ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ

Lok Sabha Speaker Election: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಕೆ
ಓಂ ಬಿರ್ಲಾ, ಕೆ ಸುರೇಶ್​Image Credit source: Deccan Chronicle
Follow us
ನಯನಾ ರಾಜೀವ್
|

Updated on:Jun 25, 2024 | 1:09 PM

72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​(Lok Sabha Speaker) ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ(Om Birla) ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸ್ವತಂತ್ರ ಭಾರತದಲ್ಲಿ 1952ರಲ್ಲಿ ಮೊಟ್ಟ ಮೊದಲ ಬಾರಿಗೆ ಜಿವಿ ಮಾಳವಂಕರ್ ಮತ್ತು ಶಂಕರ್ ಶಾಂತಾರಾಮ್ ನಡುವೆ ಸ್ಪೀಕರ್ ಹುದ್ದೆಗೆ ಚುನಾವಣೆ ಪೈಪೋಟಿ ಏರ್ಪಟ್ಟಿತ್ತು. ಆ ಬಳಿಕ 1976ರಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ಸಮಯದಲ್ಲಿ ಬಲಿಗ್ರಾಮ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದಿತ್ತು.

ಈಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

ಮತ್ತಷ್ಟು ಓದಿ:

ಈ ಹಿಂದೆ, ಸ್ಪೀಕರ್ ಚುನಾವಣೆಗೆ ಒಮ್ಮತ ಮೂಡಿಸಲು ಎನ್​ಡಿಎ ಪ್ರಯತ್ನ ಡನೆಸಿತು ಹಾಗೂ ಬಿಜೆಪಿಯ ಹಿರಿಯ ನಾಯಕರು ಇಂಡಿಯಾ ಬ್ಲಾಕ್​ನ ನಾಯಕರೊಂದಿಗೆ ಮಾತುಕತೆ ನಡೆಸಿದರು. ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಮತ್ತು ಸಂಶದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು ವಿವಿಧ ನಾಯಕರನ್ನು ಭೇಟಿ ಮಾಡಿ ಮಾತನಾಡಿದರು.

ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

ಕೆ ಸುರೇಶ್​ ನಾಮಪತ್ರಕ್ಕೆ ಇಂಡಿಯಾ ಬ್ಲಾಕ್​ನ ಮಿತ್ರಪಕ್ಷಗಳಾದ ಡಿಎಂಕೆ, ಶಿವಸೇನೆ, ಶರದ್​ಪವಾರ್​(ಎನ್​ಸಿಪಿ) ಹಾಗೂ ಇತರೆ ಪ್ರಮುಖ ಪಕ್ಷಗಳು ಸಹಿ ಹಾಕಿವೆ. ಮಮತಾ ಬ್ಯಾನರ್ಜಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್​ಡಿಎ ಪರವಾಗಿ ಓಂ ಬಿರ್ಲಾ ನಾಮಪತ್ರ ಸಲ್ಲಿಸಿದ್ದರು. ಆಡಳಿತ ಪಕ್ಷಕ್ಕೆ ಸಂಪೂರ್ಣ ಬಹುಮತವಿದೆ, ಎನ್​ಡಿಎಗೆ 292 ಸಂಸದರ ಬೆಂಬಲವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:08 pm, Tue, 25 June 24

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್