Firing at Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ, ಕರ್ತವ್ಯನಿರತ ಎಸ್​ಎಸ್​ಎಫ್ ಯೋಧ ಸಾವು

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಆ ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ.

Firing at Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ, ಕರ್ತವ್ಯನಿರತ ಎಸ್​ಎಸ್​ಎಫ್ ಯೋಧ ಸಾವು
ರಾಮ ಮಂದಿರ

Updated on: Jun 19, 2024 | 10:11 AM

ಉತ್ತರ ಪ್ರದೇಶದ ಅಯೋಧ್ಯೆ(Ayodhya) ಯಲ್ಲಿ ರಾಮ ಮಂದಿರ(Ram Mandir)ದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಆ ಸೈನಿಕರ ಹೆಸರು ಶತ್ರುಘ್ನ ವಿಶ್ವಕರ್ಮ.

25 ವರ್ಷದ ಶತ್ರುಘ್ನ ಅಂಬೇಡ್ಕರ್ ನಗರದ ನಿವಾಸಿ, ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋದ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಐಜಿ ಮತ್ತು ಎಸ್‌ಪಿ ಆಗಮಿಸಿದರು. ಅವರೇ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ. ಶತ್ರುಘ್ನ ವಿಶ್ವಕರ್ಮ 2019 ರ ಬ್ಯಾಚ್‌ನವರು. ಅವರು ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆಯ ಕಾಜಪುರ ಗ್ರಾಮದ ನಿವಾಸಿಯಾಗಿದ್ದರು. SSF ನಲ್ಲಿ ಪೋಸ್ಟ್ ಮಾಡಲಾಗಿದೆ.

ಮತ್ತಷ್ಟು ಓದಿ: ಅಯೋಧ್ಯೆ ರಾಮಮಂದಿರ: ಆಯುಧಗಳ ಸ್ವಚ್ಛಗೊಳಿಸುತ್ತಿರುವಾಗ ಪ್ರಮಾದ, ಎಕೆ-47ನಿಂದ ಗುಂಡು ಹಾರಿಸಿಕೊಂಡ ಕಮಾಂಡರ್

ದೇವಸ್ಥಾನದ ಭದ್ರತೆಗಾಗಿ ಯೋಗಿ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಎಸ್‌ಎಸ್‌ಎಫ್ ಪಡೆಯನ್ನು ರಚಿಸಿತ್ತು.
ಘಟನೆಗೂ ಮುನ್ನ ಶತ್ರುಘ್ನ ಮೊಬೈಲ್ ನೋಡುತ್ತಿದ್ದ ಎಂದು ಮೃತ ಯೋಧನ ಸಹೋದ್ಯೋಗಿಗಳು ತಿಳಿಸಿದ್ದಾರೆ.

ಅವರು ಕೆಲವು ದಿನಗಳಿಂದ ಯಾವುದೋ ಚಿಂತೆಯಲ್ಲಿದ್ದರು ಎಂಬುದಾಗಿ ತಿಳಿಸಿದ್ದಾರೆ, ಪೊಲೀಸರು ಅವರ ಮೊಬೈಲ್ ಅನ್ನು ಕೂಡ ವಿಚಾರಣೆಗೆ ಕಳುಹಿಸಿದ್ದಾರೆ. ಮೃತ ಯೋಧನ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ತಲುಪಿದ್ದಾರೆ.

ಮೂರು ತಿಂಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು
ಮೂರು ತಿಂಗಳ ಹಿಂದೆ ಯೋಧರೊಬ್ಬರಿಗೆ ಗುಂಡು ತಗುಲಿತ್ತು, ಯೋಧ ರೈಫಲ್ ಸ್ವಚ್ಛಗೊಳಿಸುತ್ತಿದ್ದಾಗ ರೈಫಲ್​ನಿಂದ ತಪ್ಪಾಗಿ ಅವರೇ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

 

Published On - 10:00 am, Wed, 19 June 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us