ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅ. 16ರಂದು ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಭರ್ಜರಿ ಗೆಲುವಿನ ನಂತರ ಒಮರ್ ಅಬ್ದುಲ್ಲಾ ಅವರು ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಅವರು ಬುಧವಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರ ರಚನೆಗೆ ಇನ್ನು ಒಂದೇ ದಿನ ಬಾಕಿ ಉಳಿದಿದೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಅಕ್ಟೋಬರ್ 16ರಂದು ಬೆಳಿಗ್ಗೆ 11.30ಕ್ಕೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಮರ್ ಅಬ್ದುಲ್ಲಾ ಅವರು ಇಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಂದ ಪತ್ರವನ್ನು ಸ್ವೀಕರಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ಸರ್ಕಾರ ರಚಿಸಲು ಅವರನ್ನು ಮನೋಜ್ ಸಿನ್ಹಾ ಆಹ್ವಾನಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಕೇಂದ್ರವು ಹಿಂಪಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಒಮರ್ ಅಬ್ದುಲ್ಲಾ ಅವರಿಗೆ ಬರೆದ ಪತ್ರದಲ್ಲಿ ಮನೋಜ್ ಸಿನ್ಹಾ ಅವರು, “ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರಿಂದ 2024ರ ಅಕ್ಟೋಬರ್ 11ರ ಪತ್ರವನ್ನು ನಾನು ಸ್ವೀಕರಿಸಿದ್ದೇನೆ. ಅದರಲ್ಲಿ ನಿಮ್ಮನ್ನು ಶಾಸಕಾಂಗದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ನಿಮ್ಮನ್ನು ಸರ್ಕಾರ ರಚಿಸಲು ಆಹ್ವಾನಿಸಲು ನನಗೆ ಸಂತಸವಾಗುತ್ತಿದೆ” ಎಂದು ಬರೆದಿದ್ದಾರೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದ ನಾಯಕ ಒಮರ್ ಅಬ್ದುಲ್ಲಾ ಪ್ರಧಾನಿ ಮೋದಿಯತ್ತ ವಾಲುತ್ತಿರುವುದೇಕೆ?
“ಪ್ರತ್ಯೇಕವಾಗಿ ಇತ್ಯರ್ಥಪಡಿಸಿದಂತೆ, ನಾನು ನಿಮಗೆ ಮತ್ತು ನಿಮ್ಮ ಮಂತ್ರಿಗಳ ಪರಿಷತ್ತಿನ ಸದಸ್ಯರಾಗಿ ಸೇರ್ಪಡೆಗೊಳ್ಳಲು ನೀವು ಶಿಫಾರಸು ಮಾಡಿದವರಿಗೆ ಅಕ್ಟೋಬರ್ 16ರಂದು ಬೆಳಿಗ್ಗೆ 11.30ಕ್ಕೆ ಶ್ರೀನಗರದ SKICCಯಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸುತ್ತೇನೆ” ಎಂದು ಸಿನ್ಹಾ ಹೇಳಿದ್ದಾರೆ.
ಒಮರ್ ಅಬ್ದುಲ್ಲಾ ಅಕ್ಟೋಬರ್ 10 ರಂದು ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಚುನಾವಣಾ ವಿಜಯದ ನಂತರ, ಒಮರ್ ಅಬ್ದುಲ್ಲಾ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಯಾಗುತ್ತಾರೆ ಎಂದು ಘೋಷಿಸಿದರು.
Was pleased to receive the Principal Secretary to LG Manoj Sinha ji. He handed over a letter from the @OfficeOfLGJandK inviting me to form the next government in J&K. pic.twitter.com/D2OeFJwlKi
— Omar Abdullah (@OmarAbdullah) October 14, 2024
ಅಕ್ಟೋಬರ್ 11ರಂದು ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಎಲ್ಜಿ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಅವರ ಪಕ್ಷದ ನೇತೃತ್ವದ ಮೈತ್ರಿ ಬಹುಮತದೊಂದಿಗೆ ಜಯಗಳಿಸಿದ ನಂತರ ಸರ್ಕಾರ ರಚಿಸಲು ಬೆಂಬಲ ಪತ್ರವನ್ನು ನೀಡಿದರು.
ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ 6 ವರ್ಷಗಳ ಬಳಿಕ ರಾಷ್ಟ್ರಪತಿ ಆಡಳಿತ ಅಂತ್ಯ, ಸರ್ಕಾರ ರಚನೆಗೆ ಸಿದ್ಧತೆ
ಒಮರ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ನಾಲ್ವರು ಸ್ವತಂತ್ರ ಶಾಸಕರು ಪಕ್ಷಕ್ಕೆ ಸೇರುವ ನಿರ್ಧಾರದ ನಂತರ ಬಹುಮತವನ್ನು ಸಾಧಿಸಿದೆ. ಈ ಸೇರ್ಪಡೆಯೊಂದಿಗೆ ಅಸೆಂಬ್ಲಿಯಲ್ಲಿ ಎನ್‌ಸಿಯ ಬಲವು 46ಕ್ಕೆ ಏರಿರಿಕೆಯಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (ಎಎಪಿ) ಕೂಡ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ)ಗೆ ತನ್ನ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿತು.
ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಒಮರ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) 42 ಸ್ಥಾನಗಳನ್ನು ಗೆದ್ದಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) 29 ಸ್ಥಾನಗಳನ್ನು ಗೆದ್ದುಕೊಂಡಿದೆ,
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ