ಎಲ್ಲಾ ಜನರು ಒಂದೇ ಕುಟುಂಬದವರು; ಬರಾಕ್ ಒಬಾಮ ಹೇಳಿಕೆ ತಿರುಗೇಟು ನೀಡಿದ ರಾಜನಾಥ್ ಸಿಂಗ್
ಸಿಎನ್‌ಎನ್‌ಗೆ ನೀಡಿದ ಸಂದರ್ಶನದಲ್ಲಿ, ಅಮೆರಿಕದ ಮಾಜಿ ಅಧ್ಯಕ್ಷರು ಭಾರತದಲ್ಲಿನ ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯ ಬಗ್ಗೆ ಮಾತನಾಡಿದ್ದರು. ಭಾರತ ಸರ್ಕಾರವು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ಭಾರತ ಪ್ರತ್ಯೇಕವಾಗಿ ಉಳಿಯುವ ಅಪಾಯವಿದೆ ಎಂದಿದ್ದರು ಅವರು.
ಭಾರತದಲ್ಲಿರುವ ಮುಸ್ಲಿಮರ ಬಗ್ಗೆ ಅಮೆರಿಕದ (US) ಮಾಜಿ ಅಧ್ಯಕ್ಷ ಬರಾಕ್ ಒಬಾಮ (Barack Obama) ಮಾಡಿದ್ದ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೋಮವಾರ ತಿರುಗೇಟು ನೀಡಿದ್ದಾರೆ. ಜಗತ್ತಿನಲ್ಲಿ ವಾಸಿಸುವ ಎಲ್ಲ ಜನರನ್ನು ಕುಟುಂಬ ಸದಸ್ಯರಂತೆ ಪರಿಗಣಿಸುವ ಏಕೈಕ ದೇಶ ಭಾರತ ಎಂಬುದನ್ನು ಒಬಾಮ ಅವರು ಮರೆಯಬಾರದು. ಅವರು ಎಷ್ಟು ಮುಸ್ಲಿಂ ರಾಷ್ಟ್ರಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಅವರು ಸ್ವತಃ ಯೋಚಿಸಬೇಕು ಎಂದು ಜಮ್ಮುವಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಸಚಿವರು ಹೇಳಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಬಾಮ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ಸಿಂಗ್ ಅವರು ಈ ಹೇಳಿಕೆ ನೀಡಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಒ ಬಾಮ ಅಧ್ಯಕ್ಷರಾಗಿದ್ದಾಗ ಆರು ಮುಸ್ಲಿಂ ಪ್ರಾಬಲ್ಯದ ದೇಶಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿತ್ತು. 26,000 ಕ್ಕೂ ಹೆಚ್ಚು ಬಾಂಬ್‌ಗಳನ್ನು ಹಾಕಲಾಗಿದೆ. ಜನರು ಅವರ ಮಾತುಗಳನ್ನು ಹೇಗೆ ನಂಬುತ್ತಾರೆ? ಎಂದು ಕೇಳಿದ್ದಾರೆ.
ಸಿಎನ್‌ಎನ್‌ಗೆ ನೀಡಿದ ಸಂದರ್ಶನದಲ್ಲಿ, ಅಮೆರಿಕದ ಮಾಜಿ ಅಧ್ಯಕ್ಷರು ಭಾರತದಲ್ಲಿನ ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯ ಬಗ್ಗೆ ಮಾತನಾಡಿದ್ದರು. ಭಾರತ ಸರ್ಕಾರವು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ಭಾರತ ಪ್ರತ್ಯೇಕವಾಗಿ ಉಳಿಯುವ ಅಪಾಯವಿದೆ ಎಂದಿದ್ದರು ಅವರು.
#WATCH | Defence Minister Rajnath Singh speaks on former US President Barack Obama’s remarks about the rights of Indian Muslims
“Obama ji should not forget that India is the only country which considers all the people living in the world as family members… He should also think… pic.twitter.com/k7Swn7HpW1
— ANI (@ANI) June 26, 2023
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿರುವಾಗಲೇ ಒಬಾಮ ಈ ಹೇಳಿಕೆ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರೆ, ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ರಕ್ಷಣೆಯನ್ನು ಉಲ್ಲೇಖಿಸುವುದು ಯೋಗ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: 15ಕಿಮೀ ಟ್ರಾಫಿಕ್ ಜಾಮ್, ಹೋಟೆಲ್ ಕೊಠಡಿಗಳಿಲ್ಲ: ಹಿಮಾಚಲ ಪ್ರದೇಶದಲ್ಲಿ ಭೂಕುಸಿತದಿಂದಾಗಿ ಕಂಗೆಟ್ಟ ಪ್ರವಾಸಿಗಳು
ಒಬಾಮ ಅವರ ಹೇಳಿಕೆಯು ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದು, ಬಿಜೆಪಿಯು ಅಮೆರಿಕದ ಮಾಜಿ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿತ್ತು. ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಶರ್ಮಾ ಅವರು ಭಾರತದಲ್ಲಿಯೇ ಅನೇಕ ಹುಸೇನ್ ಒಬಾಮ ಇದ್ದಾರೆ. ವಾಷಿಂಗ್ಟನ್‌ಗೆ ಹೋಗುವುದನ್ನು ಪರಿಗಣಿಸುವ ಮೊದಲು ನಾವು ಅವರ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು. ಅಸ್ಸಾಂ ಪೊಲೀಸರು ನಮ್ಮ ಆದ್ಯತೆಗಳ ಪ್ರಕಾರ ಕಾರ್ಯನಿರ್ವಹಿಸುತ್ತಾರೆ ಎಂದು ಬಿಜೆಪಿ ನಾಯಕ ಟ್ವೀಟ್ ಮಾಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:31 pm, Mon, 26 June 23