Watch: ಪ್ರತಿಭಟನಾ ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್​​ಗೆ ಹೇಳಿದ ಕುಸ್ತಿಪಟು ಬಜರಂಗ್ ಪುನಿಯಾ

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪುನಿಯಾ ರಾಜಕಾರಣಿ ಬೃಂದಾ ಕಾರಟ್ ಅವರಲ್ಲಿ ದಯವಿಟ್ಟು  ವೇದಿಕೆಯಿಂದ ಕೆಳಗಿಳಿಯಿರಿ ಎಂದು ನೇರಾ ನೇರ ಹೇಳಿದ್ದಾರೆ.

Watch: ಪ್ರತಿಭಟನಾ ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್​​ಗೆ ಹೇಳಿದ ಕುಸ್ತಿಪಟು ಬಜರಂಗ್ ಪುನಿಯಾ
ವೇದಿಕೆಯಿಂದ ಕೆಳಗಿಳಿಯುವಂತೆ ಬೃಂದಾ ಕಾರಟ್​​ಗೆ ಹೇಳಿದ ಪೂನಿಯಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 19, 2023 | 6:01 PM

ಅಥ್ಲೀಟ್‌ಗಳ ಮೇಲೆ ಲೈಂಗಿಕ ಶೋಷಣೆ ನಡೆಸಿದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (Wrestling Federation of India) ಮುಖ್ಯಸ್ಥರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕುಸ್ತಿಪಟುಗಳು ಎರಡನೇ ದಿನವೂ ಜಂತರ್ ಮಂತರ್​​ನಲ್ಲಿ ಧರಣಿ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ. ಇಂದು ಗುರುವಾರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕಿ ಬೃಂದಾ ಕಾರಟ್ (Brinda Karat) ದೆಹಲಿಯ ಜಂತರ್ ಮಂತರ್ ತಲುಪಿದ್ದಾರೆ. ಈ ಹೊತ್ತಲ್ಲಿ ಒಲಿಂಪಿಯನ್ ಬಜರಂಗ್ ಪುನಿಯಾ (Bajrang Punia),  ರಾಜಕಾರಣಿ ಬೃಂದಾ ಕಾರಟ್ ಅವರಲ್ಲಿ ದಯವಿಟ್ಟು  ವೇದಿಕೆಯಿಂದ ಕೆಳಗಿಳಿಯಿರಿ ಎಂದು ನೇರಾ ನೇರ ಹೇಳಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಹಂಚಿಕೊಂಡ ವಿಡಿಯೊದಲ್ಲಿ, 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಪುನಿಯಾ, “ಪ್ರತಿಭಟನೆಯು ರಾಜಕೀಯ ರೂಪವನ್ನು ಪಡೆಯುವುದನ್ನು ನಾವು ಬಯಸುವುದಿಲ್ಲ” ಎಂದು ಹೇಳುವುದನ್ನು ಕೇಳಬಹುದು.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಪುನಿಯಾ ಇತರರು ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ (ಡಬ್ಲ್ಯುಎಫ್‌ಐ) ಅಚ್ಚುಮೆಚ್ಚಿನ ತರಬೇತುದಾರರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಮತ್ತು ಅವರಿಗೆ ಕಿರುಕುಳ ನೀಡುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ. ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಸೋಲಿನ ನಂತರ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಅವರು “ಖೋಟಾ ಸಿಕ್ಕಾ” ಎಂದು ಕರೆದಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ; ದೆಹಲಿಯ ಜಂತರ್‌ಮಂತರ್‌ನಲ್ಲಿ ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ಏತನ್ಮಧ್ಯೆ, ಚಾಂಪಿಯನ್ ಕುಸ್ತಿಪಟು ಮತ್ತು ಬಿಜೆಪಿ ನಾಯಕಿ ಬಬಿತಾ ಫೋಗಟ್ ಗುರುವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಆಟಗಾರರಿಗೆ ಸರ್ಕಾರ ತಮ್ಮೊಂದಿಗೆ ಇದೆ ಎಂದು ಭರವಸೆ ನೀಡಿದರು. “ಅವರ ಸಮಸ್ಯೆಗಳನ್ನು ಇಂದು ಪರಿಹರಿಸಲು ನಾನು ಪ್ರಯತ್ನಿಸುತ್ತೇನೆ” ಎಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಬಿತಾ ಫೋಗಟ್ ಹೇಳಿದರು.

ಬಿಜೆಪಿಯ ಲೋಕಸಭಾ ಸಂಸದರಾದ ಬ್ರಿಜ್ ಭೂಷಣ್ ತಮ್ಮ ಮೇಲಿನ ಆರೋಪಗಳನ್ನು ತಿರಸ್ಕರಿಸಿದ್ದು ಆರೋಪಗಳನ್ನು ಮಾಡಿದ ಕುಸ್ತಿಪಟುಗಳು ಫೆಡರೇಶನ್ ಅನ್ನು ಮೊದಲೇ ಸಂಪರ್ಕಿಸಬೇಕಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Thu, 19 January 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್