‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಕುರಿತು ತೃಣಮೂಲ ಕಾಂಗ್ರೆಸ್​​ನಲ್ಲಿ ಅಸಮಾಧಾನ? ಏನಿದು ಗೊಂದಲ? ಇಲ್ಲಿದೆ ಮಾಹಿತಿ

Mamata Banerjee | Abhishek Banerjee: ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲಗಳು ಹೆಚ್ಚುತ್ತಿವೆ. ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಕುರಿತ ವರದಿ ಇಲ್ಲಿದೆ.

‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಕುರಿತು ತೃಣಮೂಲ ಕಾಂಗ್ರೆಸ್​​ನಲ್ಲಿ ಅಸಮಾಧಾನ? ಏನಿದು ಗೊಂದಲ? ಇಲ್ಲಿದೆ ಮಾಹಿತಿ
ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ
Follow us
TV9 Web
| Updated By: shivaprasad.hs

Updated on: Feb 12, 2022 | 12:13 PM

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಲ್ಲಿನ ಬಿರುಕು ಗಾಢವಾಗುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashanth Kishore) ಅವರ ಐ-ಪಿಎಸಿ (I-PAC) ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ನಡುವಿನ ಅಂತರವೂ ಹೆಚ್ಚುತ್ತಿದೆ. ಇದಕ್ಕೆ ಪೂರಕವಾಗಿ ಬಂಗಾಳ ರಾಜಕೀಯದಲ್ಲಿ ಹಲವು ಘಟನೆಗಳು ಕೆಲವು ದಿನಗಳ ಅಂತರದಲ್ಲಿ ನಡೆದಿದೆ. ಇಂದು (ಫೆಬ್ರವರಿ 12) ನಾಲ್ಕು ಪುರಸಭೆಗಳಿಗೆ ಚುನಾವಣೆ ನಡೆಯುತ್ತಿದೆ. ಆದರೆ ರಾಜ್ಯದ ಗಮನವು ತೃಣಮೂಲ ಕಾಂಗ್ರೆಸ್ ಬೆಳವಣಿಗೆಗಳ ಮೇಲೆ ಕೇಂದ್ರೀಕೃತವಾಗಿದೆ. ಕಾರಣ, ಇಂದು (ಶನಿವಾರ) ಮಮತಾ ಬ್ಯಾನರ್ಜಿ ಹಿರಿಯ ನಾಯಕರೊಂದಿಗೆ ತುರ್ತು ಸಭೆಯನ್ನು ಕರೆದಿದ್ದಾರೆ. ಇದಕ್ಕೆ ಮುಖ್ಯ ಕಾರಣ, ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಸೃಷ್ಟಿಸಲು ಕಾರಣವಾದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’. ಜೂನ್ 5ರಂದು ಪಕ್ಷದಿಂದ ಈ ಘೋಷಣೆ ಸ್ವೀಕೃತವಾಗಿತ್ತು. ಕಳೆದ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಅಭಿಯಾನ ರೂಪದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಪರ-ವಿರೋಧ ಪಕ್ಷದ ವತಿಯಿಂದ ವ್ಯಕ್ತವಾಗಿದೆ. ಈ ಕುರಿತು ನ್ಯೂಸ್ 18 ವರದಿ ಮಾಡಿದ್ದು, ವಿವರ ಇಲ್ಲಿದೆ.

ತೃಣಮೂಲ ಕಾಂಗ್ರೆಸ್ ವರ್ಸಸ್ ಪ್ರಶಾಂತ್ ಕಿಶೋರ್ ಅವರ ಐ-ಪಿಎಸಿ; ಏನಿದು ವಿವಾದ?

ಪ್ರಶಾಂತ್ ಕಿಶೋರ್ ಅವರ ಚುನಾವಣಾ ತಂತ್ರಗಾರಿಕೆ ಸಂಸ್ಥೆ ಹಾಗೂ ತೃಣಮೂಲ ಕಾಂಗ್ರೆಸ್ ಪರಸ್ಪರ ನೇರವಾಗಿಯೇ ಆರೋಪ- ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ನಾಯಕರ ಖಾತೆಯಿಂದ ಹೋಗಿರುವ ಸಂದೇಶಗಳು! ಹೌದು. ಮಮತಾ ಸಂಪುಟದ  ಹಿರಿಯ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಐ-ಪಿಎಸಿ ಮೇಲೆ ನೇರವಾಗಿ ಆರೋಪ ಮಾಡಿದ್ದರು. ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಚಂದ್ರಿಮಾ ಭಟ್ಟಾಚಾರ್ಯ ಅವರ ಖಾತೆಯಿಂದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಸಂಬಂಧಿತ ವಿಚಾರವನ್ನು ಹಂಚಿಕೊಳ್ಳಲಾಗಿತ್ತು. ಇದನ್ನು ತಾವು ಹಂಚಿಕೊಂಡಿಲ್ಲ. ಪ್ರಶಾಂತ್ ಕಿಶೋರ್ ಅವರ ಐ-ಪಿಎಸಿ ಅನುಮತಿಯಿಲ್ಲದೇ ಈ ವಿಚಾರವನ್ನು ಹಂಚಿಕೊಂಡಿದೆ ಎಂದು ಅವರು ಆರೋಪಿಸಿದ್ದರು. ಅಲ್ಲದೇ ಈ ವಿಷಯವನ್ನು ಉನ್ನತ ಮಟ್ಟದಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐ-ಪಿಎಸಿ ತನ್ನ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಿದೆ. ಅದರಲ್ಲಿ, ‘ಐ-ಪಿಎಸಿ ತೃಣಮೂಲಕ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕರ ಯಾವುದೇ ಡಿಜಿಟಲ್ ಖಾತೆಗಳನ್ನು ನಿರ್ವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಅಲ್ಲದೇ, ತೃಣಮೂಲ ಕಾಂಗ್ರೆಸ್ ನಾಯಕರ ಖಾತೆಗಳು ತಪ್ಪಾಗಿ ಬಳಕೆಯಾಗುತ್ತಿವೆ’ ಎಂದು ಅದು ಹೇಳಿದೆ.

ಐ-ಪಿಎಸಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವಿನ ಗೊಂದಲ ಇದೇ ಮೊದಲೇನಲ್ಲ. ಪಕ್ಷದ ಖಾತೆಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಹಠಾತ್ ಅಪ್‌ಲೋಡ್ ಮಾಡುವುದರೊಂದಿಗೆ ಐಪಿಎಸಿ ಮತ್ತು ತೃಣಮೂಲ ಕಾಂಗ್ರೆಸ್ ಪರಸ್ಪರ ಆರೋಪ- ಪ್ರತ್ಯಾರೋಪ ಆರಂಭವಾಗಿತ್ತು. ವಾಸ್ತವವಾಗಿ ಚುನಾವಣಾ ತಂತ್ರಗಾರಿಕೆಯ ಕುರಿತು 2026 ರವರೆಗಿನ ತೃಣಮೂಲ ಕಾಂಗ್ರೆಸ್  IPAC ಜತೆ ಒಪ್ಪಂದ ಮಾಡಿಕೊಂಡಿದೆ. ಕೆಲವು ಮೂಲಗಳ ಪ್ರಕಾರ ಈ ಒಪ್ಪಂದ ಮುಗಿದಿದೆ ಎನ್ನಲಾಗಿದೆ.

ಅಭಿಷೇಕ್ ಬ್ಯಾನರ್ಜಿ ನಿಲುವೇನು?

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಬಗ್ಗೆ ಮೊದಲು ಪ್ರಸ್ತಾಪಿಸಿದ್ದರು. ಜೂನ್ 5 ರಂದು ಅದನ್ನು ಅಂಗೀಕರಿಸಲಾಗಿತ್ತು. ಆದರೆ, ಪ್ರಸ್ತುತ ಪಕ್ಷದ ಬೆಳವಣಿಗೆಗಳ ಬಗ್ಗೆ ಅವರಿಗೆ ಅಸಮಾಧಾನವಿದೆ. ಅವರು ಇಂದಿನ ಸಭೆಯಲ್ಲಿ ಗಟ್ಟಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಸಿದ್ಧಾಂತದ ಪ್ರಕಾರ, ಒಬ್ಬ ವ್ಯಕ್ತಿ ಕೇವಲ ಒಂದು ಹುದ್ದೆಯನ್ನು ಹೊಂದಬಹುದಾಗಿದೆ. ಪ್ರಸ್ತುತ ಈ ವಿಚಾರ ಪಕ್ಷದೊಳಗೆ ವಾಗ್ವಾದಕ್ಕೆ ಕಾರಣವಾಗಿದೆ ಎಂದು ವರದಿಗಳು ಹೇಳಿವೆ. ಟಿಎಂಸಿ ನಾಯಕ ಸೌಗತ ರಾಯ್ ಅವರು ಕಳೆದ ವಾರ ಈ ಸಿದ್ಧಾಂತದ ಪರ ಮಾತನಾಡಿದ್ದಾರೆ..

ವಾಸ್ತವವಾಗಿ, ಪಕ್ಷವು ಕೂಡ ಈ ಘೋಷಣೆಯ ಪ್ರಚಾರವನ್ನು ನಿರಾಕರಿಸಿದೆ. ಸಚಿವ ಫಿರ್ಹಾದ್ ಹಕೀಮ್ ‘‘ಈ ಅಭಿಯಾನವನ್ನು ಪಕ್ಷವು ಅನುಮೋದಿಸಿಲ್ಲ. ಅದಕ್ಕೆ ಇನ್ನೂ ನಾಲ್ಕು ಸಾಲುಗಳಿವೆ. ಈ ಸಿದ್ಧಾಂತವು ಬದಲಾಗಬಹುದು, ಟಿಎಂಸಿ ಹೈಕಮಾಂಡ್ ಅದನ್ನು ಬದಲಾಯಿಸುವ ಅಧಿಕಾರವನ್ನು ಹೊಂದಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಕರ್ನಾಟಕ ಹಿಜಾಬ್​ ವಿವಾದ: ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಭಾರತದ ಗುಪ್ತಚರ ಸಂಸ್ಥೆಗಳು

ಬಾಗಲಕೋಟೆ ಸರ್ಕಾರಿ ಶಾಲೆಯಲ್ಲಿ ನಮಾಜ್ ಮಾಡಿದ ವಿದ್ಯಾರ್ಥಿಗಳು! ವೈರಲ್ ಆದ ವಿಡಿಯೋ ಇಲ್ಲಿದೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್