ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ರಾಹುಲ್ ಗಾಂಧಿಗೆ ಇಡಿ (ED) ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನಿನ್ನೆ ಇಡಿ ಕಚೇರಿಗಳ ಎದುರು ದೇಶಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಸೋಮವಾರ ದೆಹಲಿಯ ಜಾರಿ ನಿರ್ದೇಶನಾಲಯದ ಹೊರಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದಾಗ ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ಬಂಧನದಿಂದ ಪಾರಾಗಲು ದೆಹಲಿ ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾರೆ.
ಇಡಿ ಸಮನ್ಸ್ ಹಿನ್ನೆಲೆಯಲ್ಲಿ ರಾಜಕೀಯ ಶಕ್ತಿ ಪ್ರದರ್ಶನದ ವೇಳೆ ರಾಹುಲ್ ಗಾಂಧಿ ಅವರು ಇಡಿ ಏಜೆನ್ಸಿಯ ಮುಂದೆ ಹಾಜರಾಗುತ್ತಿದ್ದಂತೆ ಕಾಂಗ್ರೆಸ್ ಬೆಂಬಲಿಗರು ಸೋಮವಾರ ದೆಹಲಿಯ ಇಡಿ ಕಚೇರಿಯ ಹೊರಗೆ ಜಮಾಯಿಸಿದ್ದರು. ಆದರೆ ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಶ್ರೀನಿವಾಸ್ ಬಿವಿ ಅವರನ್ನು ಬಂಧಿಸಲು ಹೋದಾಗ, ಯೂತ್ ಕಾಂಗ್ರೆಸ್ ಮುಖಂಡ ಬಿವಿ ಶ್ರೀನಿವಾಸ್ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋಗಿದ್ದಾರೆ.
History tells us nobody ever ran away, tail tucked between legs, when police cracked down on satyagrahis. They faced lathis, bullets and like Veer Savarkar, even jail and kala pani.
cc: @srinivasiyc close aide of National Herald scam accused @RahulGandhi pic.twitter.com/vgu3oKrpqb— Kanchan Gupta ?? (@KanchanGupta) June 13, 2022
ದೆಹಲಿ ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿರುವ ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ ಅವರ ವೀಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ನಿನ್ನೆ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನವನ್ನು ನಡೆಸಿದಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ? ಈ ಕೇಸಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು?
ವೈರಲ್ ಆಗಿರುವ ವಿಡಿಯೋದಲ್ಲಿ ತನ್ನ ಕಾರಿನಿಂದ ಕೆಳಗಿಳಿದ ಬಿ.ವಿ ಶ್ರೀನಿವಾಸ್ ಅವರನ್ನು ಪೊಲೀಸರು ತಡೆದು ನಿಲ್ಲಿಸಿದಾಗ ತಪ್ಪಿಸಿಕೊಂಡು ಓಡಿಹೋಗಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಮತ್ತೊಂದು ವಿಡಿಯೋ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದು, ಆ ದಿನ ನಿಜವಾಗಲೂ ಏನಾಯಿತು ಎಂಬುದನ್ನು ಆ ವಿಡಿಯೋದಲ್ಲಿ ನೋಡಬಹುದು.
“First they ignore you, then they laugh at you, then they fight you, then you win.” – Mahatma Gandhi pic.twitter.com/F4EkN2mbe9
— Srinivas BV (@srinivasiyc) June 13, 2022
ಮತ್ತೊಂದು ವಿಡಿಯೋ ಕ್ಲಿಪ್‌ನಲ್ಲಿ, ದೆಹಲಿ ಬಿಜೆಪಿ ವಕ್ತಾರ ಅಜಯ್ ಸೆಹ್ರಾವತ್ ಅವರು ಟ್ವೀಟ್ ಮಾಡಿದ್ದು, ಕಾಂಗ್ರೆಸ್ ನಾಯಕರು ಪೊಲೀಸರಿಗೆ ಹೆದರುವುದಿಲ್ಲ, ಪೊಲೀಸರ ಎದುರು ಶರಣಾಗುವುದಿಲ್ಲ. ಅವರು ಸುಮ್ಮನೆ ಓಡಿಹೋಗುತ್ತಾರಷ್ಟೆ ಎಂದು ಲೇವಡಿ ಮಾಡಿ ಟ್ವೀಟ್ ಮಾಡಿದ್ದಾರೆ.
दम है कितना दमन में तेरे, देख लिया है देखेंगे,
जगह है कितनी जेल में तेरे, देख लिया है देखेंगे। pic.twitter.com/Sb2jRdIsKs— Indian Youth Congress (@IYC) June 13, 2022
ನಿನ್ನೆ ಕೆಸಿ ವೇಣುಗೋಪಾಲ್, ಸಿಎಂ ಅಶೋಕ್ ಗೆಹ್ಲೋಟ್ ಸೇರಿದಂತೆ ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಲವಂತವಾಗಿ ಹಿಡಿದು ಬಸ್‌ಗಳಿಗೆ ತುಂಬಿಸುತ್ತಿರುವ ವಿಡಿಯೋ ಕೂಡ ವೈರಲ್ ಆಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:13 pm, Tue, 14 June 22