ಈದ್‌ ಮಿಲಾದ್​ ದಿನವೇ ಶ್ರೀನಗರದಲ್ಲಿ ಪರಿಶೀಲನಾ ಸಭೆ; ಕೇಂದ್ರ ಸರ್ಕಾರದ ವಿರುದ್ಧ ಒಮರ್ ಅಬ್ದುಲ್ಲಾ ಟೀಕೆ

|

Updated on: Jun 18, 2024 | 4:13 PM

ಉತ್ತರ ಪ್ರದೇಶದಲ್ಲಿ ದೀಪಾವಳಿ ಮತ್ತು ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯಂದು ಇದೇ ರೀತಿಯ ಸಭೆಗಳನ್ನು ನಡೆಸುವಂತೆ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸವಾಲು ಹಾಕಿದ್ದಾರೆ.

ಈದ್‌ ಮಿಲಾದ್​ ದಿನವೇ ಶ್ರೀನಗರದಲ್ಲಿ ಪರಿಶೀಲನಾ ಸಭೆ; ಕೇಂದ್ರ ಸರ್ಕಾರದ ವಿರುದ್ಧ ಒಮರ್ ಅಬ್ದುಲ್ಲಾ ಟೀಕೆ
ಒಮರ್ ಅಬ್ದುಲ್ಲಾ
Follow us on

ಶ್ರೀನಗರ: ಈದ್ ಮಿಲಾದ್ ಹಬ್ಬದ (Eid Milad Festival) ದಿನದಂದು ಶ್ರೀನಗರದಲ್ಲಿ ಪರಿಶೀಲನಾ ಸಭೆ ನಡೆಸಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ (Omar Abdullah) ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ದೀಪಾವಳಿ (Deepavali) ಮತ್ತು ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯಂದು ಇದೇ ರೀತಿಯ ಸಭೆಗಳನ್ನು ನಡೆಸಲು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಕೇಂದ್ರ ಸಚಿವರಿಗೆ ಸವಾಲು ಹಾಕಿದ್ದಾರೆ.

ಉತ್ತರ ಪ್ರದೇಶದ ದೀಪಾವಳಿ ಅಥವಾ ಮಹಾರಾಷ್ಟ್ರದ ಗಣೇಶ ಚತುರ್ಥಿಯಂದು ಅವರು ಈ ರೀತಿಯ ಸಭೆಗಳನ್ನು ಎಂದಿಗೂ ನಡೆಸುವುದಿಲ್ಲ. ಬಹಳ ಸಂವೇದನಾಶೀಲವಾದ ಈ ಬಿಜೆಪಿ ಸರ್ಕಾರ ಮತ್ತು ಅದರ ಜಮ್ಮು ಮತ್ತು ಕಾಶ್ಮೀರ ಶಾಖೆಯಿಂದ ನಾವು ಉತ್ತಮವಾದದ್ದನ್ನು ನಿರೀಕ್ಷಿಸಿದ್ದೇವೆ ಎಂದು ಒಮರ್ ಅಬ್ದುಲ್ಲಾ ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ; ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಪರಿಶೀಲನೆ

ಜಮ್ಮು ಮತ್ತು ಕಾಶ್ಮೀರದಲ್ಲಿನ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷವಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಅಡಿಯಲ್ಲಿ ಬರುವ ಯೋಜನೆಗಳ ಬಗ್ಗೆ ಸಭೆ ನಡೆಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ