ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಮರ್ ಅಬ್ದುಲ್ಲಾ ಸಂಪುಟದ ಭಾಗವಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಅವರು ಒಮರ್ ಅಬ್ದುಲ್ಲಾ ಮತ್ತು ಅವರ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.
ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಗುಲಾಮ್ ಅಹ್ಮದ್ ಮಿರ್ ಅವರನ್ನು ಕಾಂಗ್ರೆಸ್ ಮಂಗಳವಾರ ನೇಮಕ ಮಾಡಿದೆ.
ಪ್ರಸ್ತುತ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಉಸ್ತುವಾರಿ ಭರತ್ ಸಿಂಗ್ ಸೋಲಂಕಿ ಹೇಳಿದ್ದಾರೆ. ಚರ್ಚೆ ಪೂರ್ಣಗೊಂಡ ನಂತರವೇ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗುವುದು.
ಪೂರ್ಣಗೊಳ್ಳದ ಕಾರಣ ಇಂದು ಯಾವುದೇ ಕಾಂಗ್ರೆಸ್ ಶಾಸಕರು ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ಕಾಂಗ್ರೆಸ್ ಸರ್ಕಾರದ ಭಾಗವಾಗಿ ಉಳಿಯುತ್ತದೆಯೇ ಅಥವಾ ಹೊರಗಿನಿಂದ ಬೆಂಬಲಿಸುತ್ತದೆಯೇ ಎಂಬ ಚರ್ಚೆಯೂ ನಡೆಯುತ್ತಿದೆ.
90 ಸ್ಥಾನಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 42 ಮತ್ತು ಕಾಂಗ್ರೆಸ್ 6 ವಿಧಾನಸಭಾ ಸ್ಥಾನಗಳನ್ನು ಗೆದ್ದಿವೆ. ಅದೇ ಸಮಯದಲ್ಲಿ ಬಿಜೆಪಿ 29 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಮೆಹಬೂಬಾ ಮುಫ್ತಿ ಅವರ ಪಕ್ಷವಾದ ಪಿಡಿಪಿ ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಚುನಾವಣಾ ಪೂರ್ವ ಮೈತ್ರಿಕೂಟದಿಂದ 49 ಶಾಸಕರಿದ್ದು, ಇದೀಗ ಐವರು ಸ್ವತಂತ್ರ ಶಾಸಕರು ಕೂಡ ಒಮರ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ, ಆಮ್ ಆದ್ಮಿ ಪಕ್ಷವು ಕೂಡ ಬೆಮಬಲ ನೀಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:41 am, Wed, 16 October 24