ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಜಾಮೀನು ಕುರಿತು ಉತ್ತರ ಪ್ರದೇಶದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್

ಆಪಾದಿತ ಹಾಥರಸ್ ಪಿತೂರಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ದಾಖಲಾಗಿರುವ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಈ ತಿಂಗಳ ಆರಂಭದಲ್ಲಿ ತಿರಸ್ಕರಿಸಿತ್ತು.

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಜಾಮೀನು ಕುರಿತು ಉತ್ತರ ಪ್ರದೇಶದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್
ಸಿದ್ದಿಕ್ ಕಪ್ಪನ್
Edited By:

Updated on: Aug 29, 2022 | 3:46 PM

ದೆಹಲಿ: 2020ರ ಅಕ್ಟೋಬರ್‌ನಲ್ಲಿ ದಲಿತ ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಸಾವಿಗೀಡಾದ ಹಾಥರಸ್​​ಗೆ (Hathras) ತೆರಳುತ್ತಿದ್ದಾಗ ಬಂಧಿತರಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ (Siddique Kappan)ಅವರ ಜಾಮೀನು ಅರ್ಜಿಯ ಕುರಿತು ಉತ್ತರ ಪ್ರದೇಶ ಸರ್ಕಾರದಿಂದ ಸುಪ್ರೀಂಕೋರ್ಟ್ ಸೋಮವಾರ ಪ್ರತಿಕ್ರಿಯೆ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 9 ರಂದು ಅಂತಿಮ ವಿಲೇವಾರಿಗೆ ಅರ್ಜಿಯನ್ನು ನಿಗದಿಪಡಿಸಿತು. ಆಪಾದಿತ ಹಾಥರಸ್ ಪಿತೂರಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ದಾಖಲಾಗಿರುವ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಈ ತಿಂಗಳ ಆರಂಭದಲ್ಲಿ ತಿರಸ್ಕರಿಸಿತ್ತು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಪರ್ಕ ಹೊಂದಿರುವ ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಯುಎಪಿಎಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಹಿಂದೆ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆಗಳಿಗೆ ಧನಸಹಾಯ ಮಾಡಿದ ಆರೋಪವನ್ನು ಪಿಎಫ್‌ಐ ಎದುರಿಸಿತ್ತು. ಆರೋಪಿಯು ಹಾಥರಸ್ ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸುತ್ತಿದ್ದ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು.