ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್(Anantnag) ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​(Encounter)ನಲ್ಲಿ ಶುಕ್ರವಾರ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ
ಭಾರತೀಯ ಸೇನೆ-ಸಾಂದರ್ಭಿಕ ಚಿತ್ರImage Credit source: IndiaToday
Follow us
ನಯನಾ ರಾಜೀವ್
|

Updated on:Sep 15, 2023 | 8:03 AM

ಶ್ರೀನಗರ, ಸೆಪ್ಟೆಂಬರ್ 15:   ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್(Anantnag) ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​(Encounter)ನಲ್ಲಿ ಶುಕ್ರವಾರ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಅನಂತ್‌ನಾಗ್‌ನ ಕೋಕರ್‌ನಾಗ್ ಪ್ರದೇಶದಲ್ಲಿ ಅಡಗಿರುವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯ ನಂತರ ಈ ಎನ್‌ಕೌಂಟರ್ ನಡೆದಿದೆ. ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಕಮಾಂಡಿಂಗ್ ಆಫೀಸರ್ (ಕರ್ನಲ್), ಕಂಪನಿಯ ಕಮಾಂಡರ್ (ಮೇಜರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಎಸ್‌ಪಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದರು.

ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ, ಇಂದು ಪ್ರಾಣ ಕಳೆದುಕೊಂಡ ನಾಲ್ಕನೇ ಯೋಧರ ಗುರುತು ಇನ್ನೂ ಬಹಿರಂಗವಾಗಿಲ್ಲ.

ಕರ್ನಲ್ ಮನ್‌ಪ್ರೀತ್ ಸಿಂಗ್ ಮತ್ತು ಮೇಜರ್ ಆಶಿಶ್ ಧೋನ್‌ಚಾಕ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಗ್ಗೆ ಪಾಣಿಪತ್‌ನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು.

ಮತ್ತಷ್ಟು ಓದಿ: ಅನಂತನಾಗ್‌ನಲ್ಲಿ ಯೋಧರ ಮೇಲೆ ದಾಳಿ ಮಾಡಿದ್ದು ಟಿಆರ್​​ಎಫ್ ಉಗ್ರ ಸಂಘಟನೆ; ಇದಕ್ಕೂ ಎಲ್ಇಟಿಗೂ ಏನು ಸಂಬಂಧ?

ಉಪ ಅಧೀಕ್ಷಕ ಹುಮಾಯೂನ್ ಭಟ್ ಅವರ ಅಂತ್ಯಕ್ರಿಯೆ ಗುರುವಾರ ಬದ್ಗಾಮ್‌ನಲ್ಲಿರುವ ಅವರ ನಿವಾಸದಲ್ಲಿ ನೆರವೇರಿತು. ಎನ್‌ಕೌಂಟರ್ ನಂತರ ಭಾರತೀಯ ಸೇನೆ ಗುರುವಾರ ಮೃತದೇಹಗಳನ್ನು ಶ್ರೀನಗರಕ್ಕೆ ರವಾನಿಸಿತ್ತು . ಗುರುವಾರ ಸಂಜೆ ಅವರ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆಯು ಪಡೆಗಳನ್ನು ಮುನ್ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿ ನಡೆಯುವ ಸಂದರ್ಭದಲ್ಲಿ ಅಡಗುತಾಣದಲ್ಲಿ ಭಯೋತ್ಪಾದಕರನ್ನು ಹುಡುಕಲಾಗುತ್ತಿತ್ತು. ತಕ್ಷಣವೇ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಕರ್ನಲ್ ತಕ್ಷಣ ಮೃತಪಟ್ಟರು ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು. ಭಯೋತ್ಪಾದಕರನ್ನು ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ನವರು ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:00 am, Fri, 15 September 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ