Sign In

By signing in or creating an account, you agree with Associated Broadcasting Company's Terms & Conditions and Privacy Policy.

Satyendra Jain: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್​ ಜೈಲಿನಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್​ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ.

Satyendra Jain: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​
ಸತ್ಯೇಂದ್ರ ಜೈನ್
Follow us
ನಯನಾ ರಾಜೀವ್
|

Updated on:May 26, 2023 | 11:53 AM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್​ ಜೈಲಿನಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್​(Satyendra Jain)ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಸತ್ಯೇಂದ್ರ ಜೈನ್​ಗೆ ಅನಾರೋಗ್ಯ ಕಾಡುತ್ತಿದ್ದು, ವಾರದಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಗುರುವಾರ ಕೂಡ ಜೈಲಿನ ಬಾತ್​ರೂಮ್​ನಲ್ಲಿ ಕುಸಿದುಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಕಾರಣಗಳಿಂದಾಗಿ ಸುಪ್ರೀಂಕೋರ್ಟ್​ ಜುಲೈ 11ರವರೆಗೆ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಾಲಯವು ಜುಲೈ 10 ರಂದು ಮುಂದಿನ ವಿಚಾರಣೆ ನಡೆಸಲಿದೆ.

ದೆಹಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ಸಚಿವರಾಗಿದ್ದ 57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಮೇ 30ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: Satyendra Jain: ತಿಹಾರ್​ ಜೈಲಿನಲ್ಲಿ ಕುಸಿದುಬಿದ್ದ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಮೇ ತಿಂಗಳಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು.

ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಸತ್ಯೇಂದ್ರ ಜೈನ್ ಅವರು ಷೇರುದಾರರಾಗಿದ್ದ 4 ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Fri, 26 May 23