AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron ಮಹಾರಾಷ್ಟ್ರದಲ್ಲಿ 7, ರಾಜಸ್ಥಾನದಲ್ಲಿ 9 ಮಂದಿಗೆ ಒಮಿಕ್ರಾನ್ ದೃಢ; ದೇಶದಲ್ಲಿ ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆ

ನೈಜೀರಿಯಾದಿಂದ ಪುಣೆ ಬಳಿಯ ಪಿಂಪ್ರಿ-ಚಿಂಚ್‌ವಾಡ್‌ಗೆ ಬಂದ 44 ವರ್ಷದ ಮಹಿಳೆ, ಅವರ ಇಬ್ಬರು ಪುತ್ರಿಯರು, ಅವರ ಸಹೋದರ ಮತ್ತು ಅವರ ಇಬ್ಬರು ಪುತ್ರಿಯರಿಗೆ ಒಮಿಕ್ರಾನ್ ದೃಢಪಟ್ಟಿದೆ. ಕಳೆದ ತಿಂಗಳು ಫಿನ್‌ಲ್ಯಾಂಡ್‌ಗೆ ಪ್ರಯಾಣಿಸಿದ್ದ 47 ವರ್ಷದ ವ್ಯಕ್ತಿಗೆ ಕೂಡಾ ಒಮಿಕ್ರಾನ್ ಇರುವುದು ಪತ್ತೆಯಾಗಿದೆ.

Omicron ಮಹಾರಾಷ್ಟ್ರದಲ್ಲಿ 7, ರಾಜಸ್ಥಾನದಲ್ಲಿ 9 ಮಂದಿಗೆ ಒಮಿಕ್ರಾನ್ ದೃಢ; ದೇಶದಲ್ಲಿ ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 05, 2021 | 9:30 PM

Share

ದೆಹಲಿ: ಮಹಾರಾಷ್ಟ್ರದಲ್ಲಿ(Maharashtra) ಭಾನುವಾರದಂದು ಏಳು ಹೊಸ ಮಾದರಿಗಳಲ್ಲಿ ಕೊರೊನಾವೈರಸ್  (Coronavirus) ಕಾಯಿಲೆಯ ಒಮಿಕ್ರಾನ್ ರೂಪಾಂತರವು(Omicron variant) ಸೋಂಕಿಗೆ ಕಾರಣ ಎಂದು ಪತ್ತೆಯಾಗಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿದೆ. ಅದೇ ವೇಳೆ ಜೈಪುರದಲ್ಲಿ(Jaipur) ಒಂದೇ ಕುಟುಂಬದ 9 ಜನರಿಗೆ ಒಮಿಕ್ರಾನ್ ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದ ಕುಟುಂಬದಲ್ಲಿ ಮೂವರು ಮಕ್ಕಳು ಸೇರಿದಂತೆ 9 ಜನರಿಗೆ ಒಮಿಕ್ರಾನ್ ದೃಢಪಟ್ಟಿದ್ದು, ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ ಆಗಿದೆ.  ನೈಜೀರಿಯಾದಿಂದ ಪುಣೆ ಬಳಿಯ ಪಿಂಪ್ರಿ-ಚಿಂಚ್‌ವಾಡ್‌ಗೆ ಬಂದ 44 ವರ್ಷದ ಮಹಿಳೆ, ಅವರ ಇಬ್ಬರು ಪುತ್ರಿಯರು, ಅವರ ಸಹೋದರ ಮತ್ತು ಅವರ ಇಬ್ಬರು ಪುತ್ರಿಯರಿಗೆ ಒಮಿಕ್ರಾನ್ ದೃಢಪಟ್ಟಿದೆ. ಕಳೆದ ತಿಂಗಳು ಫಿನ್‌ಲ್ಯಾಂಡ್‌ಗೆ ಪ್ರಯಾಣಿಸಿದ್ದ 47 ವರ್ಷದ ವ್ಯಕ್ತಿಗೆ ಕೂಡಾ ಒಮಿಕ್ರಾನ್ ಇರುವುದು ಪತ್ತೆಯಾಗಿದೆ. ಈ ಹಿಂದೆ ಪುಣೆಯ ಆರೋಗ್ಯ ಅಧಿಕಾರಿಯೊಬ್ಬರು ವಿದೇಶಿ ಪ್ರವಾಸದಿಂದ ಹಿಂದಿರುಗಿದ ನಾಲ್ವರು ಮತ್ತು ಅವರ ನಿಕಟ ಸಂಪರ್ಕದಲ್ಲಿರುವ ಮೂವರು ಒಮಿಕ್ರಾನ್ ರೂಪಾಂತರಕ್ಕೆ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ ಎಂದು ಹೇಳಿದರು.  ಭಾರತದಲ್ಲಿ ಒಮಿಕ್ರಾನ್‌ನ ಮೊದಲ ಎರಡು ಪ್ರಕರಣಗಳು, ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಮೊದಲು ವರದಿಯಾಗಿದೆ. ಶನಿವಾರ ಮೂರನೇ ಮತ್ತು ನಾಲ್ಕನೇ ಸೋಂಕಿನ ಪ್ರಕರಣಗಳು ಕ್ರಮವಾಗಿ ಗುಜರಾತ್‌ನ ಜಾಮ್‌ನಗರ ಮತ್ತು ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ವರದಿಯಾಗಿದೆ. ರೂಪಾಂತರಕ್ಕೆ ಧನಾತ್ಮಕ ಪರೀಕ್ಷೆ ಮಾಡಿದ ಐದನೇ ವ್ಯಕ್ತಿ ದೆಹಲಿಯಲ್ಲಿ ತಾಂಜಾನಿಯಾದಿಂದ ಹಿಂದಿರುಗಿದವರಾಗಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ ನವೆಂಬರ್ 25 ರಂದು ದಕ್ಷಿಣ ಆಫ್ರಿಕಾದಿಂದ B.1.1.529 ಸೋಂಕಿನ ಮೊದಲ ಪ್ರಕರಣ ವರದಿಯಾಗಿದೆ. ಇದು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಬಂದಿದೆ. ಜಾಗತಿಕ ಆರೋಗ್ಯ ಸಂಸ್ಥೆಯು ಒಮಿಕ್ರಾನ್ ಅನ್ನು ‘ಕಳವಳಿಕೆಯ ರೂಪಾಂತರ’ ಎಂದು ವರ್ಗೀಕರಿಸಿದೆ.

ಅಂದಿನಿಂದ ಡಜನ್‌ಗಟ್ಟಲೆ ದೇಶಗಳು ದಕ್ಷಿಣ ಆಫ್ರಿಕಾದ ರಾಷ್ಟ್ರಗಳ ಮೇಲೆ ಪ್ರಯಾಣ ನಿರ್ಬಂಧಗಳನ್ನು ವಿಧಿಸಿವೆ. 23 ದೇಶಗಳಲ್ಲಿ ರೂಪಾಂತರವನ್ನು ದೃಢೀಕರಿಸಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :  Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ

Follow Us
TV9 Web
TV9 Web

TV9 Kannada

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ