AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ಆರೋಪದಡಿ ಭಾರತದಲ್ಲಿ 6 ಉಕ್ರೇನಿಯನ್ನರು, ಓರ್ವ ಅಮೆರಿಕನ್ ಬಂಧನ

ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಭಾರತದಲ್ಲಿ ಅಮೆರಿಕನ್ನರು, ಉಕ್ರೇನಿಯನ್ನರು ಸೇರಿದಂತೆ ಒಟ್ಟು 7 ಮಂದಿ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಭಯೋತ್ಪಾದನಾ ಆರೋಪದ ಮೇಲೆ ಭಾರತದಲ್ಲಿ 6 ಉಕ್ರೇನಿಯನ್ನರು, 1 ಅಮೆರಿಕನ್ ಪ್ರಜೆಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಇಂದು ದೆಹಲಿಯ ಪಟಿಯಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಏನಿದು ಪ್ರಕರಣ? ನಡೆದ ಘಟನೆಯೇನು? ಎಂಬ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಭಯೋತ್ಪಾದನೆ ಆರೋಪದಡಿ ಭಾರತದಲ್ಲಿ 6 ಉಕ್ರೇನಿಯನ್ನರು, ಓರ್ವ ಅಮೆರಿಕನ್ ಬಂಧನ
NIA
ಸುಷ್ಮಾ ಚಕ್ರೆ
|

Updated on: Mar 17, 2026 | 10:26 PM

Share

ನವದೆಹಲಿ, ಮಾರ್ಚ್ 17: ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಅಧಿಕಾರಿಗಳು 6 ಉಕ್ರೇನಿಯನ್ನರು ಮತ್ತು ಒಬ್ಬ ಅಮೇರಿಕನ್ ಪ್ರಜೆಯನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ 3 ವಿಮಾನ ನಿಲ್ದಾಣಗಳಲ್ಲಿ 7 ವಿದೇಶಿ ಪ್ರಜೆಗಳನ್ನು UAPA ಅಡಿಯಲ್ಲಿ ಬಂಧಿಸಿತ್ತು. ಆರೋಪಿಗಳು ಪ್ರಸ್ತುತ ಎನ್​ಐಎ ವಶದಲ್ಲಿದ್ದಾರೆ. ಅವರನ್ನು ಇಂದು ಪಟಿಯಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಜನಾಂಗೀಯ ಸಶಸ್ತ್ರ ಗುಂಪುಗಳಿಗೆ ಡ್ರೋನ್ ಯುದ್ಧದಲ್ಲಿ ತರಬೇತಿ ನೀಡುವ ಪಿತೂರಿಯ ತನಿಖೆಗಾಗಿ ದೆಹಲಿ ನ್ಯಾಯಾಲಯವು ಭಯೋತ್ಪಾದನಾ ನಿಗ್ರಹ ಸಂಸ್ಥೆಗೆ 11 ದಿನಗಳ ಕಾಲಾವಕಾಶ ನೀಡಿದ ನಂತರ ಒಬ್ಬ ಅಮೆರಿಕನ್, 6 ಮಂದಿ ಉಕ್ರೇನಿಯನ್ ಪ್ರಜೆಗಳು ಸೇರಿದಂತೆ 7 ವಿದೇಶಿ ಪ್ರಜೆಗಳು NIA ಕಸ್ಟಡಿಯಲ್ಲಿದ್ದಾರೆ. NIA 15 ದಿನಗಳ ಕಾಲಾವಕಾಶ ಕೋರಿತ್ತು. ಆದರೆ ನ್ಯಾಯಾಲಯವು 11 ದಿನಗಳ ಕಾಲಾವಕಾಶ ನೀಡಿತ್ತು. ಆ ಆರೋಪಿಗಳನ್ನು ಮಾರ್ಚ್ 27ರಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು.

ಇದನ್ನೂ ಓದಿ: ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್​ಐಎ ತೀವ್ರ ತನಿಖೆ

ಅಮೆರಿಕನ್ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್ ಅವರನ್ನು ಕೋಲ್ಕತ್ತಾದಿಂದ ಬಂಧಿಸಲಾಯಿತು. ಮೂವರು ಉಕ್ರೇನಿಯನ್ನರನ್ನು ಲಕ್ನೋದಿಂದ ಮತ್ತು ಇತರ ಮೂವರನ್ನು ದೆಹಲಿಯಿಂದ ಬಂಧಿಸಲಾಗಿದೆ. ಅವರನ್ನು ಹುರ್ಬಾ ಪೆಟ್ರೋ, ಸ್ಲೈವಿಯಾಕ್ ತಾರಸ್, ಇವಾನ್ ಸುಕ್ಮನೋವ್ಸ್ಕಿ, ಸ್ಟೆಫನ್‌ಕಿವ್ ಮರಿಯನ್, ಹೊಂಚರುಕ್ ಮ್ಯಾಕ್ಸಿಮ್ ಮತ್ತು ಕಾಮಿನ್ಸ್ಕಿ ವಿಕ್ಟರ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಪ್ರತಿ 48 ಗಂಟೆಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಒಂದು ದಿನ ಬಿಟ್ಟು ಮತ್ತೊಂದು ದಿನ 20 ನಿಮಿಷಗಳ ಕಾಲ ವಕೀಲರು ಅಥವಾ ಸಂಬಂಧಿಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸಲು ಅವರಿಗೆ ಅವಕಾಶ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ