ಬಿಜೆಪಿ ಸಂಸ್ಥಾಪನಾ ದಿನದಂದು ಭಾರತದಾದ್ಯಂತ 10 ಲಕ್ಷ ಸ್ಥಳಗಳಲ್ಲಿ ಪ್ರಧಾನಿ ಮೋದಿ ಭಾಷಣ ಪ್ರದರ್ಶನ

|

Updated on: Apr 03, 2023 | 10:34 PM

ಏಪ್ರಿಲ್ 6 ರಿಂದ ಏಪ್ರಿಲ್ 14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದವರೆಗೆ ಒಂದು ವಾರದ ಸಾಮಾಜಿಕ ಸಾಮರಸ್ಯ ಅಭಿಯಾನವನ್ನು ಬಿಜೆಪಿ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸಂಸ್ಥಾಪನಾ ದಿನದಂದು ಭಾರತದಾದ್ಯಂತ 10 ಲಕ್ಷ ಸ್ಥಳಗಳಲ್ಲಿ ಪ್ರಧಾನಿ ಮೋದಿ ಭಾಷಣ ಪ್ರದರ್ಶನ
ನರೇಂದ್ರ ಮೋದಿ
Follow us on

ಬಿಜೆಪಿಯ (BJP) 43 ನೇ ಸಂಸ್ಥಾಪನಾ ದಿನವಾದ (foundation day)ಏಪ್ರಿಲ್ 6 ರಂದು ದೇಶಾದ್ಯಂತ 10 ಲಕ್ಷ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಾಷಣ ಪ್ರದರ್ಶನವಾಗಲಿದೆ. ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನವಾಗಿದ್ದು, ಇದಕ್ಕಾಗಿ ಬಿಜೆಪಿ ಭಾರಿ ಸಿದ್ಧತೆ ನಡೆಸುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಇದಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿವೆ. ಇದೀಗ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಪ್ರಧಾನಿ ಭಾಷಣವನ್ನು ದೇಶಾದ್ಯಂತ ಪ್ರದರ್ಶಿಸಲು ಸಿದ್ಧತೆ ನಡೆದಿದೆ.

ದೆಹಲಿಯಲ್ಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಬೆಳಗ್ಗೆ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೇಶಾದ್ಯಂತ ಬಿಜೆಪಿ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ನಡೆಯಲಿದೆ. ಪ್ರಧಾನಿ ಮೋದಿಯವರ ಭಾಷಣ ಕೇಳಲು ಬಿಜೆಪಿ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಸೇರಲಿದ್ದಾರೆ.

ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರಿಗೆ ಪತ್ರವನ್ನೂ ನೀಡಿದೆ ಎಂದು ಬಿಜೆಪಿ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿNMACC launch: ಭಾರತೀಯ ಕಲಾ ಪ್ರಕಾರಗಳನ್ನು ಉತ್ತೇಜಿಸುವ ಪ್ರಯತ್ನಗಳಿಗಾಗಿ ನೀತಾ ಅಂಬಾನಿಯವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಏಪ್ರಿಲ್ 6 ರಿಂದ ಏಪ್ರಿಲ್ 14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದವರೆಗೆ ಒಂದು ವಾರದ ಸಾಮಾಜಿಕ ಸಾಮರಸ್ಯ ಅಭಿಯಾನವನ್ನು ಪಕ್ಷವು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ