AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Firing at Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ, ಕರ್ತವ್ಯನಿರತ ಎಸ್​ಎಸ್​ಎಫ್ ಯೋಧ ಸಾವು

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಆ ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ.

Firing at Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ, ಕರ್ತವ್ಯನಿರತ ಎಸ್​ಎಸ್​ಎಫ್ ಯೋಧ ಸಾವು
ರಾಮ ಮಂದಿರ
ನಯನಾ ರಾಜೀವ್
|

Updated on:Jun 19, 2024 | 10:11 AM

Share

ಉತ್ತರ ಪ್ರದೇಶದ ಅಯೋಧ್ಯೆ(Ayodhya) ಯಲ್ಲಿ ರಾಮ ಮಂದಿರ(Ram Mandir)ದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಆ ಸೈನಿಕರ ಹೆಸರು ಶತ್ರುಘ್ನ ವಿಶ್ವಕರ್ಮ.

25 ವರ್ಷದ ಶತ್ರುಘ್ನ ಅಂಬೇಡ್ಕರ್ ನಗರದ ನಿವಾಸಿ, ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋದ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಐಜಿ ಮತ್ತು ಎಸ್‌ಪಿ ಆಗಮಿಸಿದರು. ಅವರೇ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ. ಶತ್ರುಘ್ನ ವಿಶ್ವಕರ್ಮ 2019 ರ ಬ್ಯಾಚ್‌ನವರು. ಅವರು ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆಯ ಕಾಜಪುರ ಗ್ರಾಮದ ನಿವಾಸಿಯಾಗಿದ್ದರು. SSF ನಲ್ಲಿ ಪೋಸ್ಟ್ ಮಾಡಲಾಗಿದೆ.

ಮತ್ತಷ್ಟು ಓದಿ: ಅಯೋಧ್ಯೆ ರಾಮಮಂದಿರ: ಆಯುಧಗಳ ಸ್ವಚ್ಛಗೊಳಿಸುತ್ತಿರುವಾಗ ಪ್ರಮಾದ, ಎಕೆ-47ನಿಂದ ಗುಂಡು ಹಾರಿಸಿಕೊಂಡ ಕಮಾಂಡರ್

ದೇವಸ್ಥಾನದ ಭದ್ರತೆಗಾಗಿ ಯೋಗಿ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಎಸ್‌ಎಸ್‌ಎಫ್ ಪಡೆಯನ್ನು ರಚಿಸಿತ್ತು. ಘಟನೆಗೂ ಮುನ್ನ ಶತ್ರುಘ್ನ ಮೊಬೈಲ್ ನೋಡುತ್ತಿದ್ದ ಎಂದು ಮೃತ ಯೋಧನ ಸಹೋದ್ಯೋಗಿಗಳು ತಿಳಿಸಿದ್ದಾರೆ.

ಅವರು ಕೆಲವು ದಿನಗಳಿಂದ ಯಾವುದೋ ಚಿಂತೆಯಲ್ಲಿದ್ದರು ಎಂಬುದಾಗಿ ತಿಳಿಸಿದ್ದಾರೆ, ಪೊಲೀಸರು ಅವರ ಮೊಬೈಲ್ ಅನ್ನು ಕೂಡ ವಿಚಾರಣೆಗೆ ಕಳುಹಿಸಿದ್ದಾರೆ. ಮೃತ ಯೋಧನ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ತಲುಪಿದ್ದಾರೆ.

ಮೂರು ತಿಂಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು ಮೂರು ತಿಂಗಳ ಹಿಂದೆ ಯೋಧರೊಬ್ಬರಿಗೆ ಗುಂಡು ತಗುಲಿತ್ತು, ಯೋಧ ರೈಫಲ್ ಸ್ವಚ್ಛಗೊಳಿಸುತ್ತಿದ್ದಾಗ ರೈಫಲ್​ನಿಂದ ತಪ್ಪಾಗಿ ಅವರೇ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:00 am, Wed, 19 June 24

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ