One Nation One Election: ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

One Nation One Election: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ರಾಮನಾಥ್​ ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

One Nation One Election: ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ರಾಮನಾಥ್ ಕೋವಿಂದ್ Image Credit source: Hindustan Times
Follow us
ನಯನಾ ರಾಜೀವ್
|

Updated on:Sep 18, 2024 | 3:22 PM

ಒಂದು ರಾಷ್ಟ್ರ, ಒಂದು ಚುನಾವಣೆ(One Nation One Election) ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಪ್ರಸ್ತುತ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ನಂತರ, ಆಡಳಿತಾರೂಢ ಮೈತ್ರಿಕೂಟದಲ್ಲಿನ ಒಗ್ಗಟ್ಟು ಉಳಿದ ಅವಧಿಯಲ್ಲೂ ಉಳಿಯುತ್ತದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:59 pm, Wed, 18 September 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!