬಲ
ವಿನೇಶ್ ಫೋಗಟ್
ರಶ್ಮಿ ಕಲ್ಲಕಟ್ಟ
|

Updated on:Aug 31, 2024 | 1:12 PM

Share

ದೆಹಲಿ ಆಗಸ್ಟ್ 31: ಒಲಿಂಪಿಯನ್ ವಿನೇಶ್ ಫೋಗಟ್ (Vinesh Phogat) ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿಗಾಗಿ ಆಗ್ರಹಿಸಿ ರೈತರು ಪ್ರತಿಭಟನೆ (Farmers Protest) ನಡೆಸುತ್ತಿದ್ದು ಆಗಸ್ಟ್ 31 ರ ಶನಿವಾರದಂದು ಈ ಪ್ರತಿಭಟನೆ 200 ನೇ ದಿನಕ್ಕೆ ಕಾಲಿಟ್ಟಿದೆ. ಖಾನೌರಿ, ಶಂಭು ಮತ್ತು ರತನ್‌ಪುರ ಗಡಿಗಳಲ್ಲಿಯೂ ಪ್ರತಿಭಟನೆ ನಡೆಯಲಿದೆ. ಎಲ್ಲಾ ಬೆಳೆಗಳಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿರುವ ರೈತರು, ಇತರ ನಿರ್ಣಾಯಕ ಸಮಸ್ಯೆಗಳೊಂದಿಗೆ ಫೆಬ್ರವರಿ 13 ರಿಂದ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಗೆ ಅವರ ಮೆರವಣಿಗೆಯನ್ನು ತಡೆದ ನಂತರ ರೈತರು ಇಲ್ಲಿ ಪ್ರತಿಭಟನೆಗೆ ಕುಳಿತಿದ್ದಾರೆ.

ಖ್ಯಾತ ಕ್ರೀಡಾಪಟು ಮತ್ತು ರೈತ ಚಳವಳಿಯ ಬೆಂಬಲಿಗರಾದ ವಿನೇಶ್ ಫೋಗಟ್ ಅವರನ್ನು ದಿನದ ಕಾರ್ಯಕ್ರಮಗಳಲ್ಲಿ ರೈತರು ಸನ್ಮಾನಿಸಿದರು.

“ಇವರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ, ಇದನ್ನು ನೋಡುವುದು ನೋವುಂಟುಮಾಡುತ್ತದೆ, ಅವರೆಲ್ಲರೂ ಈ ದೇಶದ ನಾಗರಿಕರು, ರೈತರು ದೇಶವನ್ನು ನಡೆಸುತ್ತಾರೆ, ಅವರಿಲ್ಲದೆ ಏನೂ ಸಾಧ್ಯವಿಲ್ಲ. ಅವರು ನಮಗೆ ಆಹಾರವನ್ನು ನೀಡದಿದ್ದರೆ ಕ್ರೀಡಾಪಟುಗಳಿಗೂ ಏನೂ ಮಾಡಲು ಆಗುವುದಿಲ್ಲ. ನಾವು ಅನೇಕ ಬಾರಿ ಅಸಹಾಯಕರಾಗಿದ್ದೇವೆ. ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ, ನಾವು ಅಂತಹ ದೊಡ್ಡ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುತ್ತೇವೆ. ಆದರೆ ಅವರು ದುಃಖಿತರಾಗಿರುವುದನ್ನು ನೋಡಿದಾಗಲೂ ನಮ್ಮಿಂದ ಅವರ ಕುಟುಂಬಕ್ಕಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ರೈತರ ಸಮಸ್ಯೆ ಆಲಿಸಬೇಕು ಎಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಕಳೆದ ಬಾರಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದ ಅವರು ಕೊಟ್ಟ ಭರವಸೆಯನ್ನು ಈಡೇರಿಸಬೇಕು. ಜನರು ಹೀಗೆ ಬೀದಿಯಲ್ಲಿ ಕುಳಿತರೆ ದೇಶ ಪ್ರಗತಿಯಾಗುವುದಿಲ್ಲ ಎಂದು ವಿನೇಶ್ ಹೇಳಿದ್ದಾರೆ.

ವಿನೇಶ್ ಅವರು ಮಹಿಳೆಯರ 50 ಕೆಜಿ ವಿಭಾಗದಲ್ಲಿ ಫೈನಲ್‌ಗೆ ತಲುಪಿದ ನಂತರ ತೂತ ಜಾಸ್ತಿ ಎಂಬ ಕಾರಣದಿಂದಾಗಿ ಅವರು ಫೈನಲ್ ಪಂದ್ಯಕ್ಕೆ ಅನರ್ಹರಾಗಿದ್ದರು. ಚಿನ್ನ ಅಥವಾ ಬೆಳ್ಳಿ ಪದಕ ನಿರೀಕ್ಷೆಯಲ್ಲಿದ್ದ ವಿನೇಶ್ ಅನರ್ಹತೆಯಿಂದಾಗಿ ಬರಿಗೈಯಲ್ಲಿ ಭಾರತಕ್ಕೆ ಮರಳಿದರು. ಇದಾದ ನಂತರ ವಿನೇಶ್ ಕುಸ್ತಿಯಿಂದ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದರು.

ಅಮೃತಸರ ಜಿಲ್ಲೆಯ ರೈತ ಮುಖಂಡ ಬಲದೇವ್ ಸಿಂಗ್ ಬಗ್ಗಾ ಅವರು ಸರ್ಕಾರದೊಂದಿಗೆ ಸಂವಹನ ನಡೆಸುವ ಪ್ರಯತ್ನಗಳಿಗೆ ಉತ್ತರವಿಲ್ಲ ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

‘ರೈತ ಸಂಘಟನೆಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮೋದಿ ಅಧಿಕಾರಕ್ಕೆ 11ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಬದಲು ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ” ಬಲದೇವ್ ಸಿಂಗ್ ಬಗ್ಗಾ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಕಿಸಾನ್ ಮಜ್ದೂರ್ ಮೋರ್ಚಾದ ಸಂಚಾಲಕ ಸರ್ವನ್ ಸಿಂಗ್ ಪಂಧೇರ್ ಅವರು ಆಗಸ್ಟ್ 31 ರಂದು ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ರೈತರು ಸೇರಬೇಕೆಂದು ಮನವಿ ಮಾಡಿದರು.  “ನಾವು ಮತ್ತೊಮ್ಮೆ ನಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಪ್ರಸ್ತುತಪಡಿಸುತ್ತೇವೆ. ಹೊಸ ಘೋಷಣೆಗಳನ್ನು ಮಾಡಲಾಗುವುದು” ಎಂದು ಪಂಧೇರ್ ಹೇಳಿದ್ದಾರೆಂದು ಇಂಡಿಯಾ ಟುಡೇ ಉಲ್ಲೇಖಿಸಿದೆ.

ಇದನ್ನೂ ಓದಿ: ದೆಹಲಿಯ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಧರ್ಮೇಂದ್ರ ನೇಮಕ

ಕಂಗನಾ ರಣಾವತ್ ವಿರುದ್ಧ ಕ್ರಮ ಕೈಗೊಳ್ಳಿ

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ವಿರುದ್ಧವೂ ಕಠಿಣ ಕ್ರಮಕ್ಕೆ ರೈತರು ಒತ್ತಾಯಿಸಿದ್ದಾರೆ. ಕಂಗನಾ ರಣಾವತ್ ಅವರ ಹಿಂದಿನ ಹೇಳಿಕೆಗಳು ರೈತ ಸಮುದಾಯವನ್ನು ಕೆರಳಿಸಿದ್ದು ಆಕೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಅವರು ಬಿಜೆಪಿಯನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿಯಾಗಿ, ಮುಂಬರುವ ಹರ್ಯಾಣ ಚುನಾವಣೆಗೆ ತಮ್ಮ ಕಾರ್ಯತಂತ್ರವನ್ನು ಅನಾವರಣಗೊಳಿಸುವ ಬಗ್ಗೆ ರೈತರು ಸುಳಿವು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Sat, 31 August 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?