ಮಲ್ಲಿಕಾರ್ಜುನ ಖರ್ಗೆ 125 ವರ್ಷ ಬದುಕಲಿ; ರಾಜನಾಥ್ ಸಿಂಗ್ ಪ್ರತಿಕ್ರಿಯೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಕುಸಿದು ಬಿದ್ದಿದ್ದರು. ಸ್ವಲ್ಪ ಹೊತ್ತಿನ ವಿಶ್ರಾಂತಿಯ ಬಳಿಕ ತಮ್ಮ ಆರೋಗ್ಯದ ಬಗ್ಗೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೆ ನಾನು ಸಾಯುವುದಿಲ್ಲ ಎಂದಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್, 'ಖರ್ಗೆ 125 ವರ್ಷ ಬದುಕುತ್ತಾರೆ. ಏಕೆಂದರೆ ಪ್ರಧಾನಿ ಮೋದಿ 125 ವರ್ಷ ಅಧಿಕಾರದಲ್ಲಿ ಇರುತ್ತಾರೆ' ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ 125 ವರ್ಷ ಬದುಕಲಿ; ರಾಜನಾಥ್ ಸಿಂಗ್ ಪ್ರತಿಕ್ರಿಯೆ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
Follow us
|

Updated on: Sep 30, 2024 | 6:39 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ನಾನು ಬದುಕುತ್ತೇನೆ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಅವರು 125 ವರ್ಷ ಬದುಕಲಿ ಮತ್ತು ಪ್ರಧಾನಿ ಮೋದಿ 125 ವರ್ಷಗಳ ಕಾಲ ಪ್ರಧಾನಿಯಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ’ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ನಡೆಯುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಸೆಪ್ಟೆಂಬರ್ 30) ಹೇಳಿಕೆ ನೀಡಿದ್ದು, “ನಾನು ಕಾಂಗ್ರೆಸ್ ಮುಖ್ಯಸ್ಥರು 125 ವರ್ಷಗಳ ಕಾಲ ಬದುಕಲಿ ಮತ್ತು ಪ್ರಧಾನಿ ಮೋದಿ 125 ವರ್ಷಗಳ ಕಾಲ ಅಧಿಕಾರದಲ್ಲಿ ಇರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ.” ಎಂದಿದ್ದಾರೆ.

ಇದನ್ನೂ ಓದಿ: ಎಡವಟ್ಟಾಯ್ತು!; ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ

ಅಕ್ಟೋಬರ್ 5ರಂದು ಒಂದೇ ಹಂತದ ಮತದಾನದ ಮೊದಲು ಹರಿಯಾಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಇಂದು ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಯ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು “ನಾನು ಇಷ್ಟು ಬೇಗ ಸಾಯುವುದಿಲ್ಲ” ಮತ್ತು “ಪ್ರಧಾನಿ ಅಧಿಕಾರದಲ್ಲಿರುವ ತನಕ ಜೀವಂತವಾಗಿರುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ದೇವರೇಕೆ ಮೋದಿಗೆ ಅದಾನಿಗೆ ಮಾತ್ರ ಸಹಾಯ ಮಾಡಲು ಹೇಳುತ್ತಿದ್ದಾನೆ?; ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದು ಗಮನಾರ್ಹ. ಕಥುವಾದಲ್ಲಿ ಪ್ರಚಾರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಮಲ್ಲಿಕಾರ್ಜುನ ಖರ್ಗೆ ವೇದಿಕೆಯಲ್ಲಿ ಅನಾರೋಗ್ಯಕ್ಕೆ ಒಳಗಾದರು. ಆಗ ಅವರ ಭದ್ರತಾ ಸಿಬ್ಬಂದಿ ಮತ್ತು ಇತರೆ ಕಾಂಗ್ರೆಸ್ ನಾಯಕರು ಸಹಾಯ ಮಾಡಿದರು. ಸ್ವಲ್ಪ ಹೊತ್ತಿನ ವಿರಾಮದ ನಂತರ ಅವರು ತಮ್ಮ ಭಾಷಣವನ್ನು ಮುಂದುವರೆಸಿದರು ಮತ್ತು ವಿವಾದಾತ್ಮಕ ಹೇಳಿಕೆಯನ್ನು ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ