AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sushil Kumar; ಕೊಲೆ ಆರೋಪ ಹೊತ್ತು ಪರಾರಿಯಲ್ಲಿದ್ದ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ಸುಶೀಲ್ ಕುಮಾರ್ ಬಂಧನ; 23 ವರ್ಷದ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಅಂತಿಮವಾಗಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

Sushil Kumar; ಕೊಲೆ ಆರೋಪ ಹೊತ್ತು ಪರಾರಿಯಲ್ಲಿದ್ದ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ
ಸುಶೀಲ್ ಕುಮಾರ್
ಪೃಥ್ವಿಶಂಕರ
|

Updated on:May 22, 2021 | 10:27 PM

Share

ನವದೆಹಲಿ: ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ 23 ವರ್ಷದ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಅಂತಿಮವಾಗಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸುಶೀಲ್ ಕುಮಾರ್​ಗೆ ಪಂಜಾಬ್ನಲ್ಲಿ ದೆಹಲಿ ಪೊಲೀಸರು ಕೈಕೋಳ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಸುಶೀಲ್ ಕುಮಾರ್ ಮತ್ತು ಆತನ ಖಾಸಗಿ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಸುಶೀಲ್ ಕುಮಾರ್ ಬಂಧನಕ್ಕಾಗಿ ದೆಹಲಿ ಪೊಲೀಸರು ಪಂಜಾಬ್ ಮತ್ತು ಹರಿಯಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು.

ಪೊಲೀಸರು ಬಹುಮಾನವನ್ನೂ ಘೋಷಿಸಿದ್ದರು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಕಳೆದ ಕೆಲವು ದಿನಗಳಿಂದ ಪರಾರಿಯಾಗಿದ್ದರು. ಆತನನ್ನು ಸೆರೆಹಿಡಿಯುವುದಕ್ಕಾಗಿ ಪೊಲೀಸರು ಬಹುಮಾನವನ್ನೂ ಘೋಷಿಸಿದ್ದರು. ಒಂದು ಲಕ್ಷ ರೂ.ಗಳನ್ನು ಸುಶೀಲ್ ಕುಮಾರ್ ಮತ್ತು 50,000 ರೂ ಅಜಯ್ ಕುಮಾರ್ ಅವರ ಸುಳಿವು ನೀಡಿದವರಿಗೆ ಕೊಡುವುದಾಗಿ ಘೋಷಿಸಲಾಗಿತ್ತು. ಸಾಗರ್ ರಾಣಾ ಹತ್ಯೆಯಾದಾಗಿನಿಂದ ಕುಸ್ತಿಪಟು ಸುಶೀಲ್ ಕುಮಾರ್ ಪರಾರಿಯಲ್ಲಿದ್ದರು.

ಆತನ ಮತ್ತು ಇತರ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ ಎಂದು ಪೊಲೀಸರು ಊಹಿಸಿದ್ದರು. ಅದೇ ಸಮಯದಲ್ಲಿ, ಸುಶೀಲ್ ಕುಮಾರ್ ಬಂಧನವನ್ನು ತಪ್ಪಿಸಲು ನ್ಯಾಯಾಲಯದಲ್ಲಿ ಪೂರ್ವ ಬಂಧನ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಸುಶೀಲ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ರೋಹಿಣಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.

ಅಂದು ನಡೆದಿದ್ದೇನು? ಮೃತ ಕುಸ್ತಿಪಟು ಸಾಗರ್ ರಾಣಾ ತನ್ನ ಸ್ನೇಹಿತರೊಂದಿಗೆ ಛತ್ರಸಾಲ್ ಕ್ರೀಡಾಂಗಣದ ಬಳಿಯ ಮಾಡೆಲ್ ಟೌನ್ ಪ್ರದೇಶದ ಮನೆಯಲ್ಲಿ ವಾಸಿಸುತ್ತಿದ್ದ. ಸ್ಥಳದ ವಿಚಾರವಾಗಿ ಕಳೆದ ಮಂಗಳವಾರ (ಮೇ 4) ಮಧ್ಯರಾತ್ರಿ ಎರಡು ಗುಂಪುಗಳ ನಡುವೆ ಜಗಳ ಮತ್ತು ಗುಂಡಿನ ಚಕಮಕಿಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಆ ಸಮಯದಲ್ಲಿ ಸುಶೀಲ್ ಕುಮಾರ್ ಕೂಡ ಹಾಜರಿದ್ದರು ಎಂದು ಸಂತ್ರಸ್ತರು ಹೇಳಿದ್ದಾರೆ.

ಗಾಯಗೊಂಡ ಕುಸ್ತಿಪಟುಗಳಲ್ಲಿ, ಸಾಗರ್ ರಾಣಾ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರೆ, ಇತರರು ಗಾಯಗೊಂಡಿದ್ದಾರೆ. ಘಟನಾ ಸ್ಥಳದಿಂದ ಪೊಲೀಸರು ಸ್ಕಾರ್ಪಿಯೋ ಕಾರು ಮತ್ತು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಲೈವ್ ಕಾರ್ಟ್ರಿಜ್ಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ಕುಸ್ತಿಪಟುಗಳ ಗುಂಪು ಆಸ್ತಿಯ ಬಗ್ಗೆ ವಿವಾದ ಹುಟ್ಟು ಹಾಕಿತ್ತು ಎಂದು ತಿಳಿದುಬಂದಿದೆ.

ಸುಶೀಲ್ ಕುಮಾರ್ ಯಾರು? ಎರಡು ವೈಯಕ್ತಿಕ ಒಲಿಂಪಿಕ್ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಕ್ರೀಡಾಪಟು ಸುಶೀಲ್ ಕುಮಾರ್. 37 ವರ್ಷದ ಸುಶೀಲ್ ಕುಮಾರ್ ಅವರು 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಮತ್ತು 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. 2008 ರಲ್ಲಿ ಸುಶೀಲ್ ಕುಮಾರ್ ಅವರು ಗೆದ್ದ ಪದಕವು ಖಶಾಬಾ ಜಾಧವ್ ನಂತರ ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಭಾರತ ಗೆದ್ದ ಎರಡನೇ ಪದಕವಾಗಿದೆ. ಅವರಿಗೆ 2009 ರಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲಾಯಿತು.

Published On - 10:11 pm, Sat, 22 May 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್