ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಭಾರೀ ಬೆಂಕಿಗೆ ಇಬ್ಬರು ಸಾವು, 17 ಮಂದಿಗೆ ಗಾಯ
ಮುಂಡೆಗಾಂವ್ ಗ್ರಾಮದ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆಗೆ ಭಾರಿ ಬಾಯ್ಲರ್ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಡೇಗಾಂವ್ ನಾಸಿಕ್‌ನಿಂದ ಸುಮಾರು 30 ಕಿಮೀ ಮತ್ತು ಮುಂಬೈನಿಂದ 130 ಕಿಮೀ ದೂರದಲ್ಲಿದೆ.
ನಾಸಿಕ್: ಮಹಾರಾಷ್ಟ್ರದ (Maharashtra) ನಾಸಿಕ್ (Nashik) ಜಿಲ್ಲೆಯಲ್ಲಿ ಭಾನುವಾರ ರಾಸಾಯನಿಕ ಕಂಪನಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಬೆಂಕಿ ಹೊತ್ತಿ ಉರಿದಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಡೆಗಾಂವ್ ಗ್ರಾಮದ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆಗೆ ಭಾರಿ ಬಾಯ್ಲರ್ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಂದಾಲ್ ಕಂಪನಿಗೆ ಸೇರಿದ ಪಾಲಿ ಫಿಲ್ಮ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಮುಂಡೆಗಾಂವ್ ನಾಸಿಕ್‌ನಿಂದ ಸುಮಾರು 30 ಕಿಮೀ ಮತ್ತು ಮುಂಬೈನಿಂದ 130 ಕಿಮೀ ದೂರದಲ್ಲಿದೆ. ಅಗ್ನಿಶಾಮಕ ವಾಹನಗಳು, ಪೊಲೀಸರು ಮತ್ತು ವಿಪತ್ತು ನಿರ್ವಹಣೆ ತಂಡಗಳು ಸ್ಥಳಕ್ಕೆ ಧಾವಿಸಿವೆ. ಸ್ಫೋಟವು ಬೆಂಕಿಗೆ ಕಾರಣವಾಯಿತು. ಘಟನೆಯಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.. ಗಾಯಗೊಂಡ 14 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ” ಎಂದು ವಿಭಾಗೀಯ ಕಂದಾಯ ಆಯುಕ್ತ ರಾಧಾಕೃಷ್ಣ ಗಾಮೆ ಹೇಳಿದ್ದಾರೆ.
ಸಾಮಾನ್ಯವಾಗಿ 20ರಿಂದ 25 ಮಂದಿ ಸ್ಥಾವರದಲ್ಲಿ ಕೆಲಸ ಮಾಡುತ್ತಾರೆ. ಆದರೆ, ಹೊಸ ವರ್ಷದ ಮೊದಲ ದಿನವಾದ್ದರಿಂದ ಭಾನುವಾರ ಈ ಸಂಖ್ಯೆ ಕಡಿಮೆಯಾಗಿತ್ತು. ಆವರಣದಲ್ಲಿ ಬೃಹತ್ ಹುಲ್ಲು ಬೆಳೆದು ಬೆಂಕಿ ಹೊತ್ತಿಕೊಳ್ಳುವಂಥಾ ವಸ್ತುಗಳು ಎಲ್ಲೆಂದರಲ್ಲಿ ಬಿದ್ದಿರುವುದರಿಂದ ನಮ್ಮ ಮೊದಲ ಗುರಿ ಬೆಂಕಿಯನ್ನು ನಿಯಂತ್ರಿಸುವುದಾಗಿದೆ. ಬೆಂಕಿಯ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಇದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎದು ಗಾಮೆ ಹೇಳಿದ್ದಾರೆ.
Scary Scenes At Mumbai-Nashik Expressway As Massive Fire Breaks Out At Jindal Poly Films Limited Company. ? @WeAreNashik pic.twitter.com/p8JRK14vQD
— Prathamesh Avachare (@onlyprathamesh) January 1, 2023
ಸ್ಫೋಟದ ಭಾರೀ ಸದ್ದು ಹತ್ತಿರದ ಹಳ್ಳಿಗಳಿಗೆ ಕೇಳಿದ್ದು, ಬೆಂಕಿ ಮತ್ತು ಹೊಗೆ ದೂರದಿಂದಲೇ ಕಾಣುತ್ತಿತ್ತು. ಗಾಯಗೊಂಡ 11 ಜನರನ್ನು ನಾಸಿಕ್‌ನ ಸುಯಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.
ಇದು ಸ್ವಯಂಚಾಲಿತ ಸ್ಥಾವರವಾದ್ದರಿಂದ, ಸ್ಫೋಟದ ಸಮಯದಲ್ಲಿ ಹೆಚ್ಚಿನ ಸಿಬ್ಬಂದಿ ಇರಲಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತದೆ. ನಮ್ಮ ಅಧಿಕಾರಿಗಳು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: LPG Price Hike: ಹೊಸ ವರ್ಷದ ಮೊದಲ ದಿನವೇ ಸಿಲಿಂಡರ್ ಬೆಲೆ ಏರಿಕೆಯ ಶಾಕ್, ನಿಮ್ಮ ನಗರದ ದರ ಪರಿಶೀಲಿಸಿ
ಮುಖ್ಯಮಂತ್ರಿ ಶಿಂಧೆ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಬಹುದು ಎಂದು ನಾಸಿಕ್ ಗಾರ್ಡಿಯನ್ ಸಚಿವ ದಾದಾ ಭೂಸೆ ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಮಹಾರಾಷ್ಟ್ರ ಸರ್ಕಾರ, ಗಾಯಗೊಂಡವರ ಚಿಕಿತ್ಸೆಯ ಗಾಯಾಳುಗಳ ಸಂಪೂರ್ಣ ವೆಚ್ಚ ಭರಿಸಲಿದೆ. ಗಾಯಗೊಂಡವರ ಭೇಟಿ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಘಟನೆ ಬಗ್ಗೆ ಉನ್ನತ ತನಿಖೆಗೆ ಆದೇಶಿಸಿದ್ದೇವೆ ಎಂದಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:32 pm, Sun, 1 January 23