ಕಟ್ಟಡ ನೆಲಸಮ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶಕ್ಕೆ ಸುಪ್ರೀಂಕೋರ್ಟ್ ನೋಟಿಸ್

“ಎಲ್ಲವೂ ನ್ಯಾಯಯುತವಾಗಿರಬೇಕು. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ, ”ಎಂದು ನ್ಯಾಯಪೀಠ ಹೇಳಿದೆ

ಕಟ್ಟಡ ನೆಲಸಮ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 16, 2022 | 3:38 PM

“ಎಲ್ಲವೂ ನ್ಯಾಯಯುತವಾಗಿರಬೇಕು” ಮತ್ತು ಅಧಿಕಾರಿಗಳು ಕಾನೂನಿನಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು  ಸುಪ್ರೀಂಕೋರ್ಟ್ (Supreme Court) ಹೇಳಿದೆ. ಗುರುವಾರ ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ವಾರ ಹಿಂಸಾಚಾರದಲ್ಲಿನ ಆರೋಪಿಗಳ ಮನೆಗಳನ್ನು ಕಾನೂನುಬಾಹಿರವಾಗಿ ಕೆಡವಲಾಗಿದೆ  ಎಂದು ಆರೋಪಿಸಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಉತ್ತರ ಪ್ರದೇಶ (Uttar Pradesh) ಸರ್ಕಾರ ಮತ್ತು ಅದರ ಅಧಿಕಾರಿಗಳಿಗೆ  ಮೂರು ದಿನಗಳ ಕಾಲಾವಕಾಶ ನೀಡಿದೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಯಲ್ಲಿದೆ ಎಂಬ ಭಾವನೆ ನಾಗರಿಕರಲ್ಲಿ ಇರಬೇಕು ಎಂದು ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿಕ್ರಮ್ ನಾಥ್ ಎಂದು ಹೇಳಿದ ರಜಾಕಾಲದ ಪೀಠವು ಮುಂದಿನ ಮಂಗಳವಾರಕ್ಕೆ ವಿಚಾರಣೆಗೆ ಮುಂದೂಡಿದೆ. “ಎಲ್ಲವೂ ನ್ಯಾಯಯುತವಾಗಿರಬೇಕು. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ, ”ಎಂದು ನ್ಯಾಯಪೀಠ ಹೇಳಿದೆ. ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಕಾನ್ಪುರ ಮತ್ತು ಪ್ರಯಾಗ್‌ರಾಜ್ ನಾಗರಿಕ ಅಧಿಕಾರಿಗಳನ್ನು ಪ್ರತಿನಿಧಿಸುವ ಹಿರಿಯ ವಕೀಲ ಹರೀಶ್ ಸಾಳ್ವೆ, ಕಾನೂನು ಪ್ರಕ್ರಿಯೆಯನ್ನು ಅನುಸರಿಸಲಾಗಿದೆ. 2020 ರ ಆಗಸ್ಟ್‌ನಲ್ಲಿ ನೀಡಿದ ನೋಟಿಸ್ ಆಧಾರದ ಮೇಲೆ ನೆಲಸಮ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಕ್ರಮದಿಂದ ನೊಂದ ಕಕ್ಷಿದಾರರು ಯಾರೂ ನ್ಯಾಯಾಲಯದ ಮುಂದೆ ಹಾಜರಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ. ಮುಸ್ಲಿಂ ಸಂಘಟನೆಯಾದ ಜಮಿಯತ್ ಉಲಾಮಾ-ಇ-ಹಿಂದ್ ಯಾವುದೇ ರೀತಿಯಲ್ಲಿ ಮನೆಗಳನ್ನು ನೆಲಸಮ ಮಾಡಬಾರದು ಎಂಬ ಸಾರ್ವತ್ರಿಕ ಆದೇಶವನ್ನು ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದೆ. ಜಮಿಯತ್ ಉಲಮಾ-ಇ-ಹಿಂದ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಸಿ ಯು ಸಿಂಗ್, ಹುಝೆಫಾ ಅಹ್ಮದಿ ಮತ್ತು ನಿತ್ಯಾ ರಾಮಕೃಷ್ಣನ್ ಅವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಸೇರಿದಂತೆ ಅತ್ಯುನ್ನತ ಸಾಂವಿಧಾನಿಕ ಅಧಿಕಾರಿಗಳು ಹೇಳಿಕೆಗಳನ್ನು ನೀಡುತ್ತಿದ್ದು ಆಪಾದಿತ ಗಲಭೆ ಆರೋಪಿಗಳು ತಮ್ಮ ಮನೆಗಳನ್ನು ಖಾಲಿ ಮಾಡಲು ಅವಕಾಶ ನೀಡದೆ ಕಟ್ಟಡಗಳನ್ನು ಕೆಡವುತ್ತಿದ್ದಾರೆ ಎಂದಿದ್ದಾರೆ.

ರಾಜ್ಯದಲ್ಲಿ ಇತ್ತೀಚಿನ ಹಿಂಸಾಚಾರದ ಆರೋಪಿಗಳ ಆಸ್ತಿಗಳನ್ನು ಇನ್ನು ಮುಂದೆ ಧ್ವಂಸಗೊಳಿಸದಂತೆ ಖಚಿತಪಡಿಸಿಕೊಳ್ಳಲು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಮುಸ್ಲಿಂ ಸಂಸ್ಥೆ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ
Image
ಬಿಜೆಪಿಯ ‘ಬುಲ್ಡೋಜರ್’ ತಡೆಯುವ ಶಕ್ತಿ ಯಾರಿಗಿದೆ?: ಅಖಿಲೇಶ್ ಯಾದವ್
Image
Viral Photo : ಮುಸ್ಲಿಂ ಯುವಕನ ಎದೆಯ ಮೇಲೆ ಸಿಎಂ ಯೋಗಿ ಟ್ಯಾಟೂ! ಯೋಗಿ ಬಗ್ಗೆ ಯುವಕ ಹೇಳಿದ್ದೇನು ಗೊತ್ತಾ?
Image
ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಬುರ್ಖಾಧಾರಿ ಮಹಿಳೆ, ಎಚ್ಚರಿಸಿದ ಮಕ್ಕಳು, ತಪ್ಪಿದ ಅನಾಹುತ!

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:36 pm, Thu, 16 June 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ